ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಸಚಿವ ಸುರೇಶ್ ಕುಮಾರ್ ಸೂಚನೆ

Team Udayavani, May 4, 2020, 4:47 PM IST

ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಸಚಿವ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು: ಕೋವಿಡ್-19 ಲಾಕ್ ಡೌನ್ ನಿಂದ ಸ್ಥಗಿತಗೊಂಡಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸಲು ಅನುವಾಗುವಂತೆ ಎಲ್ಲಾ ಸಿದ್ದತೆಗಳನ್ನು ಈಗಿನಿಂದಲೇ   ಪ್ರಾರಂಭಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೋಮವಾರ ರಾಜ್ಯದ ಎಲ್ಲ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದವನ್ನು ಸಚಿವರು ನಡೆಸಿದರು. ಎಲ್ಲ ಜಿಲ್ಲೆಗಳಿಂದ ಬಂದ ಒಟ್ಟಾಭಿಪ್ರಾಯದಂತೆ ಮಕ್ಕಳು ತಮ್ಮ ಪರೀಕ್ಷಾ ದಿನಾಂಕ ತಿಳಿಯಲು ಉತ್ಸುಕರಾಗಿದ್ದು ಮತ್ತು ತಮ್ಮ ಪರಿಶ್ರಮದ ಆಧಾರದಲ್ಲಿ ಪರೀಕ್ಷಾ ಫಲಿತಾಂಶವನ್ನು ಪಡೆಯಬೇಕೆಂದು ಬಯಸುತ್ತಿರುವ ಹಿನ್ನೆಲೆಯಲ್ಲಿ   ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್-19 ನಂತರದ ಸಾಮಾಜಿಕ ಸ್ಥಿತಿಗತಿಗಳಿಗೆ ಅನುಗುಣವಾಗಿ ಅವಶ್ಯಕವಿರುವ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆಗಳನ್ನು ನಿರ್ವಹಿಸುವ ಬಗ್ಗೆ ಕೂಡಲೇ ಗಮನ ಹರಿಸಬೇಕೆಂದು  ಸೂಚಿಸಿದರು.

ಮಾಸ್ಕ್ , ಸ್ಯಾನಿಟೈಜರ್ ಹಾಗೂ ಜ್ವರ ತಪಾಸಣೆ ಕಡ್ಡಾಯ : ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ  ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಜರ್ ಗಳನ್ನು ಒದಗಿಸಿ ಥರ್ಮಲ್ ತಪಾಸಣೆಗೆ ಒಳಪಡಿಸಿ ಪರೀಕ್ಷೆಗೆ ಹಾಜರುಪಡಿಸಲು ಕ್ರಮ ಕೈಗೊಳ್ಳಬೇಕು. ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ  ಪ್ರತ್ಯೇಕ ಕೊಠಡಿಯನ್ನು ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.  ಯಾವುದೇ ವಿದ್ಯಾರ್ಥಿಯೂ ನೆಲದ ಮೇಲಾಗಲೀ, ಬಯಲಿನಲ್ಲಾಗಲೀ ಪರೀಕ್ಷೆ ಬರೆಯದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದ ಸಚಿವರು, ಅಗತ್ಯವಾದ ಡೆಸ್ಕ್, ಬೆಂಚ್ ಗಳನ್ನು ಅಸುಪಾಸಿನ ಶಾಲೆಗಳಿಂದ ಸಂಗ್ರಹಿಸಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಪರೀಕ್ಷಾ ವಾತಾವರಣವನ್ನು ಕಲ್ಪಿಸಬೇಕೆಂದು ಸಲಹೆ ನೀಡಿದರು.

ಆಂಗ್ಲ ಮಾಧ್ಯಮ ಪುನರ್ಮನನ ತರಗತಿಗಳ ಪ್ರಾರಂಭ : ಶಿಕ್ಷಣ ಇಲಾಖೆ ಚಂದನ ವಾಹಿನಿಯಲ್ಲಿ ಈಗಾಗಲೇ ಪರೀಕ್ಷಾರ್ಥಿಗಳಿಗೆ ಪುನರ್ಮನನ ತರಗತಿಗಳನ್ನು ನಡೆಸುತ್ತಿದ್ದು, ಈ ವಾರದಿಂದಲೇ  ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೂ ಪುನರ್ಮನನ ತರಗತಿಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  ಇಲಾಖೆಯ ಮಕ್ಕಳವಾಣಿ ಯೂ-ಟ್ಯೂಬ್ ಚಾನೆಲ್ ನಲ್ಲಿಯೂ ಸಹ ಪುನರ್ಮನನ ತರಗತಿಗಳು ವಿದ್ಯಾರ್ಥಿಗಳಿಗೆ ಲಭ್ಯವಿದ್ದು, ಎಸ್ಎಸ್ ಎಲ್ ಸಿ ಪರೀಕ್ಷೆ  ಕುರಿತು ಮಕ್ಕಳಲ್ಲಿ ಅನುಮಾನ ಗಳಿದ್ದರೆ ಪರೀಕ್ಷೆ ಇಷ್ಟರಲ್ಲೇ ನಡೆಯಲಿದೆ ಎಂಬ ಕುರಿತು ಮಕ್ಕಳಿಗೆ ಮತ್ತು ಪೋಷಕರಿಗೆ ಮನವರಿಕೆ ಮಾಡಬೇಕೆಂದು  ಸಚಿವರು ಡಿಡಿಪಿ ಐಗಳಿಗೆ ಸೂಚಿಸಿದರು. ‘

 ಪರೀಕ್ಷೆ ಸಿದ್ಧತೆಗೆ ಸಮಯ: ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲು ವಿಷಯವಾರು ಅವಶ್ಯಕ ಅಂತರವನ್ನು  ಕಾಪಾಡಿಕೊಳ್ಳಲು ಯೋಜನೆ ರೂಪಿಸಬೇಕೆಂದು ಇಲಾಖಾ ಆಯುಕ್ತರಿಗೆ ಸೂಚಿಸಿದ ಸುರೇಶ್ ಕುಮಾರ್, ಈಗಾಗಲೇ ಬೇರೆ ಊರುಗಳಿಗೆ ತೆರಳಿರುವ ವಿದ್ಯಾರ್ಥಿಗಳಿಗೆ ಅವರು ಪ್ರಸ್ತುತ ಇರುವ ಸ್ಥಳಗಳಲ್ಲಿಯೇ ಹತ್ತಿರದ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಕುರಿತಂತೆ ಕ್ರಿಯಾಯೋಜನೆ ರೂಪಿಸಬೇಕೆಂದು ಸೂಚಿಸಿದರು.

ಎಸ್ ಎಸ್ ಎಲ್ ಸಿ ಪರೀಕ್ಷಾ ಸಿದ್ಧತೆ ಕುರಿತು, ಆನ್ ಲೈನ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಶ್ನೆ ಪತ್ರಿಕೆ-ಉತ್ತರ ಪತ್ರಿಕೆ ವಿನಿಮಯ, ಸಹಾಯವಾಣಿ ಮೂಲಕ ಸಂದೇಹಗಳ ನಿವಾರಣೆ, ಸ್ಥಳೀಯ ರೇಡಿಯೋ ಕೇಬಲ್ ಟಿವಿ ಚಾನೆಲ್ ಗಳ ಮೂಲಕ ಬೋಧನಾ ಪ್ರಕ್ರಿಯೆ ನಿರ್ವಹಣೆ ಸೇರಿದಂತೆ ಇಲಾಖೆಯ  ಜಿಲ್ಲಾ  ಆಡಳಿತಗಳ ಹಲವಾರು ಉಪಕ್ರಮಗಳನ್ನು ಶ್ಲಾಘಿಸಿದ ಸಚಿವರು, ಪರೀಕ್ಷೆಗಳನ್ನುತುಂಬಾ ಆತ್ಮವಿಶ್ವಾಸದಿಂದ ಎದುರು ನೋಡುತ್ತಿರುವ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಇದೇ ರೀತಿಯ ಭರವಸೆ ಮೂಡಿಸುವ ಪ್ರಯತ್ನಗಳು ಪರೀಕ್ಷಾ ಪಕ್ರಿಯೆ ಪೂರ್ಣಗೊಳ್ಳುವವರೆಗೆ ನಿರಂತರವಾಗಿ ಜಾರಿಯಲ್ಲಿರಲಿ ಎಂದು ಸೂಚಿಸದರು.

ವಿಡಿಯೋ ಸಂವಾದ ಸಂದರ್ಭದಲ್ಲಿ ಇಲಾಖೆಯ ಆಯುಕ್ತ ಡಾ. ಕೆ.ಜಿ. ಜಗದೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.