ಸಾರಿಗೆ ಸಿಬ್ಬಂದಿಗೆ ವೇತನ ನೀಡಲು 961 ಕೋಟಿ ರೂ. ನೀಡಲು ರಾಜ್ಯ ಸರ್ಕಾರ ನಿರ್ಧಾರ
Team Udayavani, Jul 25, 2020, 9:30 AM IST
ಬೆಂಗಳೂರು: ಕೋವಿಡ್-19 ಕಾರಣದಿಂದ ನಷ್ಟ ಅನುಭವಿಸಿರುವ ರಾಜ್ಯ ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ವೇತನ ನೀಡಲು ರಾಜ್ಯ ಸರ್ಕಾರ 961 ಕೋಟಿ ರೂ ಗಳನ್ನು ನೀಡಲು ನಿರ್ಧರಿಸಿದ್ದು, ಅದರಲ್ಲಿ 426 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿಗಳೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಕೆಎಸ್ಆರ್ ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳ ಜೂನ್ ಮತ್ತು ಜುಲೈ ತಿಂಗಳ ಸಂಬಳಕ್ಕಾಗಿ 426 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.
ಸರ್ಕಾರದ ಈ ನಿರ್ಧಾರದಿಂದ ನಾಲ್ಕು ತಿಂಗಳ ವೇತನ ಭರಿಸಲು ಸಾಧ್ಯವಾಗಲಿದೆ ಎಂದು ಸಚಿವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.