ಪದೇ ಪದೆ ಫೇಲ್‌ ಆಗಿದ್ದಕ್ಕೆ 300 ಅಂಕಪಟ್ಟಿ ಕದ್ದ!

Team Udayavani, Jan 14, 2020, 3:00 AM IST

Udayavani Kannada Newspaper

ಬೆಳಗಾವಿ: ಪರೀಕ್ಷೆಯಲ್ಲಿ ಅನೇಕ ಬಾರಿ ಅನುತ್ತೀರ್ಣಗೊಂಡಿದ್ದಕ್ಕೆ ನೊಂದ ಯುವಕನೊಬ್ಬ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ನುಗ್ಗಿ ತನ್ನದೇ ಕಾಲೇಜು ವಿದ್ಯಾರ್ಥಿಗಳ 300 ಅಂಕಪಟ್ಟಿ ಹಾಗೂ ಎರಡು ಸ್ಕಾನರ್‌ ಕಳವು ಮಾಡುವಾಗ ಸಿಕ್ಕಿ ಬಿದ್ದಿದ್ದಾನೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ಬಸಪ್ಪ ಶಿವಲಿಂಗಪ್ಪ ಹೊನವಾಡ (23) ಬಂಧಿತ ಯುವಕ. ಜಮಖಂಡಿ ತಾಲೂಕಿನ ಹುನ್ನೂರ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಬಿಕಾಂ ಐದನೇ ಸೆಮಿಸ್ಟರ್‌ನಲ್ಲಿ ಪದೇಪದೆ ಅನುತ್ತೀರ್ಣಗೊಂಡಿದ್ದಕ್ಕೆ ಹತಾಶೆಗೊಂಡು ಈ ಕಳ್ಳತನ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಐದನೇ ಸೆಮಿಸ್ಟರ್‌ನ ಕೆಲವು ವಿಷಯಗಳಲ್ಲಿ ಬಸಪ್ಪ ಹೊನವಾಡ ಅನುತ್ತಿರ್ಣನಾಗಿದ್ದ. ಮರು ಪರೀಕ್ಷೆ ಬರೆದರೂ ಪಾಸಾಗಿರಲಿಲ್ಲ. ಇದರಿಂದ ನೊಂದಿದ್ದ ಈತ ಶುಕ್ರವಾರ ರಾತ್ರಿ ಬೆಳಗಾವಿಗೆ ಬಂದು ವಿಶ್ವವಿದ್ಯಾಲಯ ಹಾಸ್ಟೆಲ್‌ನಲ್ಲಿ ತನ್ನ ಗೆಳೆಯರ ಕೋಣೆಯಲ್ಲಿ ವಾಸವಿದ್ದು, ಮರುದಿನ ಮೌಲ್ಯಮಾಪನ ಕುಲಸಚಿವರ ಬಳಿ ಹೋಗಿ ತನ್ನನ್ನು ಪಾಸ್‌ ಮಾಡುವಂತೆ ಅಂಗಲಾಚಿ ಬೇಡಿಕೊಂಡಿದ್ದಾನೆ.

ಬಳಿಕ ಜಗಳ ಕೂಡ ಮಾಡಿದ್ದಾನೆ. ಮರು ಮೌಲ್ಯಮಾಪನಕ್ಕೆ ಹಾಕುವಂತೆ ಸಲಹೆ ನೀಡಿದ್ದರೂ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಬಳಿಕ ಕುಲಸಚಿವರ ಕಚೇರಿಯಲ್ಲಿ ಸುತ್ತಾಡಿ ಮಾಹಿತಿ ಕಲೆ ಹಾಕಿದ ಈತ, ಶನಿವಾರ ರಾತ್ರಿ ಕಿಟಕಿ ಮೂಲಕ ಒಳ ನುಗ್ಗಿ ಎರಡು ಸ್ಕಾನರ್‌ ಹಾಗೂ ತನ್ನ ಕಾಲೇಜಿನ ವಿದ್ಯಾರ್ಥಿಗಳ ಅಂಕ ಪಟ್ಟಿಗಳನ್ನು ಕಳವು ಮಾಡಿದ್ದಾನೆ.

ಕಚೇರಿಯಿಂದ ಪರಾರಿಯಾಗುವಾಗ ಸೆಕ್ಯೂರಿಟಿ ಗಾರ್ಡ್‌ ಈತನನ್ನು ಗಮನಿಸಿ, ಹೊರಗಿನಿಂದ ಕೀಲಿ ಹಾಕಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾನೆ. ಕಾಕತಿ ಠಾಣೆ ಇನ್ಸ್‌ಪೆಕ್ಟರ್‌ ಶ್ರೀಶೈಲ ಕೌಜಲಗಿ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.