ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಬೆಸ್ಟ್‌ ಆಫ್ ಲಕ್‌  


Team Udayavani, Mar 25, 2024, 7:10 AM IST

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಬೆಸ್ಟ್‌ ಆಫ್ ಲಕ್‌  

ಬೆಂಗಳೂರು: ವಿದ್ಯಾರ್ಥಿ ಜೀವನದ ಮಹತ್ವದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1 ಸೋಮವಾರದಿಂದ ಆರಂಭಗೊಳ್ಳಲಿದ್ದು ಏ. 6ರವರೆಗೆ ನಡೆಯಲಿದೆ. ಮೊದಲ ದಿನ ಪ್ರಥಮ ಭಾಷೆಯ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30 ರಿಂದ ಪರೀಕ್ಷೆ ಆರಂಭಗೊಳ್ಳಲಿದೆ.

ಈ ಬಾರಿಯ ಪರೀಕ್ಷೆಗೆ 4,41,910 ಬಾಲಕರು ಮತ್ತು 4,28,058 ಬಾಲಕಿಯರು ಸೇರಿ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 8,10,368 ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪರೀಕ್ಷೆ ನಡೆಸುವ ಜವಾಬ್ದಾರಿ ಹೊತ್ತಿದ್ದು ಒಟ್ಟು 2,750 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್‌ ಭದ್ರತೆಯನ್ನು ಒದಗಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್‌ ಫೋನ್‌ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.

ತನ್ಮೂಲಕ ಪರೀಕ್ಷಾ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ಮುಂತಾದ ಅಕ್ರಮ ಚಟುವಟಿಕೆ ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಲಾಗಿದೆ.ನಿರ್ದೇಶಕರು ಮತ್ತು ಸಹ ನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಡಯಟ್‌ ಪ್ರಾಂಶುಪಾಲರನ್ನು ಆಯಾ ಜಿಲ್ಲೆಗೆ ಜಿಲ್ಲಾ ವೀಕ್ಷಕರನ್ನಾಗಿ ನೇಮಿಸಲಾಗಿದೆ. ಡಯಟ್‌ ಉಪನ್ಯಾಸಕರನ್ನು ಪರೀûಾ ಕೇಂದ್ರಗಳಿಗೆ ವಿಚಕ್ಷಣ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಜಿಲ್ಲಾಧಿಕಾರಗಳ ಹಂತದಲ್ಲಿ ವಿಚಕ್ಷಣ ಜಾಗೃತದಳ ನೇಮಿಸಲು ತಿಳಿಸಲಾಗಿದೆ. ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಕನ್ನಡ, ಆಂಗ್ಲ, ಹಿಂದಿ, ತೆಲುಗು, ತಮಿಳು, ಉರ್ದು ಮತ್ತು ಮರಾಠಿ ಸೇರಿ ಒಟ್ಟು 7 ಮಾಧ್ಯಮಗಳಲ್ಲಿ ಪರೀಕ್ಷೆ ನಡೆಯುತ್ತಿದೆ.

ಎಸ್‌ಎಸ್‌ಎಲ್‌ಸಿಯಲ್ಲಿ ಮೊದಲ ಬಾರಿಗೆ ಮೂರು ಅಂತಿಮ ಪರೀಕ್ಷೆ ಬರೆಯುವ ಅವಕಾಶವನ್ನು ನೀಡಲಾಗಿದೆ. ಸೋಮವಾರದಿಂದ ಮೊದಲ ಪರೀಕ್ಷೆ ಆರಂಭಗೊಳ್ಳಲಿದ್ದು ಏ.6ರವರೆಗೆ ನಡೆಯಲಿದೆ.ಏತನ್ಮಧ್ಯೆ ಹೈಕೋರ್ಟ್‌ನ ಅನುಮತಿಯ ಮೇರೆಗೆ ಸೋಮವಾರದಿಂದ 5,8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯು ನಡೆಯಲಿದೆ.

ಸಿಸಿ ಕ್ಯಾಮರಾ ಅಳವಡಿಕೆ
ಎಲ್ಲ 2,750 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ ವಹಿಸಲಾಗಿದ್ದು ಹೆಚ್ಚುವರಿ ನಿಗಾ ಇಡುವ ಉದ್ದೇಶದಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸಿಸಿಟಿವಿ ಕ್ಯಾಮರಾ ಮೂಲಕ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರಗಳು ನಡೆದರೂ ಪತ್ತೆ ಹಚ್ಚಲಾಗುತ್ರದೆ ಎಂದು ಪರೀಕ್ಷಾ ಮಂಡಳಿ ಹೇಳಿದೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.