ರಾಜ್ಯಾದ್ಯಂತ ಆರಂಭವಾದ ಎಸೆಸೆಲ್ಸಿ ಪೂರಕ ಪರೀಕ್ಷೆ: ಮೊದಲ ದಿನ ಯಶಸ್ವಿ
Team Udayavani, Jun 27, 2022, 10:54 PM IST
ಬೆಂಗಳೂರು: ರಾಜ್ಯಾದ್ಯಂತ ಸೋಮವಾರದಿಂದ ಆರಂಭವಾದ ಎಸೆಸೆಲ್ಸಿ ಪೂರಕ ಪರೀಕ್ಷೆಯು ಮೊದಲ ದಿನ ಯಶಸ್ವಿಯಾಗಿ ನಡೆದಿದ್ದು, ಪರೀಕ್ಷೆಗೆ ಶೇ. 84.22ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ರಾಜ್ಯದ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ವಿಜ್ಞಾನ ವಿಷಯದ ಪರೀಕ್ಷೆಗೆ 28,184 ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 14,878 ಖಾಸಗಿ ಅಭ್ಯರ್ಥಿಗಳು, ಒಟ್ಟು 43,062 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 36,265 ಅಭ್ಯರ್ಥಿಗಳು ಹಾಜರಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ 15 ಮಂದಿಗೆ ವಿಶೇಷ ಕೊಠಡಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಮತ್ತು ನಕಲು ನಡೆದಿಲ್ಲ ಎಂದು ಪ್ರೌಢಶಿಕ್ಷಣ ಮಂಡಳಿ ತಿಳಿಸಿದೆ.
ಇದನ್ನೂ ಓದಿ:ಟೆಂಪೋ ಟ್ರಾವೆಲರ್ – ಸರಕಾರಿ ಬಸ್ ನಡುವೆ ಭೀಕರ ರಸ್ತೆ ಅಪಘಾತ : ಓರ್ವ ಸಾವು, ನಾಲ್ವರು ಗಂಭೀರ
ನಾಳೆ(ಜೂ. 28ರಂದು ) ಪ್ರಥಮ ಭಾಷೆ
ಮಂಗಳವಾರ ಪ್ರಥಮ ಭಾಷೆ ಕನ್ನಡ, ತಮಿಳು, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತ ಭಾಷಾ ಪರೀಕ್ಷೆಗಳು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರ್ಸಿಂಗ್ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್
ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್ ಗುಂಡೂರಾವ್
ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯ ಆಗದು
ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ
ಶಾಲೆಗಳಲ್ಲಿ ಗಣೇಶ ಉತ್ಸವ ಬಿಜೆಪಿ ಸರ್ಕಾರ ರೂಪಿಸಿದ್ದಲ್ಲ: ಸಚಿವ ಬಿ.ಸಿ.ನಾಗೇಶ್