ಗುರುವಾರ ರಾಜ್ಯ ಸಚಿವ ಸಂಪುಟ ಸಭೆ
Team Udayavani, May 7, 2019, 3:00 AM IST
ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆ ಮೇ 9 ರಂದು ಗುರುವಾರ ಬೆಳಗ್ಗೆ 11.30ಕ್ಕೆ ನಿಗದಿಯಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ಸಂಪುಟ ಸಭೆ ನಡೆದಿರಲಿಲ್ಲ.
ಗುರುವಾರದ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ಯೋಜನೆಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಬರ ಹಿನ್ನೆಲೆಯಲ್ಲಿ ಕುಡಿಯುವ ನೀರು, ಮೇವು ಹಾಗೂ ಕೆಲವೆಡೆ ಮೂಲಸೌಕರ್ಯ ಯೋಜನೆಗಳನ್ನು ಕೈಗೊಳ್ಳುವ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದೆ.