ಮೇ 19ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ
Team Udayavani, May 17, 2022, 10:18 PM IST
ಬೆಂಗಳೂರು: 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವು ಮೇ 19ರಂದು ಪ್ರಕಟವಾಗಲಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಮಧ್ಯಾಹ್ನ 12.30ಕ್ಕೆ ಮಲ್ಲೇಶ್ವರದಲ್ಲಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಬಳಿಕ ವಿದ್ಯಾರ್ಥಿಗಳಿಗೆ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಣಿ ಮಾಡಿರುವ ಮೊಬೈಲ್‌ಗಳಿಗೂ ಫಲಿತಾಂಶದ ಸಂದೇಶ ಬರಲಿದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು http://kseeb.kar.nic.in, http://sslc.karnataka.gov.in, http://karresults.nic.in ವೆಬ್‌ಸೈಟ್‌ಗಳಲ್ಲಿ ವೀಕ್ಷಿಸಬಹುದು.
ಕಳೆದ ಮಾ.28ರಿಂದ ಏ.11ರ ವರೆಗೆ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. 8.73 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 8.53 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿಯವರು ಯಾಕೆ ದಲಿತರನ್ನ ಸಿಎಂ ಮಾಡಲಿಲ್ಲ?: ಎಂ.ಬಿ ಪಾಟೀಲ್
ಕಸದ ವಾಹನದಲ್ಲಿ ಕೆಂಪೇಗೌಡರ ಭಾವಚಿತ್ರ ಮೆರವಣಿಗೆ: ಉಗ್ರ ಹೋರಾಟದ ಎಚ್ಚರಿಕೆ
ಪೌರ ಕಾರ್ಮಿಕರನ್ನು ಖಾಯಂ ಮಾಡಿ ; ಇಲ್ಲದಿದ್ದರೆ ಜುಲೈ 1 ರಿಂದ ಕೆಲಸ ಸ್ಥಗಿತ
ಕೆಂಪೇಗೌಡರ ಆಶಯ ಈಡೇರಿಸುತ್ತಿರುವ ಪ್ರಧಾನಿ ಮೋದಿ: ನಳಿನ್ಕುಮಾರ್ ಕಟೀಲ್
ಸಾಗರ : ಅಗ್ನಿಪಥ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, 50 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ