ಸರಳವಾಗಿ ಅಂಬೇಡ್ಕರ್ ಜಯಂತಿ ಆಚರಿಸಿ: ಗೋವಿಂದ ಕಾರಜೋಳ ಮನವಿ
Team Udayavani, Apr 12, 2020, 5:11 PM IST
ಬೆಂಗಳೂರು: ಕೋವಿಡ್-19 ವೈರಸ್ ನಿಯಂತ್ರಣಕ್ಕಾಗಿ ರಾಷ್ಟದಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಂವಿಧಾನ ಶಿಲ್ಪಿ , ಭಾರತ ರತ್ನ ಡಾ. ಬಿ. ಆರ್ ಅಂಬೇಡ್ಕರ್ ರವರ 129 ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ ಮನವಿ ಮಾಡಿದ್ದಾರೆ.
ಅಂಬೇಡ್ಕರ್ ದಿನಾಚರಣೆ ಪ್ರಯುಕ್ತ ಏ.14ರ ಬೆಳಿಗ್ಗೆ 10.00 ಗಂಟೆಗೆ ವಿಧಾನಸೌಧದ ಮುಂಭಾಗ ದಲ್ಲಿರುವಅವರ ಪ್ರತಿಮೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಮತ್ತು ಇತರೇ ಗಣ್ಯರು ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಮರ್ಪಿಸಲಿದ್ದಾರೆ.
ಕೊವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ನಿಯಂತ್ರಣ ಗೊಳಿಸಲು ರಾಷ್ಟ್ರದಾದ್ಯಂತ ಲಾಕ್ ಡೌನ್ ಅನುಷ್ಠಾನದಲ್ಲಿದ್ದು, ,ಸೆಕ್ಷನ್ 144 ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು, ಸಂಘಟನೆಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅಂಬೇಡ್ಕರ್ ಜನ್ಮ ದಿನಾಚರಣೆ ಯನ್ನು ತುಂಬಾ ಸರಳವಾಗಿ ಹೆಚ್ಚಿನ ಜನಸಂದಣಿ ಸೇರದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಿಸಬೇಕು ಗೋವಿಂದ ಕಾರಜೋಳ ಅವರು ಮನವಿ ಮಾಡಿದ್ದಾರೆ.