BJP ತೊರೆಯುವುದಿಲ್ಲ ಎಂಬ ಸಂದೇಶ ರವಾನಿಸಿದ ಸೋಮಣ್ಣ, ಆದರೆ…
ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಯೊಳಗೆ ಬಿದ್ದೆ...ಮಾಟ ಮಾಡಿದ್ದು ಯಾರು?
Team Udayavani, Dec 31, 2023, 5:40 PM IST
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎಂಬ ಊಹಾಪೋಹಗಳು ಹರಿದಾಡುತ್ತಿರುವ ವೇಳೆಯಲ್ಲಿ, ಮಾಜಿ ಸಚಿವ ವಿ.ಸೋಮಣ್ಣ ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಬಿಜೆಪಿ ತೊರೆಯುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ನಾಯಕರು ನೀಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸಲು ಸಿದ್ಧ. ‘ಆಂತರಿಕ ಹೊಂದಾಣಿಕೆ’ಯಿಂದ ನಾನು ಸಾಕಷ್ಟು ನೊಂದಿದ್ದೇನೆ.ನನ್ನ ಮೇಲೆ ಪ್ರಹಾರವಾಗಿದೆ. ಯಾರೋ ನನಗೆ ಮಾಟ ಮಾಡಿಸಿರಬಹುದೇನೋ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಯೊಳಗೆ ಬಿದ್ದೆ ಎಂದು ಮತ್ತೊಮ್ಮೆ ಅಸಮಾಧಾನ ಹೊರಹಾಕಿದರು. ಜನವರಿ 7 ಅಥವಾ 8 ರಂದು ದೆಹಲಿಗೆ ತೆರಳಿ ಬಿಜೆಪಿಯ ಹಿರಿಯ ನಾಯಕರ ಬಳಿ ನನ್ನ ‘ಸಂಕಟ’ಗಳನ್ನು ತಿಳಿಸುವುದಾಗಿ ಹೇಳಿದರು. ನನ್ನ ವಿಚಾರದಲ್ಲಿ ಬದಲಾವಣೆಯಾಗಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು.
ಪಕ್ಷದ ವರಿಷ್ಠರು ಏನೇ ನಿರ್ಧಾರ ತೆಗೆದುಕೊಂಡರೂ ನಾನು ಅದನ್ನು ಅನುಸರಿಸುತ್ತೇನೆ, ಆದರೆ ಆಂತರಿಕ ಹೊಂದಾಣಿಕೆಯಿಂದ ನಾನು ಅನುಭವಿಸಿದ ರೀತಿಯಲ್ಲಿ ಯಾರೂ ತೊಂದರೆ ಅನುಭವಿಸಬಾರದು ಎಂದರು.ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಪಕ್ಷವನ್ನು ಸರ್ವೋಚ್ಚ ಸ್ಥಾನದಲ್ಲಿ ನೋಡುತ್ತೇನೆ, ನಾಯಕರ ನಿರ್ದೇಶನಗಳಿಗೆ ಹೆಚ್ಚಿನ ಗೌರವವನ್ನು ಹೊಂದಿದ್ದೇನೆ ಎಂದು ಹೇಳಿ ಪಕ್ಷ ತೊರೆಯುವುದಿಲ್ಲ ಎಂಬ ಸಂದೇಶ ರವಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್
YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ