ಪ್ರಮೋದ್ ಮುತಾಲಿಕ್ ಸ್ಪರ್ಧೆ ಬಗ್ಗೆ ಕೊನೆಗೂ ಮೌನ ಮುರಿದ ಸಚಿವ ಸುನಿಲ್ ಕುಮಾರ್
ಹಿಂದುತ್ವದ ಹೆಸರಿನಲ್ಲಿ ಸ್ಪರ್ಧೆಗೆ ಇಳಿದಿರುವುದನ್ನು ಬಿಡಿಸಿ ಹೇಳಬೇಕಿಲ್ಲ
Team Udayavani, Feb 4, 2023, 5:09 PM IST
ಬೆಂಗಳೂರು: ಪ್ರಮೋದ್ ಮುತಾಲಿಕ್ ಹಿಂದುತ್ವದ ಹೆಸರಿನಲ್ಲಿ ಯಾಕೆ ಸ್ಪರ್ಧೆಗೆ ಇಳಿದಿದ್ದಾರೆ? ಅದರಿಂದ ಯಾರಿಗೆ ಲಾಭ ಎಂಬುದನ್ನು ಬಿಡಿಸಿ ಹೇಳಬೇಕಾದ ಅಗತ್ಯವಿಲ್ಲ ಎಂದು ಇಂಧನ ಮತ್ತು ಕನ್ನಡ- ಸಂಸ್ಕ್ರತಿ ಸಚಿವ ವಿ. ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.
ತಮ್ಮ ವಿರುದ್ಧ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಘೋಷಿಸಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಇದೇ ಮೊದಲ ಬಾರಿಗೆ ಅವರು ಮೌನ ಮುರಿದು ಮಾತನಾಡಿದ್ದಾರೆ.
ಆರ್ ಎಸ್ಎಸ್ ಹಾಗೂ ವಿಶ್ವ ಹಿಂದೂ ಪರಿಷತ್ ಬಿಟ್ಟು ತಾವೇಕೆ ಹೊರ ಹೋದರು ಎಂಬ ಬಗ್ಗೆ ಮುತಾಲಿಕರೇ ಉತ್ತರ ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಈ ಹಿಂದೆ ಬಿಜೆಪಿಯ ಹಿರಿಯ ನಾಯಕ ಅನಂತ ಕುಮಾರ್ ವಿರುದ್ಧ ಸ್ಪರ್ಧೆ ಮಾಡಿದ್ದರು. ಪ್ರಹ್ಲಾದ್ ಜೋಷಿಯವರ ವಿರುದ್ಧವೂ ಸ್ಪರ್ಧಿಸಿದ್ದರು. ಫಲಿತಾಂಶ ಏನಾಯ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಕಾರ್ಕಳದಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಅವರ ಮುಂದಿನ ಆಯ್ಕೆ ಯಾವುದೋ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.
ಪ್ರಮೋದ್ ಮುತಾಲಿಕರು ಕಾರ್ಕಳ ಕ್ಷೇತ್ರಕ್ಕೆ ಬಂದು ಹಿಂದುತ್ವದ ಹೆಸರಿನಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಆದರೆ ಕ್ಷೇತ್ರದಲ್ಲಿ ಹಿಂದುತ್ವಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆಯಾಗಿಲ್ಲ. ಅವರು ಹಿಂದುತ್ವದ ಹೆಸರಿನಲ್ಲಿ ಏಕೆ ಚುನಾವಣೆ ಬಯಸುತ್ತಿದ್ದಾರೆ ಎಂದು ಬಿಡಿಸಿ ಹೇಳುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ಅಭಿವೃದ್ದಿ ವಿಚಾರ ಇಲ್ಲದವರು ಸಿ.ಡಿ. ಬಗ್ಗೆ ಮಾತನಾಡುತ್ತಾರೆ: ಪ್ರತಾಪ್ ಸಿಂಹ
ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದಾಗಿದೆ. ಮುತಾಲಿಕರು ತೆಗೆದುಕೊಂಡಿರುವ ನಿರ್ಧಾರವನ್ನು ನಾನ್ಯಾಕೆ ವಿರೋಧಿಸಲಿ? ಸುನಿಲ್ ಕುಮಾರ್ ಏನು ಎಂಬುದನ್ನು ಕಾರ್ಕಳದ ಜನತೆ ಕಳೆದ ಇಪ್ಪತ್ತು ವರ್ಷದಿಂದ ನೋಡಿದ್ದಾರೆ. ಮುಂದೆಯೂ ಅವರೇ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಮುತಾಲಿಕ್ ಅವರು ನನ್ನ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ. ಮುಂದೆಯೂ ಮಾಡಬಹುದು. ನಾನು ಆ ವಿಚಾರಗಳಿಗೆ ಉತ್ತರ ನೀಡಲು ಹೋಗುವುದಿಲ್ಲ. ನಾನು ಯಾರ ವಿರುದ್ಧವೂ ವೈಯಕ್ತಿಕ ಟೀಕೆ ಮಾಡುವುದಿಲ್ಲ. ಕಾರ್ಕಳದ ಅಭಿವೃದ್ದಿ ವಿಚಾರದ ಬಗ್ಗೆ ಕಾರ್ಕಳದ ಜನ ಪ್ರಶ್ನಿಸಿದರೆ ಉತ್ತರ ನೀಡುತ್ತೇನೆ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ
ಕೆಕೆಆರ್ ಟಿಸಿ ಗೆ 802 ಬಸ್ ಸೇರ್ಪಡೆ: 28ರಂದು ಸೇಡಂದಲ್ಲಿ ಲೋಕಾರ್ಪಣೆ
ಕುತೂಹಲ ಮೂಡಿಸಿದ ಭೇಟಿ: ಸಿಎಂ ಬೊಮ್ಮಾಯಿ ಜತೆ ಒಂದು ಗಂಟೆ ಚರ್ಚಿಸಿದ ಸಾಹುಕಾರ್
ಬಿಸಿಲ ಬೇಗೆಗೆ ರಾಜ್ಯದ ಜನ ತತ್ತರ! ಏನೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು? ಇಲ್ಲಿದೆ ಮಾಹಿತಿ…
ಕೋವಿಡ್ ಮಹಾಮಾರಿ ಮತ್ತೆ ಸದ್ದು; ರಾಜ್ಯದಲ್ಲಿ 155 ಹೊಸ ಪ್ರಕರಣ ಪತ್ತೆ
MUST WATCH
ಹೊಸ ಸೇರ್ಪಡೆ
ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ
ಮಾಸ್ ಲುಕ್ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್ ರಾಜ್
ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ
ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ
ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್