ವದಂತಿ ವಿರುದ್ಧ ಶ್ರೀನಿವಾಸಗೌಡ ಕಿಡಿ
Team Udayavani, Jul 11, 2019, 3:00 AM IST
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದ್ದ ಕೋಲಾರದ ಜೆಡಿಎಸ್ ಶಾಸಕ ಕೆ.ಶ್ರೀನಿವಾಸಗೌಡರು, ದೆಹಲಿಗೆ ತೆರಳಲು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದರಿಂದ ಮುಂಬೈಗೆ ಹೋಗಿದ್ದಾರೆ, ಅತೃಪ್ತರ ತಂಡ ಸೇರಿಕೊಂಡಿದ್ದಾರೆ. ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಜತೆಗಿದ್ದರು ಎಂಬ ವದಂತಿ ಹಬ್ಬಿತ್ತು.
ವಿದ್ಯುನ್ಮಾನ ಮಾಧ್ಯಮಗಳಲ್ಲಿ ಈ ರೀತಿಯ ಸುದ್ದಿ ಬಿತ್ತರವಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಶ್ರೀನಿವಾಸಗೌಡರು, “ನಾನು ದೆಹಲಿಗೆ ತೆರಳುತ್ತಿದ್ದೇನೆ. ಸಹಕಾರ ವಲಯದಲ್ಲಿರುವುದರಿಂದ ಸಭೆಯೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ. ವಿಜಯೇಂದ್ರ ಯಾರು ಎಂಬುದು ನನಗೆ ಗೊತ್ತಿಲ್ಲ, ಅವರ ಮುಖವನ್ನೂ ನೋಡಿಲ್ಲ. ಎಲ್ಲವೂ ಮಾಧ್ಯಮಗಳ ಸೃಷ್ಟಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ