ನಿವೃತ್ತ ಜಸ್ಟೀಸ್ ನೇತೃತ್ವದ ಸಮಿತಿಗೆ ಗೋಕರ್ಣ ದೇವಸ್ಥಾನದ ನಿರ್ವಹಣೆ ಹೊಣೆ: ಸುಪ್ರೀಂ
ಮೇಲ್ಮನವಿಗೆ ಸುಪ್ರೀಂ ಕೋರ್ಟ್ ಈ ಮಧ್ಯಂತರ ಆದೇಶವನ್ನು ಹೊರಡಿಸಿರುವುದಾಗಿ ತಿಳಿಸಿದೆ.
Team Udayavani, Apr 19, 2021, 1:16 PM IST
ನವದೆಹಲಿ:ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆ ಹೊಣೆಯನ್ನು ಸುಪ್ರೀಂಕೋರ್ಟ್ ನಿವೃತ್ತ ಜಸ್ಟೀಸ್ ಬಿಎನ್ ಶ್ರೀಕೃಷ್ಣ ನೇತೃತ್ವದ ಸಮಿತಿಗೆ ಸುಪ್ರೀಂಕೋರ್ಟ್ ವಹಿಸಿ ಆದೇಶ ನೀಡಿದೆ.
ಗೋಕರ್ಣ ದೇವಸ್ಥಾನದ ನಿರ್ವಹಣೆ ಹೊಣೆಯನ್ನು ರಾಮಚಂದ್ರಾಪುರ ಮಠಕ್ಕೆ ವಹಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಪಡಿಸಿ 2018ರಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗೆ ಸುಪ್ರೀಂ ಕೋರ್ಟ್ ಈ ಮಧ್ಯಂತರ ಆದೇಶವನ್ನು ಹೊರಡಿಸಿರುವುದಾಗಿ ತಿಳಿಸಿದೆ.
ಸುಪ್ರೀಂಕೋರ್ಟ್ ಸಿಜೆಐ ಬೋಬ್ಡೆ, ಜಸ್ಟೀಸ್ ಬೋಪಣ್ಣ ಮತ್ತು ಜಸ್ಟೀಸ್ ರಾಮಸುಬ್ರಮಣಿಯನ್ ನೇತೃತ್ವದ ತ್ರಿಸದಸ್ಯ ಪೀಠ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿ, ಗೋಕರ್ಣ ಮಹಾಬಲೇಶ್ವರ್ ದೇವಸ್ಥಾನದ ಎಲ್ಲಾ ಪೂಜಾ, ವಿಧಿವಿಧಾನಗಳು ಜಸ್ಟೀಸ್ ಬಿಎನ್ ಶ್ರೀಕೃಷ್ಣ ನೇತೃತ್ವದ ಸಮಿತಿಯ ಮೇಲ್ವಿಚಾರಣೆಯಲ್ಲಿ ನಡೆಯಲಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು