ಸಿದ್ದು ಬಣ್ಣ ಬಯಲು ಮಾಡುವೆ: ಬಿಎಸ್‌ವೈ

Team Udayavani, Feb 22, 2020, 3:04 AM IST

ಮೈಸೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರಿಗೆ ಜನ ಬಡಿಗೆ ತೆಗೆದುಕೊಂಡು ಹೊಡೆಯಲಿದ್ದಾರೆ ಎಂಬ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಕಿಡಿಕಾರಿರುವ ಸಿಎಂ ಯಡಿಯೂರಪ್ಪ, ಇನ್ನು ಆರು ತಿಂಗಳು ಕಾಯಲಿ, ಸಿದ್ದರಾಮಯ್ಯ ಅವರ ಬಣ್ಣವನ್ನು ಬಯಲು ಮಾಡುತ್ತೇನೆಂದು ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ನಮ್ಮ ಸರ್ಕಾರ ರಚನೆಯಾಗಿ ಇನ್ನೂ ಏಳು ತಿಂಗಳಾಗಿಲ್ಲ.

ಆಗಲೇ ಪ್ರಶ್ನೆ ಮಾಡುತ್ತಿದ್ದೀರಾ ಎಂದು ಕಿಡಿ ಕಾರಿದರು. ಸಿದ್ದರಾಮಯ್ಯನವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದರು. ಎಚ್‌.ಡಿ.ಕುಮಾರಸ್ವಾಮಿ ಒಂದೂವರೆ ವರ್ಷ ಮುಖ್ಯಮಂತ್ರಿಯಾಗಿದ್ದರು. ನೀವೇನು ಮಾಡಿದ್ರಿ ಎಂಬುದನ್ನು ಒಮ್ಮೆ ಮೆಲುಕು ಹಾಕಿ. ಜನ ಯಾರಿಗೆ ಬಡಿಗೆ ತೆಗೆದುಕೊಂಡು ಹೊಡೆಯುತ್ತಾರೆ ಎಂಬುದು ಗೊತ್ತಾಗುತ್ತದೆ. ಎಲ್ಲವನ್ನೂ ಬಯಲು ಮಾಡಲು ನಾನು ಸಿದ್ಧನಿದ್ದೇನೆ. ಆರು ತಿಂಗಳು ತಾಳ್ಮೆಯಿಂದ ಕಾಯಿರಿ ಎಂದು ತಿರುಗೇಟು ನೀಡಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ