ಕೇಂದ್ರದಿಂದ ವಿವಿಧ ಯೋಜನೆಗಳ ಅನುದಾನ ಕಡಿತ: ಕೃಷ್ಣ ಭೈರೇಗೌಡ
Team Udayavani, Jun 13, 2018, 6:00 AM IST
ಬೆಂಗಳೂರು: ಕುಡಿಯುವ ನೀರಿನ ಯೋಜನೆಗಳಿಗೆ ಅನುದಾನ ಕಡಿಮೆ ಮಾಡಿರುವುದು ಮತ್ತು ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯಕ್ಕೆ 1,054 ಕೋ. ರೂ. ಬಾಕಿ ಉಳಿಸಿಕೊಂಡಿರುವ ಬಗ್ಗೆ ಕೇಂದ್ರದ ವಿರುದ್ಧ ಕಿಡಿ ಕಾರಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೃಷ್ಣ ಭೈರೇಗೌಡ, ಕೇಂದ್ರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿನ ವಿಚಾರದಲ್ಲಿ ಕೇಂದ್ರ ಸರಕಾರ ಅನುದಾನ ಕಡಿಮೆ ಮಾಡಿಕೊಂಡೇ ಬಂದಿದೆ. 2013ರಲ್ಲಿ ರಾಜ್ಯದ ಪಾಲು 868 ಕೋ. ರೂ. ಇದ್ದರೆ, ಕೇಂದ್ರದ ಪಾಲು 960 ಕೋ. ರೂ. ಇತ್ತು. ಆದರೆ 2017-18ರಲ್ಲಿ ಕೇಂದ್ರದ ಪಾಲು 290 ಕೋ.ರೂ. ಆಗಿದ್ದು, ರಾಜ್ಯದ ಪಾಲು 2,094 ಕೋ. ರೂ.ಗಳಾಗಿದ್ದು, 3 ವರ್ಷಗಳಲ್ಲಿ ಶೇ. 50-50ರಷ್ಟಿದ್ದ ಪಾಲು ಈಗ ಕೇಂದ್ರದಿಂದ ಶೇ. 12 ಮತ್ತು ರಾಜ್ಯದಿಂದ ಶೇ. 88ಕ್ಕೆ ಬಂದಿದೆ ಎಂದು ಹೇಳಿದರು.
ಅದೇ ರೀತಿ ಉದ್ಯೋಗ ಖಾತರಿ ಯೋಜನೆಯಲ್ಲೂ ಕೇಂದ್ರ ರಾಜ್ಯಕ್ಕೆ 1,054 ಕೋ. ರೂ. ಬಾಕಿ ಉಳಿಸಿಕೊಳ್ಳುವ ಮೂಲಕ ರಾಜ್ಯಕ್ಕೆ ಸಾಲಗಾರನಾಗಿದೆ. ಈ ಕುರಿತು ಪತ್ರ ಬರೆದು ಹಣ ಬಿಡುಗಡೆಗೆ ಕೋರಿದರೂ ಕೇಂದ್ರದಿಂದ ಪ್ರತಿಕ್ರಿಯೆ ಇಲ್ಲ ಎಂದು ಆರೋಪಿಸಿದ ಅವರು, ಶೀಘ್ರವೇ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಕೇಂದ್ರವನ್ನು ಆಗ್ರಹಿಸಿದರು. ಆನ್ಲೈನ್ ಮಾನಿಟರಿಂಗ್ ವ್ಯವಸ್ಥೆ ರಾಜ್ಯದ ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳ ಆನ್ಲೈನ್ ಮಾನಿಟರಿಂಗ್ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ