ಇಂದು ರಾಜ್ಯ ಬಿಜೆಪಿ ಸಭೆ

Team Udayavani, Sep 19, 2018, 6:00 AM IST

ಬೆಂಗಳೂರು: “ಆಪರೇಷನ್‌ ಕಮಲ’ ಕಾರ್ಯಾಚರಣೆ ಗೊಂದಲದ ನಡುವೆಯೇ ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಹಾಗೂ ಪಕ್ಷದ ಪ್ರಮುಖರ ಸಮಾಲೋಚನಾ ಸಭೆ ನಡೆಯಲಿದೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಹಾಗೂ ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ ಕುರಿತು ರೂಪುರೇಷೆ ಸಿದಟಛಿಪಡಿಸುವುದು ಸಭೆಯ ಪ್ರಮುಖ ಅಜೆಂಡಾ ಆಗಿದೆ. ಅರಮನೆ ಮೈದಾನದ ಗಾಯತ್ರಿ ವಿಹಾರ್‌ ಸಭಾಂಗಣದಲ್ಲಿ ಆಯೋಜಿಸಿರುವ ರಾಜ್ಯ ಬಿಜೆಪಿಯ ವಿಶೇಷ ಸಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಉದ್ಘಾಟಿಸಲಿದ್ದು, ರಾಜ್ಯ ಉಸ್ತುವಾರಿ ಪಿ.ಮುರಳೀಧರ್‌ ರಾವ್‌ ಹಾಜರಿರಲಿದ್ದಾರೆ. ಇಡೀ ದಿನದ ಸಭೆಯಲ್ಲಿ ಇತ್ತೀಚೆಗೆ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಕೈಗೊಂಡ ತೀರ್ಮಾನಗಳು, ಲೋಕಸಭೆ ಚುನಾವಣೆಗೆ ಪಕ್ಷದ ಗುರಿ, ಅದಕ್ಕಾಗಿ ರೂಪಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಶಾಸಕರು ಹಾಗೂ ನಾಯಕರ ಜತೆ ಪ್ರತ್ಯೇಕ ಚರ್ಚೆಗಳು ನಡೆಯಲಿವೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ