ಬಿ.ಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು!
Team Udayavani, Jan 28, 2022, 1:56 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವರದಿಗಳು ತಿಳಿಸಿದೆ.
ಬಿಎಸ್ ಯಡಿಯೂರಪ್ಪ ಅವರ ಎರಡನೇ ಪುತ್ರಿ ಪದ್ಮಾವತಿಯವರ ಮಗಳು ಸೌಂದರ್ಯ (30 ವ) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಯಾಗಿದ್ದ ಸೌಂದರ್ಯ ಅವರ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿ ತಿಳಿಸಿದೆ.
ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.