150 ತಾಲೂಕು,16 ಜಿಲ್ಲಾಸ್ಪತ್ರೆಗಳಲ್ಲಿ ಕಟ್ಟುನಿಟ್ಟಿನ ಅಗ್ನಿ ಸುರಕ್ಷತಾ ಕ್ರಮ:ಸಚಿವ ಸುಧಾಕರ್
Team Udayavani, May 8, 2022, 5:26 PM IST
ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜುಗಳಲ್ಲಿಅಗ್ನಿ ಅವಘಡದಂತಹ ಘಟನೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಂಬಂಧ ಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಎಲ್ಲಾ ಆಸ್ಪತ್ರೆಗಳಲ್ಲೂ ಅಗ್ನಿ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಒತ್ತು ನೀಡಲಾಗಿದೆ.
ಕೆಲ ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೊತೆ ನಡೆದ ವಿಡಿಯೋ ಸಂವಾದದ ವೇಳೆ, ಪ್ರಧಾನಿಗಳು ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷಾ ಕ್ರಮಗಳನ್ನು ಅನುಸರಿಸುವ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಿದ್ದರು. ಪ್ರಧಾನಿಗಳ ಸೂಚನೆ ಮೇರೆಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ರಾಜ್ಯದ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಫೈರ್ ಸೇಪ್ಟಿ ಆಡಿಟ್ ಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಲಿಖಿತ ಸೂಚನೆ ನೀಡಿದ್ದರು. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ, 166 ಆಸ್ಪತ್ರೆಗಳಿಗೆ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ತಲಾ 50,000 ರೂಪಾಯಿಗಳನ್ನು ನೀಡಲಾಗುತ್ತಿದೆ.
ಅಗ್ನಿ ಸುರಕ್ಷತಾ ಕ್ರಮಗಳ ಅಳವಡಿಕೆ ನಂತರ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಮೂಲಕ ಎಲ್ಲಾ ಆಸ್ಪತ್ರೆಗಳು ನಿರಾಕ್ಷೇಪಣಪತ್ರ ಪಡೆಯಬೇಕಿದೆ. ಮೇ 21ರ ತನಕ ಕಾಲಮಿತಿಯನ್ನು ಕೂಡ ನೀಡಲಾಗಿದೆ. 16 ಜಿಲ್ಲಾ ಆಸ್ಪತ್ರೆಗಳು, 150 ತಾಲೂಕು ಆಸ್ಪತ್ರೆಗಳಿಗೆ ಈಗಾಗಲೇಈ ಬಗ್ಗೆ ಸೂಚನೆಯನ್ನು ಕೂಡ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ