ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಪೂರ್ಣ: ಸಚಿವ ಸುರೇಶ್ ಕುಮಾರ್


Team Udayavani, Jul 14, 2021, 4:53 PM IST

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಪೂರ್ಣ: ಸಚಿವ ಸುರೇಶ್ ಕುಮಾರ್

ಬೆಂಗಳೂರು:  ಜುಲೈ 19 ಮತ್ತು 22ರಂದು  ನಿಗದಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈಗಾಗಲೇ ಸಿದ್ಧತೆಗಳ ಕುರಿತಂತೆ ಪರಿಶೀಲನೆ ನಡೆಸಿದ್ದಾರೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಸಿದ್ಧತೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ದೇಶಕರ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾರ್ಗದರ್ಶನ ನೀಡಿದ ಸಚಿವರು, ಯಾವುದೇ ಒಂದು ಮಗುವಿಗೂ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ಸಲಹೆ ನೀಡಿದರು.

ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಸಿದ್ಧತೆ ಕುರಿತು ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಗಳು ನಡೆದಿವೆ. ಡಿಸಿಗಳ ನೇತೃತ್ವದಲ್ಲಿ  ಸಿಇಒ, ಎಸ್.ಪಿ ಡಿಎಚ್ಒ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆಗಳು ನಡೆದಿದ್ದು, ಪರೀಕ್ಷಾ ಸಿದ್ಧತೆ ಮತ್ತು ಎಸ್ಒಪಿ ಪಾಲನೆ ಕುರಿತಂತೆ ನಿರ್ದೇಶನ ನೀಡಿದ್ದು, ಆಯಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಿದ್ದಾರೆಂದು ಸಚಿವರು ಹೇಳಿದರು.

ಮಕ್ಕಳಿಗೆ ಪರೀಕ್ಷಾಂಗಣ ಸುರಕ್ಷತೆ ಮತ್ತು ಆತ್ಮವಿಶ್ವಾಸದ ಭಾವಗಳನ್ನು ಮೂಡಿಸುವಂತೆ ಕ್ರಮ ವಹಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಈಗಾಗಲೇ ಒಎಂಆರ್ ಶೀಟ್ ಕುರಿತು ಹತ್ತಾರು ಬಾರಿ ತಿಳಿವಳಿಕೆ ಮೂಡಿಸಲಾಗಿದೆ. ಪರೀಕ್ಷಾ ಕೊಠಡಿಯಲ್ಲೂ ಪ್ರತಿ ವಿದ್ಯಾರ್ಥಿಗೂ ಕೊಠಡಿ ಮೇಲ್ವಿಚಾರಕರು ಈ ಕುರಿತು ಸೂಕ್ತ ಮಾರ್ಗದರ್ಶನ ನೀಡಲು ಸೂಚನೆ ನೀಡಲಾಗಿದೆ. ಯಾವುದೇ ರೀತಿಯಲ್ಲೂ ಗೊಂದಲವಾಗದಂತೆ ಗಮನ ಹರಿಸಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಪರೀಕ್ಷೆಗೂ ಎರಡು ದಿನಗಳ ಮೊದಲು ಪರೀಕ್ಷಾ ಪ್ರಕ್ರಿಯೆಗೆ ನೇಮಕವಾಗಿರುವ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್  ಸ್ವಯಂಸೇವಕರು ಪರೀಕ್ಷಾ ಕೇಂದ್ರದಲ್ಲಿ ಅಣಕು ಪರೀಕ್ಷಾ ಪ್ರಕ್ರಿಯೆ ನಡೆಸಲಿದ್ದಾರೆ. ಸ್ಯಾನಿಟೈಸರ್, ಮಾಸ್ಕ್, ಥರ್ಮಲ್ ಸ್ಕ್ಯಾನರ್ ಪೂರೈಕೆ ಸೇರಿದಂತೆ ಎಲ್ಲ ಕೇಂದ್ರಗಳಿಗೆ ಆರೋಗ್ಯ  ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್  ಸ್ವಯಂಸೇವಕರು, ಕೊಠಡಿ ಮೇಲ್ವಿಚಾರಕರು, ಪರೀಕ್ಷಾ ಕೇಂದ್ರದ ಅಧೀಕ್ಷಕರು  ಸೇರಿದಂತೆ ಅಗತ್ಯವಿರುವ ಎಲ್ಲ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಲಾಗಿದ್ದು, ಅವರೆಲ್ಲರಿಗೂ ತಂತಮ್ಮ ಕರ್ತವ್ಯದ ಪಟ್ಟಿಯನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.

ಕಳೆದ ಬಾರಿಗಿಂತ  ಹೆಚ್ಚಿನ ಸುರಕ್ಷಾ ವಾತಾವರಣದಲ್ಲಿ ಪರೀಕ್ಷೆಗಳು ನಡೆಯಲಿವೆ. ಪೋಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಸಂಪರ್ಕದಲ್ಲಿದ್ದು, ಪರೀಕ್ಷೆಗೆ ಸರ್ಕಾರ ಕೈಗೊಂಡಿರುವ ಎಲ್ಲ ಕ್ರಮಗಳನ್ನು ವಿವರಿಸಿದ್ದಾರೆ.   ಪೋಷಕರು ತಮ್ಮ ಮಕ್ಕಳನ್ನು ಧೈರ್ಯವಾಗಿ ಪರೀಕ್ಷೆಗೆ ಕಳಿಸಲು ಉತ್ಸುಕರಾಗಿದ್ದಾರೆಂದು ಸಚಿವರು ತಿಳಿಸಿದರು.  ಈಗಾಗಲೇ ತಾನು ಎಲ್ಲ ಡಿಡಿಪಿಐಗಳೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ್ದೇನೆ. ಎಲ್ಲರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿ ಕೊನೆ ಕ್ಷಣದ ಸೂಚನೆಗಳನ್ನು  ನೀಡಿದ್ದೇನೆ. ಪ್ರತಿಯೊಬ್ಬ ಅಧಿಕಾರಿಗಳು  ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಂಡಿದ್ದಾರೆ. ಯಾವುದೇ ಒಂದು ಮಗುವೂ ಸಹ ವಾಹನ ಸೌಲಭ್ಯವಿಲ್ಲದೇ ಪರೀಕ್ಷೆಗೆ ಗೈರು ಹಾಜರಾಗದಂತೆ ಗಮನಹರಿಸಲು ಕ್ರಮ ವಹಿಸಬೇಕೆಂದು  ಸೂಚನೆಗಳನ್ನು ನೀಡಲಾಗಿದೆ. ಮಕ್ಕಳ ಪರೀಕ್ಷಾ ಪ್ರವೇಶ ಪತ್ರ ಪ್ರದರ್ಶಿಸಿ ಮಕ್ಕಳು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಿ  ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ ಎಂದೂ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಅನೇಕ ಸಂಸ್ಥೆಗಳು, ಆಯಾ ಶಾಸಕರು, ಜನಪ್ರತಿನಿಧಿಗಳು ಆಯಾ ಭಾಗದ ಮಕ್ಕಳಿಗೆ ಪರೀಕ್ಷಾವಧಿ  ನಂತರ ಅಲ್ಲಲ್ಲಿ ನೀರಿನ ಬಾಟಲ್ ಮತ್ತು ಬಿಸ್ಕತ್, ಬ್ರೆಡ್ ಸೇರಿದಂತೆ ಸಿದ್ದಪಡಿಸಿದ ಅಹಾರಗಳಂತಹ  ಲುಘು ಉಪಹಾರ ವ್ಯವಸ್ಥೆ ಸಹ ಮಾಡಿದ್ದು, ಪರೀಕ್ಷೆಗೆ ಎಲ್ಲರ ಸಹಾಯ ಸಹಕಾರದ ಹಸ್ತ ಚಾಚಿದ್ದಾರೆ. ಪರೀಕ್ಷಾ ಕೇಂದ್ರಗಳು ಮಕ್ಕಳ ಸುರಕ್ಷಾ ಕೇಂದ್ರವಾಗಿರಲಿವೆ. ಪರೀಕ್ಷೆಯು ಮಕ್ಕಳಿಗೆ ಸಂಭ್ರಮದ ಹಬ್ಬವಾಗಿರಲಿದೆ. ಪರೀಕ್ಷಾಂಗಣವನ್ನು ಕ್ರೀಡಾಂಗಣವೆಂದು ಭಾವಿಸಿ ಖುಷಿಯ  ವಾತಾವರಣದಲ್ಲಿ ಪರೀಕ್ಷೆ ಬರೆಯಬೇಕೆಂದು  ಸಚಿವರು ಮನವಿ ಮಾಡಿದ್ದಾರೆ.

ಎಸ್ಒಪಿ ಪಾಲನೆಯೊಂದಿಗೆ ಪರೀಕ್ಷೆಗೆ ಮೊದಲು ಮತ್ತು ನಂತರ ಪರೀಕ್ಷಾ ಕೇಂದ್ರದ ಆವರಣ ಮತ್ತು                                                                                 ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲು ಸಂಬಂಧಿಸಿದ ಅಧಿಕಾರಿಗಳು ಆಯಾ                                                                 ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದ್ದಾರೆ. ಡಿಡಿಪಿಐ ಮತ್ತು ಬಿಇಒಗಳು ತಮ್ಮ ವ್ಯಾಪ್ತಿಯ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈಗಾಗಲೇ ಶೇ. 100ರಷ್ಟು ಪರೀಕ್ಷಾ ಸಿಬ್ಬಂದಿ  ಕೋವಿಡ್ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆದವರಷ್ಟೇ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆಂದು ಸಚಿವರು ತಿಳಿಸಿದರು.

ಹಾಲ್ ಟಿಕೆಟ್-ಬಿಇಒಗಳಿಗೆ ಸೂಚನೆ:

ಪೂರ್ಣ ಶುಲ್ಕ ಪಾವತಿಸದೇ ಇರುವುದರಿಂದ ಎಸ್ ಎಸ್ ಎಲ್  ಸಿ ಪರೀಕ್ಷೆಗೆ ಪ್ರವೇಶ  ಪತ್ರ ನೀಡಲು ನಿರಾಕರಿಸಿರುವಂತಹ ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಯಾವುದೇ ರೀತಿಯಲ್ಲೂ ಮಕ್ಕಳಿಗೆ ತೊಂದರೆಯಾಗದಂತೆ ಬಿಇಒಗಳು ಸೂಕ್ತ ಕ್ರಮ ವಹಿಸಲಿದ್ದಾರೆ. ಈ ಕುರಿತು ಯಾವುದೇ ಶಾಲೆಯೂ ಶುಲ್ಕ ಸಂಬಂಧದಲ್ಲಿ ಮಂಡಳಿ ಪರೀಕ್ಷೆಗೆ ಮಕ್ಕಳಿಗೆ ಪ್ರವೇಶ ಪತ್ರ ನಿರಾಕರಿಸದಂತೆ ಪರೀಕ್ಷಾ ಮಂಡಳಿ ಇಂದು  ಅಗತ್ಯ ಸುತ್ತೋಲೆ ಹೊರಡಿಸಲಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

cm-b-bommai

ವೀಕೆಂಡ್ ಕರ್ಫ್ಯೂ: ಎಲ್ಲಾ ಆಯಾಮಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಮಾಡುತ್ತೇವೆಂದ ಸಿಎಂ

amar jawan jyoti

ಶಾಶ್ವತವಾಗಿ ನಂದಲಿದೆ 50 ವರ್ಷಗಳಿಂದ ಬೆಳಗಿದ ಇಂಡಿಯಾ ಗೇಟ್ ಅಮರ್ ಜವಾನ್ ಜ್ಯೋತಿ!

Dulquer Salmaan tests Covid positive

ಮಲಯಾಳಂ ನಟ ದುಲ್ಖರ್ ಸಲ್ಮಾನ್ ಗೆ ಕೋವಿಡ್ ಸೋಂಕು ದೃಢ

thumb 3

2022 ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಭಾರತಕ್ಕೆ ಮೊದಲ ಎದುರಾಳಿ ಪಾಕಿಸ್ಥಾನ!

ಮೂಡಂಬೈಲು ಶಾಲೆಗೆ ವಿಪ್ರೋ ಅರ್ತಿಯನ್‌ ಅವಾರ್ಡ್‌

ಮೂಡಂಬೈಲು ಶಾಲೆಗೆ ವಿಪ್ರೋ ಅರ್ತಿಯನ್‌ ಅವಾರ್ಡ್‌

thumb 2

ಕೋವಿಡ್ ಗಿಂತ ಹೆಚ್ಚು ಬಾಧಿಸುತ್ತಿದೆ ಇನ್ಫುಯೆನ್ಸಾ ಫ್ಲೂ

ವಿಮಾನ ನಿಲ್ದಾಣ ಬಾಂಬ್‌ ಪ್ರಕರಣಕ್ಕೆ  2 ವರ್ಷ:ಆರೋಪಿಯ ವಿಚಾರಣೆ ಬಹುತೇಕ ಪೂರ್ಣ

ವಿಮಾನ ನಿಲ್ದಾಣ ಬಾಂಬ್‌ ಪ್ರಕರಣಕ್ಕೆ 2 ವರ್ಷ !ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cm-b-bommai

ವೀಕೆಂಡ್ ಕರ್ಫ್ಯೂ: ಎಲ್ಲಾ ಆಯಾಮಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಮಾಡುತ್ತೇವೆಂದ ಸಿಎಂ

thumb 2

ಕೋವಿಡ್ ಗಿಂತ ಹೆಚ್ಚು ಬಾಧಿಸುತ್ತಿದೆ ಇನ್ಫುಯೆನ್ಸಾ ಫ್ಲೂ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

2karave

ಪ್ರತ್ಯೇಕ ಕೃಷಿ ಬಜೆಟ್‌ ಮಂಡನೆಗೆ ಜೈ ಕರವೇ ಮನವಿ

cm-b-bommai

ವೀಕೆಂಡ್ ಕರ್ಫ್ಯೂ: ಎಲ್ಲಾ ಆಯಾಮಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಮಾಡುತ್ತೇವೆಂದ ಸಿಎಂ

1PDO

ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿ ಬಿದ್ದ ಪಿಡಿಓ ಬಂಧನ

amar jawan jyoti

ಶಾಶ್ವತವಾಗಿ ನಂದಲಿದೆ 50 ವರ್ಷಗಳಿಂದ ಬೆಳಗಿದ ಇಂಡಿಯಾ ಗೇಟ್ ಅಮರ್ ಜವಾನ್ ಜ್ಯೋತಿ!

Dulquer Salmaan tests Covid positive

ಮಲಯಾಳಂ ನಟ ದುಲ್ಖರ್ ಸಲ್ಮಾನ್ ಗೆ ಕೋವಿಡ್ ಸೋಂಕು ದೃಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.