ಐಎಂಎ ವಂಚನೆ ಪ್ರಕರಣ ಸಿಬಿಐಗೆ ವಹಿಸಿ: ಶ್ರೀನಿವಾಸ ಪೂಜಾರಿ

Team Udayavani, Jun 13, 2019, 3:04 AM IST

ಬೆಂಗಳೂರು: ಐಎಂಎ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿದೆಯಾದರೂ ಮುಖ್ಯಮಂತ್ರಿ ಸಹಿತ ಸಂಪುಟದ ಕೆಲವು ಸಚಿವರು ಆ ಸಂಸ್ಥೆಯ ಮಾಲೀಕರ ಜತೆ ಪ್ರತ್ಯಕ್ಷ ಅಥವಾ ಪರೋಕ್ಷ ನಂಟು ಹೊಂದಿರುವ ಆರೋಪ ಇದೆ. ಹೀಗಾಗಿ, ಇದನ್ನು ಸಿಬಿಐ ತನಿಖೆಗೆ ವಹಿಸುವುದೇ ಸೂಕ್ತ ಎಂದು ಹೇಳಿದರು.

ಐಎಂಎ ಸಂಸ್ಥೆ ಮಾಲೀಕ ಮನ್ಸೂರ್‌ ಖಾನ್‌ ಬಂಧನಕ್ಕೆ ಕುಮಾರಸ್ವಾಮಿಯವರಿಗೆ ದಾಕ್ಷಿಣ್ಯ ಅಡ್ಡಿಯಾಗಬಹುದು. ಹೀಗಾಗಿ, ಹೂಡಿಕೆದಾರರ ಹಿತಾಸಕ್ತಿ ಕಾಪಾಡಬೇಕಾದರೆ ತಕ್ಷಣ ಸಿಬಿಐಗೆ ವಹಿಸಬೇಕು. ರಾಜ್ಯ ಸರ್ಕಾರವು ಯಾವುದೇ ಮುಲಾಜು ಇಲ್ಲದೆ ಮನ್ಸೂರ್‌ನನ್ನು ಬಂಧಿಸಿ ಆತನ ಆಸ್ತಿ ಪಾಸ್ತಿ ಜಫ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿಯವರು ಟ್ವೀಟ್‌ ಮೂಲಕ ಕ್ರಮ ಕೈಗೊಳ್ಳುವುದಾಗಿ ಹೂಡಿಕೆದಾರರಿಗೆ ಸಾಂತ್ವನ ಹೇಳಿದರೆ ಪ್ರಯೋಜನವಾಗದು. 56 ಇಂಚು ಇದ್ದರೆ ಸಾಲದು ಮಾನವೀಯ ಅಂತ:ಕರಣ ಬೇಕು ಎಂದು ಹೇಳುವ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೂ ಈ ವಿಚಾರದಲ್ಲಿ ಮೌನ ವಹಿಸಿರುವುದು ಯಾಕೆ ಎಂದ ಪ್ರಶ್ನಿಸಿದರು.

ಕುಮಾರಸ್ವಾಮಿ, ಸಚಿವರಾದ ಜಮೀರ್‌ ಅಹಮದ್‌, ಮಾಜಿ ಸಚಿವ ರೋಷನ್‌ಬೇಗ್‌ ಅವರು ಮನ್ಸೂರ್‌ ಜತೆ ಊಟ ಮಾಡುವ ಫೋಟೋ ಹರಿದಾಡುತ್ತಿದೆ. ವ್ಯಾವಹಾರಿಕ ಸಂಬಂಧ ಇದ್ದ ಬಗ್ಗೆಯೂ ಆರೋಪಗಳು ಕೇಳಿ ಬರುತ್ತಿವೆ. ಇದನ್ನೆಲ್ಲಾ ನೋಡಿದರೆ ಸಮಗ್ರ ತನಿಖೆ ಅಗತ್ಯ. ಅಲ್ಪಸಂಖ್ಯಾತರ ಸಮುದಾಯವೇ ಹೆಚ್ಚು ಹೂಡಿಕೆ ಮಾಡಿದ್ದು ಅವರಿಗೆ ನ್ಯಾಯ ಕೊಡಿಸಲು ಸರ್ಕಾರ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಐಎಂಎ ಹಗರಣದಲ್ಲಿ ಸಿಲುಕಿಕೊಂಡವರ ಪರಿಸ್ಥಿತಿ ಹೀನಾಯವಾಗಿದೆ. ಸರ್ಕಾರ ಬಡ್ಡಿ ದಂಧೆ ನಿಲ್ಲಿಸದ ಹೊರತು ಇಂಥ ಹಗರಣಗಳಿಗೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಜನರ ಹಣ ಲೂಟಿ ಮಾಡುವವರು ಯಾರೇ ಆಗಿದ್ದರೂ ಶಿಕ್ಷೆಯಾಗಬೇಕು. ಅದರಲ್ಲಿ ಸಚಿವರು, ಮುಖ್ಯಮಂತ್ರಿಗಳೇ ಪಾಲ್ಗೊಂಡಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಬೇಕು.
-ಎನ್‌.ಮಹೇಶ್‌, ಬಿಎಸ್ಪಿ ಶಾಸಕ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ