ಎಸ್‌ಎಸ್ಎಲ್‌ಸಿ ಫಲಿತಾಂಶ : ಗ್ರೇಡಿಂಗ್ ವ್ಯವಸ್ಥೆಯಲ್ಲಿ ಜಿಲ್ಲಾವಾರು ಸ್ಥಾನವಿಲ್ಲ
ಈ ಬಾರಿ 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ! , ಉಡುಪಿಯ ಐವರಿಗೆ 625ಕ್ಕೆ 625
Team Udayavani, May 19, 2022, 5:15 PM IST
ಬೆಂಗಳೂರು: ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆದ ಎಸ್‌ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶದ ಗುರುವಾರ ಪ್ರಕಟವಾಗಿದ್ದು, 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
ಹಿಂದೆ ಶೇಕಡಾವಾರು ಫಲಿತಾಂಶದ ಆಧಾರದ ಮೇಲೆ ಯಾವ ಜಿಲ್ಲೆ ಪ್ರಥಮ , ದ್ವಿತೀಯ ಹೀಗೆ ಕೊನೆಯ ಸ್ಥಾನ ಪಡೆದಿದೆ ಎಂದು ರ್ಧರಿಸಲಾಗುತ್ತಿತ್ತು. ಈಗ ಗ್ರೇಡ್ ವ್ಯವಸ್ಥೆಯಿಂದ ಆ ಪರಿಕಲ್ಪನೆ ಇಲ್ಲವಾಗಿದೆ.
‘ಈ ಬಾರಿಯ ಫಲಿತಾಂಶದಲ್ಲಿ ಉತ್ತೀರ್ಣರಾದವರ ಶೇಕಡವಾರು ಪ್ರಮಾಣ ಕಳೆದ ಹತ್ತು ವರ್ಷಗಳಲ್ಲಿ (2020-21 ಹೊರತುಪಡಿಸಿ) ಅತ್ಯಧಿಕವಾಗಿದ್ದು, ಶೇ. 85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಪೈಕಿ 3,920 ಶಾಲೆಗಳಲ್ಲಿ ಎಸ್ಎಸ್ಎಲ್‌ಸಿ ಫಲಿತಾಂಶ ಶೇ.100ರಷ್ಟು ಬಂದಿದೆ.
‘ಶೂನ್ಯ ಫಲಿತಾಂಶ ಬಂದಿರುವ ಶಾಲೆಗಳು ಹಾಗೂ ಉತ್ತೀರ್ಣ ಪ್ರಮಾಣ ಕಡಿಮೆ ಇರುವ ಶಾಲೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರೋಪಾಯಗಳನ್ನು ಕಂಡು ಹಿಡಿಯಲಾಗುತ್ತದೆ’ ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
‘ರಾಜ್ಯದ 32 ಶೈಕ್ಷಣಿಕ ಜಿಲ್ಲೆಗಳು ‘ಎ’ ದರ್ಜೆಯ (ಶೇ.75-100) ಫಲಿತಾಂಶ ಪಡೆದಿವೆ. ಯಾದಗಿರಿ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಗಳು ‘ಬಿ’ ದರ್ಜೆಯ (ಶೇ.60ರಿಂದ ಶೇ.75ರ ಒಳಗೆ) ಫಲಿತಾಂಶ ಪಡೆದಿವೆ.
ಉಡುಪಿಯ ಐವರಿಗೆ 625ಕ್ಕೆ 625
145 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿದ್ದು ಆ ಪೈಕಿ ಉಡುಪಿ ಜಿಲ್ಲೆಯ ಐವರು ವಿದ್ಯಾರ್ಥಿಗಳು ಸೇರಿದ್ದಾರೆ. ಜಿಲ್ಲೆಯ ಮಲ್ಪೆ ಸರ್ಕಾರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿ ಪುನೀತ್ ನಾಯ್ಕ್, ಉಡುಪಿ ಸರಕಾರಿ ಬಾಲಕಿಯರ ಜ್ಯೂನಿಯರ್ ಕಾಲೇಜ್ ವಿದ್ಯಾರ್ಥಿನಿ ಗಾಯತ್ರಿ, ಕುಂದಾಪುರ ಕಾಳಾವರದ ಸರಕಾರಿ ಪ್ರೌಢ ಶಾಲೆಯ ನಿಶಾ, ಸಿದ್ದಾಪುರ ಸರಕಾರಿ ಪ್ರೌಢ ಶಾಲೆಯ ವೈಷ್ಣವಿ ಶೆಟ್ಟಿ , ಬೈಂದೂರಿನ ಕಿರಿಮಂಜೇಶ್ವರದ ಸಾಂದೀಪನ ಇಂಗ್ಲೀಷ್ ಮಾಧ್ಯಮ ಶಾಲೆಯ ಅಕ್ಷತಾ ಈ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ : ಉಡುಪಿ: ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ವಿದ್ಯಾರ್ಥಿಗೆ 625 ಅಂಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಭಿವೃದ್ಧಿಗಾಗಿ ರಾಜ್ಯ ಇಬ್ಬಾಗವಾಗಲಿ; ಮತ್ತೆ ಪ್ರತ್ಯೇಕ ರಾಜ್ಯದ ಪರ ಕತ್ತಿ ಬ್ಯಾಟಿಂಗ್
ಉದಯಪುರ ಕೊಲೆ ಅಪರಾಧಿಗಳನ್ನು ಗಲ್ಲಿಗೇರಿಸಬೇಕು: ಸಿಎಂ ಬೊಮ್ಮಾಯಿ
ರಾಷ್ಟ್ರೀಯ ಅಂಕಿಅಂಶ ದಿನ: ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಶೇ.10ರಷ್ಟು ಹೆಚ್ಚಳ!
ಸಂಘಟನೆಗಳ ಮೇಲೆ ನಿಗಾ: ಉದಯಪುರ ಘಟನೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈಅಲರ್ಟ್
ಉತ್ತಮ ಕಲಿಕಾ ವಾತಾವರಣ: ಬೆಂಗಳೂರಿಗೆ 114ನೇ ಸ್ಥಾನ
MUST WATCH
ಹೊಸ ಸೇರ್ಪಡೆ
ಅಭಿವೃದ್ಧಿಗಾಗಿ ರಾಜ್ಯ ಇಬ್ಬಾಗವಾಗಲಿ; ಮತ್ತೆ ಪ್ರತ್ಯೇಕ ರಾಜ್ಯದ ಪರ ಕತ್ತಿ ಬ್ಯಾಟಿಂಗ್
ಸರ್ಕಾರ ರಚನೆಗೆ ಸಿದ್ಧತೆ: ಫಡ್ನವೀಸ್ ಮಹಾರಾಷ್ಟ್ರ ಮುಖ್ಯಮಂತ್ರಿ, ಶಿಂಧೆ ಉಪಮುಖ್ಯಮಂತ್ರಿ?
ಹುಣಸೂರು: ಮಹಿಳಾ ಕಾಲೇಜಿಗೆ ತುಳಸಿ ಜ್ಯುವೆಲ್ಲರ್ಸ್ನಿಂದ ಶುದ್ದ ಕುಡಿಯುವ ನೀರಿನ ಘಟಕ ಕೊಡುಗೆ
ಕೋಡಶಿಂಗೆಯಲ್ಲಿ ಸೋಲಾರ್ ಗಾಣ, ಗಿರಣಿ; ಎರಡು ತಿಂಗಳಿಂದ ಪ್ರಾಯೋಗಿಕ ಆರಂಭ
ಉದಯಪುರ ಕೊಲೆ ಅಪರಾಧಿಗಳನ್ನು ಗಲ್ಲಿಗೇರಿಸಬೇಕು: ಸಿಎಂ ಬೊಮ್ಮಾಯಿ