ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ರಕ್ಷಿತಾ ಖಂಡನೆ
Team Udayavani, Nov 12, 2020, 2:45 PM IST
ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯ ಶಾಸಕರಾದ ಸಿದ್ದು ಸವದಿ ಅವರು ಮಹಿಳಾ ಜನಪ್ರತಿನಿಧಿಗಳನ್ನು ನೂಕಿ ಅವಮಾನ ಮಾಡಿರುವ ಘಟನೆಯನ್ನು ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಚಿವ ಸ್ಥಾನಮಾನದ ನಿಗಮ ಮಂಡಳಿ ಅಧ್ಯಕ್ಷರೂ ಆಗಿರುವ ಸವದಿ ಅವರು, ಮಹಿಳಾ ಸದಸ್ಯರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬುದು ತಿಳಿಯಬೇಕು. ತಮ್ಮ ಪಕ್ಷದ ಸದಸ್ಯರು ಬೇರೆ ಪಕ್ಷದ ಕಡೆಗೆ ಹೋಗಿದ್ದರೆ ಅವರಿಗೆ ವಿಪ್ ನೀಡಿ, ಕ್ರಮ ಕೈಗೊಳ್ಳುವ ಅವಕಾಶ ಸಂವಿಧಾನ ಬದ್ಧವಾಗಿ ಇದೆ. ಆದರೆ, ತಾವೇ ಪುರಸಭೆ ಕಚೇರಿಯ ಗೇಟ್ ಮುಂದೆ ನಿಂತು, ಮಹಿಳಾ ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ದೌರ್ಜನ್ಯ ನಡೆಸಿರುವುದು, ಕಾನೂನು ವಿರೋಧಿ ಕಾರ್ಯ ಎಂದು ಹೇಳಿದ್ದಾರೆ.
ಅಲ್ಲದೇ ಈ ಘಟನೆಯನ್ನು ರಾಜ್ಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಮೂವರು ಮಹಿಳಾ ಜನಪ್ರತಿನಿಧಿಗಳಿಗೇ ಈ ರೀತಿಯ ದೌರ್ಜನ್ಯ ಅವಮಾನ ನಡೆದಿದೆ ಅಂದರೆ, ಸಾಮಾನ್ಯ ಮಹಿಳೆಯರ ಪರಿಸ್ಥಿತಿ ಏನು. ಮಹಿಳಾ ಆಯೋಗ ಈ ಘಟನೆಗೆ ಸಂಬಂ ಧಿಸಿದಂತೆ ದೂರು ದಾಖಲಿಸಿಕೊಂಡು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ