ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಹೋರಾಟ
Team Udayavani, Jun 28, 2020, 7:53 AM IST
ಬೆಂಗಳೂರು: ದಪ್ಪ ಚರ್ಮದ ಕೇಂದ್ರ, ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪಕ್ಷದ ವತಿಯಿಂದ ತೀವ್ರ ಹೋರಾಟ ಕೈಗೆತ್ತಿಕೊಳ್ಳುವುದು ಅನಿ ವಾರ್ಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಪೆಟ್ರೋಲ್, ಡೀಸೆಲ್ ಅತ್ಯಂತ ದುಬಾರಿಯಾಗಿದೆ. ಬೆಲೆ ಏರಿಕೆ ಖಂಡಿಸುವುದರ ಜೊತೆಗೆ ಜನಪರ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು. ಕಳೆದ 6 ವರ್ಷಗಳಲ್ಲಿ ದರ ಏರಿಕೆ ಮತ್ತು ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ಮೂಲಕ ಕೇಂದ್ರ ಸರ್ಕಾರ ಸುಮಾರು 18 ಲಕ್ಷ ಕೋಟಿ ಸಂಗ್ರಹ ಮಾಡಿರುವ ಮಾಹಿತಿ ಇದೆ. ಕೋವಿಡ್ 19 ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪರಿಸ್ಥಿತಿ ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡದೆ ಜನರಿಗೆ ಎರಡೂ ಸರ್ಕಾರಗಳು ದ್ರೋಹ ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವೈದ್ಯರು, ಸಿಬ್ಬಂದಿಗೆ ಸೌಲಭ್ಯಗಳೇ ಇಲ್ಲ. ರೈತರು ಮತ್ತಿತರ ಸಮುದಾಯಗಳಿಗೆ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಈವರೆಗೆ ತಲುಪಿಲ್ಲ. ಎಪಿಎಂಸಿ ರಾಜ್ಯದ ಪಟ್ಟಿಯಲ್ಲಿ ಬರುವ ವಿಷಯ. ಆದರೂ, ಕೇಂದ್ರ ಸರ್ಕಾರ ಮೂಗು ತೂರಿಸುತ್ತಿದೆ. ಭೂ ಸುಧಾರಣೆ ಕಾಯಿದೆಗೂ ತಿದ್ದುಪಡಿ ತರಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ