Udayavni Special

ರಾಜ್ಯ ಸಚಿವ ಸಂಪುಟ ಸಭೆ: ಸಾರಿಗೆ ನೌಕರರ ಮೇಲಿನ ಪ್ರಕರಣ ಹಿಂದೆಗೆ‌ತ


Team Udayavani, Sep 21, 2021, 6:40 AM IST

ರಾಜ್ಯ ಸಚಿವ ಸಂಪುಟ ಸಭೆ: ಸಾರಿಗೆ ನೌಕರರ ಮೇಲಿನ ಪ್ರಕರಣ ಹಿಂದೆಗೆ‌ತ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರ ಮೇಲೆ ದಾಖಲಿಸಲಾಗಿದ್ದ ಮೊಕದ್ದಮೆಗಳನ್ನು ವಾಪಸ್‌ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ಶ್ರೀರಾಮುಲು, ನಾಲ್ಕು ಸಾರಿಗೆ ನಿಗಮಗಳ  ವ್ಯವಸ್ಥಾಪಕ ನಿರ್ದೇಶಕರ ಜತೆ ಸಾಧಕ – ಬಾಧಕಗಳ ಕುರಿತು ಚರ್ಚಿಸಿದ್ದೇನೆ. ಮುಷ್ಕರ ಸಮಯದಲ್ಲಿ ಕೆಲವರು ಅಮಾನತಾಗಿದ್ದಾರೆ, ಮತ್ತೆ ಕೆಲವರು ವರ್ಗಾವಣೆಯಾಗಿ  6 ಸಾವಿರ ನೌಕರರು ತೊಂದರೆಗೆೆ ಸಿಲುಕಿದ್ದರು. 4 ಸಾವಿರ ನೌಕರರ ಮೇಲೆ ತೆಗೆದುಕೊಂಡಿದ್ದ ಕ್ರಮವನ್ನು ಹಿಂಪಡೆಯಲಾಗಿದೆ.  ಉಳಿದ 2 ಸಾವಿರ ನೌಕರರನ್ನು ಮಂಗಳವಾರ ಕರೆದು ಮಾತನಾಡಲಾಗುವುದು.  ಮುಷ್ಕರದಲ್ಲಿ ಪಾಲ್ಗೊಂಡ ನೌಕರರಿಗೆ  ತೊಂದರೆಯಾಗಬಾರದು. ಎಫ್ಐಆರ್‌  ಬಗ್ಗೆ ಕಾನೂನು ತಂಡದ ಜತೆ ಚರ್ಚಿಸಲಾಗುವುದು ಎಂದರು.

ಕೆಎಸ್‌ಆರ್‌ಟಿಸಿಗೆ ಪಿಆರ್‌ಸಿಐ ಎಕ್ಸಲೆನ್ಸ್‌ ಪ್ರಶಸ್ತಿ:

ಕೆಎಸ್‌ಆರ್‌ಟಿಸಿ ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಅಳವಡಿಸಿಕೊಂಡ ಉಪಕರಣಗಳಿಗೆ ಪ್ರತಿಷ್ಠಿತ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ “ಪಿಆರ್‌ಸಿಐ ಎಕ್ಸಲೆನ್ಸ್‌’ ಪ್ರಶಸ್ತಿ ಲಭಿಸಿದೆ.

ಕೋವಿಡ್‌ ನಿರ್ವಹಣೆಗಾಗಿ ಬೆಳ್ಳಿ ಪದಕ, ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ ಅಡಿ ಉಪಕರಣಗಳ ಅನುಷ್ಠಾನಕ್ಕೆ ಸಾಮಾಜಿಕ ಅತ್ಯುತ್ತಮ ಸಾರ್ವಜನಿಕ ಉದ್ದಿಮೆ ವಿಭಾಗದಲ್ಲಿ ಕಂಚಿನ ಪದಕ, ಆರೋಗ್ಯ ರಕ್ಷಣೆ ಸಂವಹನ ಸಾಕ್ಷ್ಯಚಿತ್ರಗಳಿಗೆ ಕಂಚಿನ ಪದಕ, ಆಂತರಿಕ ನಿಯತಕಾಲಿಕೆ “ಸಾರಿಗೆ ಸಂಪದ’ಕ್ಕೆ ಚಿನ್ನದ ಪದಕ, ಕೋವಿಡ್‌ ಸಂದರ್ಭ ನೂತನ ಗ್ರಾಹಕ ಸ್ನೇಹಿ ಉಪಕ್ರಮಕ್ಕೆ ಚಿನ್ನದ ಪದಕ ಸಹಿತ ಒಟ್ಟು ಐದು ವಿಭಾಗ ಗಳಲ್ಲಿ ನಿಗಮಕ್ಕೆ ಈ ಪ್ರಶಸ್ತಿ ದೊರಕಿದೆ.

ಈಚೆಗೆ ಗೋವಾದಲ್ಲಿ ಜರಗಿದ್ದ 15ನೇ ವಿಶ್ವ ಸಾರ್ವಜನಿಕ ಸಂಪರ್ಕ ಮಂಡಳಿ ಸಮ್ಮೇಳನದಲ್ಲಿ ಅಲ್ಲಿನ ಕಲೆ ಮತ್ತು ಸಂಸ್ಕೃತಿ, ಬುಡಕಟ್ಟು ಕಲ್ಯಾಣ ಸಚಿವ ಗೋವಿಂದ ಗವುಡೆ ಅವರು ಪ್ರಶಸ್ತಿ ಪ್ರದಾನ ಮಾಡಿದರು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ.

3 ವರ್ಷಗಳ ಡಿಪ್ಲೊಮಾ  ಪಿಯುಸಿಗೆ ಸಮಾನ :

ಬೆಂಗಳೂರು, ಸೆ. 20: ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್‌ ಅನ್ನು ಪಿಯುಸಿ ತತ್ಸಮಾನ ವಿದ್ಯಾರ್ಹತೆ ಎಂದು ಸರಕಾರಿ ನೇಮಕಾತಿಯಲ್ಲಿ ಪರಿಗಣಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.  ಅಂತೆಯೇ,  ಕರ್ನಾಟಕ ರಾಜ್ಯ (ವಿಧಿ ವಿಜ್ಞಾನ ಪ್ರಯೋಗಾಲಯ ಸೇವೆಗಳು)(ನೇಮಕಾತಿ) ನಿಯಮಗಳು 2021 ಗೆ ಅನುಮೋದನೆ ನೀಡಲಾಗಿದೆ.

ಇತರ ನಿರ್ಣಯಗಳು :

  • ಕರ್ನಾಟಕ ಭೂ ಸುಧಾರಣೆ (ತಿದ್ದುಪಡಿ) ವಿಧೇಯಕ 2021ಕ್ಕೆ ಒಪ್ಪಿಗೆ
  • ಕರ್ನಾಟಕ ಭೂ ಮಂಜೂರಾತಿ (ತಿದ್ದುಪಡಿ) ನಿಯಮಗಳು 2021ಕ್ಕೆ ಒಪ್ಪಿಗೆ
  • ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಹಾಗೂ 17  ಗ್ರಾಮಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ78 ಕೋ. ರೂ. ವೆಚ್ಚದ ಪರಿಷ್ಕೃತ ಅಂದಾಜು ಪಟ್ಟಿಗೆ ಒಪ್ಪಿಗೆ
  • ಪರಿಶಿಷ್ಟ ಪಂಗಡ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್‌ ಪೂರ್ವ ಮತ್ತು ಅನಂತರದ ವಿದ್ಯಾರ್ಥಿ ನಿಲಯಗಳು ಮತ್ತು ಆಶ್ರಮ ಶಾಲೆಗಳ ವಿದ್ಯಾರ್ಥಿಗಳಿಗೆ49 ಕೋಟಿ ರೂ. ವೆಚ್ಚದಲ್ಲಿ ಆಹಾರ ಸಾಮಗ್ರಿ ಮತ್ತು ಶುಚಿ ಸಂಭ್ರಮ್‌ ಕಿಟ್‌ ವಿತರಣೆಗೆ ಅನುಮೋದನೆ
  • ಬಳ್ಳಾರಿಯ ವೀರಶೈವ ವಿದ್ಯಾವರ್ಧಕ ಸಂಘ ಕೊಪ್ಪಳದ ಮುನಿರಾಬಾದ್‌ನಲ್ಲಿ ನಡೆಸುತ್ತಿರುವ ಪದವಿ ಪೂರ್ವ ಕಾಲೇಜು ಕಟ್ಟಡದ ಅವಧಿ 30 ವರ್ಷ ಮುಂದೂಡಲು ಒಪ್ಪಿಗೆ ನೀಡಲಾಯಿತು.
  • ಶುಭ್ರ ಬೆಂಗಳೂರು ಯೋಜನೆ ಅಡಿಯಲ್ಲಿ ಮಲ್ಲತ್‌ಹಳ್ಳಿ ಕೆರೆಗೆ ಸೇರುತ್ತಿರುವ ಕೊಳಚೆ ನೀರನ್ನು ತಡೆಯುವ40 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಒಪ್ಪಿಗೆ ನೀಡಲಾಯಿತು.
  • ಸ್ಥಳೀಯ ಸಂಸ್ಥೆಗಳ ಚುನಾವಣೆ, ಉಪ ಚುನಾವಣೆ, ಅಧ್ಯಕ್ಷ, ಉಪಾಧ್ಯಕ್ಷ, ಮೇಯರ್‌, ಉಪ ಮೇಯರ್‌ ಚುನಾವಣೆಗಳನ್ನು ನಡೆಸಲು ಸಂಪುಟ ಒಪ್ಪಿಗೆ ನೀಡಲಾಯಿತು.

ಟಾಪ್ ನ್ಯೂಸ್

ಕೇರಳದಲ್ಲಿ ಮತ್ತೆ ಮಳೆ

ಕೇರಳದಲ್ಲಿ ಮತ್ತೆ ಮಳೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಶೀಘ್ರವೇ ರಾಜ್ಯಾದ್ಯಂತ ಹಾಲಿಗೆ ಏಕರೂಪ ದರ

ಶೀಘ್ರವೇ ರಾಜ್ಯಾದ್ಯಂತ ಹಾಲಿಗೆ ಏಕರೂಪ ದರ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಕೇರಳದಲ್ಲಿ ಮತ್ತೆ ಮಳೆ

ಕೇರಳದಲ್ಲಿ ಮತ್ತೆ ಮಳೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.