LS polls: ಇಂದು ಸುಮಲತಾ ಬಿಜೆಪಿಗೆ
Team Udayavani, Apr 5, 2024, 6:58 AM IST
ಬೆಂಗಳೂರು: ಕಳೆದ ಲೋಕಸಭಾ ಚುನಾ ವಣೆಯಲ್ಲಿ ಮಂಡ್ಯದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಬಿಜೆಪಿಗೆ ಬಾಹ್ಯ ಬೆಂಬಲ ಘೋಷಿಸಿದ್ದ ಸಂಸದೆ ಸುಮಲತಾ ಶುಕ್ರವಾರ ಅಧಿಕೃತವಾಗಿ ಬಿಜೆಪಿ ಸೇರಲಿದ್ದು, ಮಂಡ್ಯದಲ್ಲಿ ಬಿಜೆಪಿ- ಜೆಡಿಎಸ್ಮೈತ್ರಿ ಅಭ್ಯರ್ಥಿಯಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬೆಂಬಲಿಸಲಿದ್ದಾರೆ.
ಶುಕ್ರವಾರ ಬೆಳಗ್ಗೆ 11.30ಕ್ಕೆ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಕ್ಷಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸುಮಲತಾ ಅವರನ್ನು ಬರ ಮಾಡಿಕೊಳ್ಳಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಸದಾನಂದ ಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಚಿವರಾದ ಸಿ.ಟಿ. ರವಿ, ಡಾ| ಅಶ್ವತ್ಥನಾರಾಯಣ ಸಮ್ಮುಖದಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
ಜಾಲತಾಣದಲ್ಲಿ ಪೋಸ್ಟ್ ತಮ್ಮ ಎಕ್ಸ್ ಮತ್ತು ಫೇಸ್ಬುಕ್ ಖಾತೆಗಳಲ್ಲಿ ಪ್ರಧಾನಿ ಮೋದಿ ಅವಣರೊಂದಿಗಿನ ಭಾವಚಿತ್ರ ಪೋಸ್ಟ್ ಮಾಡಿರುವ ಸುಮಲತಾ, ಮಂಡ್ಯದ ಅಭಿವೃದ್ಧಿಯನ್ನೇ ಮೂಲಮಂತ್ರವಾಗಿಸಿಕೊಂಡು ಹಾಗೂ ಮೋದಿಯವರು ಮತ್ತೂಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಬಿಜೆಪಿಯನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಬಿಜೆಪಿ ನಾಯಕರ ಸಮ್ಮುಖದಲ್ಲಿ ಎ. 5ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆ ಆಗುತ್ತಿರುವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್