ಡಿಸೆಂಬರ್ 5ಕ್ಕೆ ರಾಜ್ಯ ಬಂದ್
ಮರಾಠ ನಿಗಮ ಸ್ಥಾಪನೆ ಖಂಡಿಸಿ ಸಂಘಟನೆಗಳ ನಿರ್ಧಾರ
Team Udayavani, Nov 21, 2020, 6:36 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಸರಕಾರ ತೆಗೆದು ಕೊಂಡಿರುವ ಮರಾಠ ಸಮುದಾಯ ನಿಗಮ ಸ್ಥಾಪನೆ ನಿರ್ಧಾರ ವಿರೋಧಿಸಿ ಕನ್ನಡ ಪರ ಸಂಘನೆಗಳು ಡಿ. 5ರಂದು “ಕರ್ನಾಟಕ ಬಂದ್’ಗೆ ಕರೆ ನೀಡಿವೆ.
ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸರಕಾರದ ನಿಲುವಿನ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಲಾಯಿತು. ಬಳಿಕ ಮಾತನಾಡಿದ ವಾಟಾಳ್, ಡಿ. 5ರಂದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಅಖಂಡ ಕರ್ನಾಟಕ ಸಂಪೂರ್ಣ ಬಂದ್ ಆಗಲಿದೆ. ಎಲ್ಲರೂ ಸ್ವಯಂ ಪ್ರೇರಿತರಾಗಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಆ ದಿನ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆಸಲಾಗುತ್ತದೆ. 250ಕ್ಕೂ ಅಧಿಕ ಕನ್ನಡಪರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಹೆದ್ದಾರಿ ತಡೆ ಕೂಡ ನಡೆಯಲಿದೆ ಎಂದರು.
ಮರಾಠ ಸಮುದಾಯ ನಿಗಮ ಸ್ಥಾಪನೆ ನಿರ್ಧಾರದಿಂದ ಸರಕಾರ ಕೂಡಲೇ ಹಿಂದೆ ಸರಿಯ ಬೇಕು. ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಮೈಸೂರು, ಬೀದರ್, ಮೈಸೂರು ಸಹಿತ ಹಲವು ಕಡೆಗಳಲ್ಲಿ ಸಭೆ ನಡೆಸಿ ಬಂದ್‌ಗೆ ಬೆಂಬಲ ಕೋರಲಾಗುವುದು. ಹೋರಾಟ ಗಾರರಿಗೆ ತೊಂದರೆ ನೀಡಿದರೆ ಸರಕಾರ ಗಂಭೀರ ಪರಿಸ್ಥಿತಿ ಎದುರಿಸಬೇಕಾದೀತು ಎಂದು ವಾಟಾಳ್ ಎಚ್ಚರಿಕೆ ನೀಡಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾರಿಗೆ ನೌಕರರಿಗೆ ಅರ್ಧದಷ್ಟೇ ವೇತನ : ತರಬೇತಿ ಅವಧಿ ಸಿಬ್ಬಂದಿಗೆ 4 ಸಾವಿರಕ್ಕೂ ಕಡಿಮೆ ಸಂಬಳ
ಡಬಲ್ ಎಂಜಿನ್ ಗೆ ಬದ್ಧತೆ ಇದ್ದಿದ್ದರೆ ಠಾಕ್ರೆ ಹೇಳಿಕೆ ಖಂಡಿಸಬೇಕಿತ್ತು: ಕುಮಾರಸ್ವಾಮಿ
ಯಡಿಯೂರಪ್ಪ ಸಿಡಿ ವಿಚಾರ ಸದನದಲ್ಲಿ ಪ್ರಸ್ತಾಪ: ಡಿ ಕೆ ಶಿವಕುಮಾರ್
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಸಾರಿಗೆ ನೌಕರರಿಗೆ ಅರ್ಧದಷ್ಟೇ ವೇತನ : ತರಬೇತಿ ಅವಧಿ ಸಿಬ್ಬಂದಿಗೆ 4 ಸಾವಿರಕ್ಕೂ ಕಡಿಮೆ ಸಂಬಳ
ಡಬಲ್ ಎಂಜಿನ್ ಗೆ ಬದ್ಧತೆ ಇದ್ದಿದ್ದರೆ ಠಾಕ್ರೆ ಹೇಳಿಕೆ ಖಂಡಿಸಬೇಕಿತ್ತು: ಕುಮಾರಸ್ವಾಮಿ
ಪಾಕಿಸ್ತಾನ ಸಿಂಧ್ ಪ್ರಾಂತ್ಯ; ಸ್ವಾತಂತ್ರ್ಯ ಪರ ರಾಲಿಯಲ್ಲಿ ಪ್ರಧಾನಿ ಮೋದಿ ಪೋಸ್ಟರ್!
ಯಡಿಯೂರಪ್ಪ ಸಿಡಿ ವಿಚಾರ ಸದನದಲ್ಲಿ ಪ್ರಸ್ತಾಪ: ಡಿ ಕೆ ಶಿವಕುಮಾರ್
ಕೃಷಿ ಸಚಿವರಿಂದ ಬಿಡುಗಡೆಕಾರ್ಲಕಜೆ ಅಕ್ಕಿ