ದ್ರೌಪದಿ ಮುರ್ಮುಗೆ ಬೆಂಬಲ: ಪಕ್ಷ ಎನ್ನುವ ಮಾತಿಲ್ಲ ಎಂದ ಜೆಡಿಎಸ್‌

ಶಾಸಕಾಂಗ ಸಭೆಯಲ್ಲಿ ಒಮ್ಮತದ ತೀರ್ಮಾನ

Team Udayavani, Jul 15, 2022, 8:47 PM IST

1-ddasdd

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ದ್ರೌಪದಿ ಮುರ್ಮು ಅವರಿಗೆ ಪಕ್ಷ ರಾಜಕಾರಣವನ್ನು ಮೀರಿ ಬೆಂಬಲ ನೀಡಲು ಜಾತ್ಯತೀತ ಜನತಾದಳ ಸರ್ವಾನುಮತದ ನಿರ್ಣಯ ಕೈಗೊಂಡಿದೆ.

ವಿಧಾನಸೌಧದಲ್ಲಿ ಇಂದು ಸಂಜೆ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಅವರು ತಿಳಿಸಿದರು.

ಕೋವಿಡ್ ಪಾಸಿಟಿವ್ ಕಾರಣಕ್ಕೆ ಹೊಮ್ ಐಸೋಲೇಷನ್ ಆಗಿರುವ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ತಮ್ಮ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಮಳೆ, ನೆರೆ ಕಾರಣಕ್ಕೆ ತಮ್ಮ ಕ್ಷೇತ್ರಗಳಲ್ಲಿಯೇ ಬೀಡುಬಿಟ್ಟಿರುವ ಪಕ್ಷದ ಎಲ್ಲ ಶಾಸಕರು ವರ್ಚುಯಲ್ ವೇದಿಕೆ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಅವರು ಮಾಹಿತಿ ನೀಡಿದರು.

ಹೆಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ ಮಹಿಳೆಯರಿಗೆ ಮೀಸಲು ಸೌಲಭ್ಯ ಕಲ್ಪಿಸಿ ಮಹಿಳಾ ಸಬಲೀಕರಣಕ್ಕೆ ಐತಿಹಾಸಿಕ ಒತ್ತು ನೀಡಿದ್ದರು. ಮೊತ್ತ ಮೊದಲ ಬಾರಿಗೆ ಆದಿವಾಸಿ ಮಹಿಳೆಯೊಬ್ಬರು ರಾಷ್ಟ್ರಪತಿ ಆಗುತ್ತಿರುವುದು ಹೆಮ್ಮೆಯ ಸಂಗತಿ. ಇದು ದೇವೇಗೌಡರ ಆಶಯಕ್ಕೆ ಅನುಗುಣವಾಗಿದೆ. ಶ್ರೀಮತಿ ಮುರ್ಮು ಅವರ ಹಿನ್ನೆಲೆ, ಅವರು ಪ್ರತಿನಿಧಿಸುವ ಸಮುದಾಯವನ್ನು ಗಮನದಲ್ಲಿ ಇಟ್ಟುಕೊಂಡು ಅವರಿಗೆ ಬೆಂಬಲ ನೀಡಲಾಗುತ್ತಿದೆ. ಇದರಲ್ಲಿ ಆ ಪಕ್ಷ ಈ ಪಕ್ಷ ಎನ್ನುವ ಮಾತಿಲ್ಲ. ಅಭ್ಯರ್ಥಿಯನ್ನು ಮಾನದಂಡವಾಗಿಟ್ಟುಕೊಂಡು ಬೆಂಬಲ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಮರುದಿನವೇ ನಮ್ಮ ಪಕ್ಷದ ವರಿಷ್ಠ ನಾಯಕರಾದ ಹೆಚ್.ಡಿ.ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಯಾಚಿಸಿದ್ದರು. ತದ ನಂತರ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಖುದ್ದು ಅವರೇ ತೆರಳಿ ದೇವೇಗೌಡರು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮತ ಕೇಳಿದ್ದರು. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ತೀರ್ಮಾನ ಕೈಗೊಂಡಿದೆ ಎಂದರು.

ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೇ ಮತ ಹಾಕುತ್ತೇವೆ ಎಂದು  ತಿಳಿಸಿದರು.

ಫೋಟೊ ವಿಡಿಯೋ ಬಗ್ಗೆ ಹೆದರಿಕೆ ಯಾಕೆ?

ಸರಕಾರಿ ಕಚೇರಿಯಲ್ಲಿ ಫೋಟೋ, ವಿಡಿಯೋ ನಿಷೇಧ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಂಡೆಪ್ಪ ಕಾಶೆಂಪೂರ್‌ ಅವರು, ನಾವು ಸರಿಯಾಗಿದ್ದರೆ ಫೋಟೊ ವಿಡಿಯೋಗೆ ಯಾಕೆ ಹೆದರಬೇಕು? ಹೀಗೆ ನಿಷೇಧ ಮಾಡಿದ್ರೆ 40% ಆರೋಪ ನಿಜ ಆಗುತ್ತದೆ. ಸರಕಾರ ಪಾರದರ್ಶಕವಾಗಿ ಇದ್ದರೆ ಭಯ ಯಾಕೆ? ಆ ಆದೇಶವನ್ನು ಕೂಡಲೇ ಸರಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಜನತಾಮಿತ್ರ ಸಮಾವೇಶ ಮುಂದಕ್ಕೆ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಇದೇ ತಿಂಗಳು 17 ರಂದು ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದ ʼಜನತಾಮಿತ್ರʼ ಕಾರ್ಯಕ್ರಮವನ್ನು 10 ದಿನಗಳ ಕಾಲ ಮುಂದೂಡಲಾಗಿದೆ ಎಂದು ತಿಳಿಸಿದರು.

ಸಿದ್ದರಾಮೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕಾಶೆಂಪೂರ್ ಅವರು, ನಾವು ಜನರ ಉತ್ಸವ ಮಾಡುತ್ತೇವೆ‌. ಪಕ್ಷ ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಅಂತ ನಾವು ತೋರಿಸಿದ್ದೇವೆ. ನೀರಾವರಿ ವಿಚಾರದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಆದರೆ ಇವತ್ತು ಸುರಿಯುತ್ತಿರುವ ಮಳೆ ನೀರು ಸಮುದ್ರದ ಪಾಲಾಗುತ್ತಿದೆ. ನಮ್ಮ ದೃಷ್ಟಿ ಜನರ ಕಡೆಗೆ. ಹೀಗಾಗಿ ನಾವು ಯಾವುದೇ ಉತ್ಸವ ಮಾಡುವುದಿಲ್ಲ. ನಾವು ಜನರ ಉತ್ಸವ ಮಾಡಿದ್ದೇವೆ. ನಾವು ವಯಕ್ತಿಕ ಉತ್ಸವ ಮಾಡುವುದಿಲ್ಲ. ಜನರಿಗೆ ನಾವು ಏನು ಮಾಡುತ್ತೇವೆ ಎಂಬುದನ್ನು ಹೇಳಿ ಜನರ ಮುಂದೆ ಹೋಗುತ್ತೇವೆ” ಎಂದರು.

ಬಿಜೆಪಿಯವರಿಗೆ ಗಾಬರಿ

ಡಿಸೆಂಬರ್ ನಲ್ಲಿ ಎಲೆಕ್ಷನ್ ಆಗಬಹುದು ಎಂದು ಹೇಳುತ್ತಿದ್ದಾರೆ‌. ನಾವು ಚುನಾವಣಾ ತಯಾರಿಯಲ್ಲಿ ತೊಡಗಿದ್ದೇವೆ. ಬಿಜೆಪಿಯವರು ಗಾಬರಿಯಾಗಿ, ಎಲ್ಲೆಲ್ಲೂ ಹೋಗಿ ಸಭೆ ಮಾಡುತ್ತಿದ್ದಾರೆ. ನಮಗೆ ಗಾಬರಿ ಇಲ್ಲ, ಯಾಕೆಂದರೆ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನ ಮಾಡಿದ್ದಾರೆ. ಹಾಗಾಗಿ ಡಿಸೆಂಬರ್ ನಲ್ಲೇ ಚುನಾವಣೆ ಆಗಲಿ, ಯಾವಾಗಲೇ ಆದರೂ ಚುನಾವಣೆ ನಾವು ಸಿದ್ದರಿದ್ದೇವೆ ಎಂದು ಹೇಳಿದರು.

ಶಾಸಕರಾದ ನಾಗನಗೌಡ ಕುಂದನೂರು, ವೆಂಕಟರಾವ್ ನಾಡಗೌಡ, ಡಾ.ಕೆ.ಅನ್ನದಾನಿ, ಅಶ್ವಿನ್ ಕುಮಾರ್, ನಿಸರ್ಗ ನಾರಾಯಣಸ್ವಾಮಿ, ದೇವಾನಂದ ಚೌಹಾಣ್, ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ ಸೇರಿದಂತೆ ಹಲವು ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.