Udayavni Special

“ಸ್ಟೆಂಟ್‌’ ಹೆಚ್ಚಿನ ದರಕೆR ಮಾರಿದ್ರೆ ಲೈಸೆನ್ಸ್‌ ರದ್ದು


Team Udayavani, Feb 18, 2017, 6:42 AM IST

17-STATE-2.jpg

ಬೆಂಗಳೂರು: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಅಳವಡಿಸಲಾಗುವ “ಸ್ಟೆಂಟ್‌’ಗಳನ್ನು ದುಬಾರಿ ಬೆಲೆಗೆ
ಮಾರಾಟ ಮಾಡುವವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಮಾರಾಟ ಪರವಾನಗಿ ರದ್ದುಪಡಿಸಲಾಗುವುದು ಎಂದು ಕೇಂದ್ರ
ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಇಂಡಿಯನ್‌ ಇನ್ಸಿಟಿಟ್ಯೂಟ್‌ ಆಫ್ ವರ್ಲ್ಡ್ ಕಲ್ಚರ್‌ನ ಬಿ.ಪಿ. ವಾಡಿಯಾ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಟೆಂಟ್‌ಗಳನ್ನು ದುಬಾರಿ ದರಕ್ಕೆ ಮಾರಾಟ ಮಾಡಿರುವುದು ಪತ್ತೆಯಾದರೆ ಹೆಚ್ಚುವರಿಯಾಗಿ ಪಡೆದ ಮೊತ್ತದ
ಜತೆಗೆ ಶೇ.15ರಷ್ಟು ದಂಡ ವಸೂಲಿ ಮಾಡಲಾಗುವುದು ಎಂದು ಹೇಳಿದರು. ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಬಡ ಹಾಗೂ ಮಧ್ಯಮ  ವರ್ಗದ ಜನರನ್ನು ದೃಷ್ಠಿಯಲ್ಲಿಟ್ಟುಕೊಂಡು ಫೆ.13ರಂದು “ಸ್ಟೆಂಟ್‌’ಗಳ ದರಗಳನ್ನು ಶೇ.85ರಷ್ಟು ಕಡಿಮೆ ಮಾಡುವ ತೀರ್ಮಾನವನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಆರೋಗ್ಯ ಭದ್ರತೆ ಒದಗಿಸಲು ಬದ್ಧವಾಗಿರುವ ಕೇಂದ್ರ ಸರ್ಕಾರ, ತನ್ನ ತೀರ್ಮಾನದ ಅನುಷ್ಠಾನದಲ್ಲೂ ಅಷ್ಟೇ ಕಾಳಜಿ ಹೊಂದಿದೆ. ಆದ್ದರಿಂದ ಬಡವರಿಗೆ ಅನುಕೂಲವಾಗಲಿ ಎಂದು ಸ್ಟೆಂಟ್‌ಗಳ ದರಗಳನ್ನು ಇಳಿಕೆ ಮಾಡಲಾಗಿದೆ ಎಂದು ಹೇಳಿದರು. 

“ರಾಷ್ಟ್ರೀಯ ಅತ್ಯಾವಶ್ಯಕ ಔಷಗಳ ಸೂಚಿ’ಯಲ್ಲಿ ಇರುವ ಔಷಧಿಗಳ ಬೆಲೆ ನಿಗದಿಪಡಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇರುತ್ತದೆ. ಆದರೆ, ಸ್ಟೆಂಟ್‌ಗಳು ಇಲ್ಲಿವರೆಗೆ ಈ ಸೂಚಿಯಲ್ಲಿರಲಿಲ್ಲ. ಅದಕ್ಕಾಗಿ ತಯಾರಿಕಾ ವೆಚ್ಚ ಕಡಿಮೆ ಇದ್ದರೂ, ಅತ್ಯಂತ ದುಬಾರಿ ಬೆಲೆಗೆ ಅವುಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈಗ ಅದನ್ನು ರಾಷ್ಟ್ರೀಯ ಆತ್ಯಾವಶ್ಯಕ ಔಷಧಿಗಳ ಸೂಚಿಯಲ್ಲಿ ಸೇರಿಸಲಾಗಿದೆ. ಅದರಂತೆ ಸಾಮಾನ್ಯ ಸ್ಟೆಂಟ್‌ ಗಳ ಬೆಲೆ 7,260 ರೂ. ಹಾಗೂ ವಿಶೇಷ ಸ್ಟೆಂಟ್‌ಗಳ ಬೆಲೆಯನ್ನು 29,600 ರೂ.
ನಿಗದಿಪಡಿಸಲಾಗಿದೆ. ದೇಶದಲ್ಲಿ ಸ್ಟೆಂಟ್‌ಗಳನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದ ದರಗಳಲ್ಲೇ ಮಾರಾಟ ಮಾಡಬೇಕು. ಸ್ಟೆಂಟ್‌ಗಳ ಬೆಲೆ ಕಡಿಮೆ ಮಾಡಿರುವುದರಿಂದ ಅಂದಾಜು 5 ಸಾವಿರ ಕೋಟಿ ರೂ. ಉಳಿತಾಯ ಆಗಲಿದೆ ಎಂದು ಅನಂತಕುಮಾರ್‌ ತಿಳಿಸಿದರು.

ಕೇಂದ್ರ ಆರೋಗ್ಯ ಸಚಿವಾಲಯದ 2015ರ ವರದಿ ಪ್ರಕಾರ ದೇಶದಲ್ಲಿ 6.19 ಕೋಟಿ ಜನರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕಳೆದ ವರ್ಷ 4 ಲಕ್ಷ ಸ್ಟೆಂಟ್‌ ಅಳವಡಿಸಲಾಗಿತ್ತು. ಈ ವರ್ಷ ಅದು 5 ಲಕ್ಷ ಆಗುವ ಸಾಧ್ಯತೆಯಿದೆ. ಸ್ಟೆಂಟ್‌ಗಳ ಕೃತಕ
ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಡೆಗಟ್ಟಲು ಸ್ಟೆಂಟ್‌ ತಯಾರಕರು ಕಳೆದ 3 ವರ್ಷದಲ್ಲಿ ಪ್ರತಿ ವರ್ಷ ಎಷ್ಟು ಸಂಖ್ಯೆಯಲ್ಲಿ ಸ್ಟೆಂಟ್‌ಗಳನ್ನು ತಯಾರು ಮಾಡಿದ್ದರು, ಮುಂದಿನ ಒಂದು ವರ್ಷ ಅಷ್ಟೇ ಪ್ರಮಾಣದ ಸ್ಟೆಂಟ್‌ಗಳನ್ನು ತಯಾರು ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.  

ಶೇ.15ರಷ್ಟು ದಂಡ ವಸೂಲಿ ಒಂದೊಮ್ಮೆ ಮಾರಾಟಗಾರರು ದುಬಾರಿ ಬೆಲೆಗೆ ಮಾರಾಟ ಮಾಡಿದರೆ, ಆ ದುಬಾರಿ ಬೆಲೆ ಮೇಲೆ ಶೇ.15ರಷ್ಟು ದಂಡ ವಿಧಿಸಿ ಹಣ ವಸೂಲಿ ಮಾಡಲಾಗುವುದು. ಜತೆಗೆ ಅಂತಹ ಮಾರಾಟಗಾರರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಮಾರಾಟ ಪರವಾನಿಗೆ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಅನಂತ ಕುಮಾರ್‌ ತಿಳಿಸಿದರು. “ಸ್ಟೆಂಟ್‌’ಗಳ ದರ ಭಾರಿ ಪ್ರಮಾಣದಲ್ಲಿ ಇಳಿಕೆ ಮಾಡಿದ ಕೇಂದ್ರ ಸರ್ಕಾರದ ತೀರ್ಮಾನ ಐತಿಹಾಸಿಕ. ಈ ತೀರ್ಮಾನದಿಂದ ದೇಶದ 6.19 ಕೋಟಿ ಜನರಿಗೆ ಅನುಕೂಲ ಆಗಲಿದೆ ಎಂದರು. 

ಟಾಪ್ ನ್ಯೂಸ್

ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿಹೋದ ಕೇರಳ;ಸಾವಿನ ಸಂಖ್ಯೆ 27ಕ್ಕೆ ಏರಿಕೆ, CM ತುರ್ತು ಸಭೆ

ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿಹೋದ ಕೇರಳ;ಸಾವಿನ ಸಂಖ್ಯೆ 27ಕ್ಕೆ ಏರಿಕೆ, CM ತುರ್ತು ಸಭೆ

t a sharavana

ಅಲ್ಪಸಂಖ್ಯಾತರ ಮೇಲೆ ಪ್ರೀತಿಯಿದ್ದರೆ ಜಮೀರ್ ರನ್ನೇ ಸಿಎಂ ಅಭ್ಯರ್ಥಿಯಾಗಿಸಿ: ಶರವಣ ಸವಾಲು

ಪ್ರವಾಸಿಗರ ಸ್ವರ್ಗ ಎತ್ತಿನಭುಜ

ಪ್ರವಾಸಿಗರ ಸ್ವರ್ಗ ಎತ್ತಿನಭುಜ

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

ಮೈಶುಗರ್ ಕಾರ್ಖಾನೆ ಖಾಸಗೀಕರಣ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಮೈಶುಗರ್ ಕಾರ್ಖಾನೆ ಖಾಸಗೀಕರಣ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವಿಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

t a sharavana

ಅಲ್ಪಸಂಖ್ಯಾತರ ಮೇಲೆ ಪ್ರೀತಿಯಿದ್ದರೆ ಜಮೀರ್ ರನ್ನೇ ಸಿಎಂ ಅಭ್ಯರ್ಥಿಯಾಗಿಸಿ: ಶರವಣ ಸವಾಲು

ಮೈಶುಗರ್ ಕಾರ್ಖಾನೆ ಖಾಸಗೀಕರಣ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಮೈಶುಗರ್ ಕಾರ್ಖಾನೆ ಖಾಸಗೀಕರಣ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

70

ಮಂಡ್ಯ ಮೈಶುಗರ್ ಕಾರ್ಖಾನೆ ಪುನಶ್ಚೇತನ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

1-2-a

ಬೆಂಗಳೂರು ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ

MUST WATCH

udayavani youtube

ಗಾಳಿ ಮಳೆಗೆ ಬಾಳೆ ತೋಟ ಸಂಪೂರ್ಣ ನಾಶ : ಕೃಷಿಯನ್ನೇ ನಂಬಿದ ರೈತರಿಗೆ ಸಂಕಷ್ಟ

udayavani youtube

ಅಕಾಲಿಕ ಮಳೆಗೆ ನೆಲಕ್ಕಚ್ಚಿದ ಭತ್ತದ ಪೈರುಗಳು : ಸಂಕಷ್ಟದಲ್ಲಿ ರೈತರು

udayavani youtube

ವಿಶೇಷ ಚೇತನ ಅಭಿಮಾನಿಯೊಬ್ಬನನ್ನು ಕಾಣಲು ಬಂದ ರಿಯಲ್ ಸ್ಟಾರ್ ಉಪೇಂದ್ರ!

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

ಹೊಸ ಸೇರ್ಪಡೆ

representative image

ಭಾರೀ ಮಳೆಗೆ ಅಪಾರ ಬೆಳೆ ನಷ್ಟ

only-Kannada

ಕನ್ನಡಕ್ಕಾಗಿ ‘ಓನ್ಲಿ ಕನ್ನಡ’:  ಹೊಸ ಓಟಿಟಿ ವೇದಿಕೆ

23

ಸದನದಲ್ಲಿ ರೈತರ ಜಮೀನು ದಾರಿ ಸಮಸ್ಯೆ ಚರ್ಚಿಸಲು ಡಿ.ಕೆ. ಶಿವಕುಮಾರಗೆ ಆಗ್ರಹ

ಆಟೋ ಚಾಲಕನ ಕೊಂದಿದ್ದವಗೆ ಜೀವಾವಧಿ ಶಿಕ್ಷೆ

ಆಟೋ ಚಾಲಕನ ಕೊಂದಿದ್ದವಗೆ ಜೀವಾವಧಿ ಶಿಕ್ಷೆ

Academy

ಮಾಗಡಿ ಅಕಾಡೆಮಿ ವಿರುದ್ಧ ಚಾಂಪಿಯನ್ಸ್ ನೆಟ್‌ಗೆ ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.