ವಿಧಾನ ಪರಿಷತ್ ಸದಸ್ಯರಾಗಿ ಸೂರಜ್ ರೇವಣ್ಣ ಪ್ರಮಾಣವಚನ
Team Udayavani, Jan 28, 2022, 11:05 AM IST
ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಸೂರಜ್ ರೇವಣ್ಣ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸೌಧದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಸಮ್ಮುಖದಲ್ಲಿ ಸೂರಜ್ ಪ್ರಮಾಣವಚನ ಸ್ವೀಕರಿಸಿದರು. ಸೂರಜ್ ತಾಯಿ ಭವಾನಿ ರೇವಣ್ಣ ಉಪಸ್ಥಿತರಿದ್ದರು.
ಹಾಸನ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ಸೂರಜ್ ಅವರು ಇಂದು 10 ಗಂಟೆ 17 ನಿಮಿಷಕ್ಕೆ ಪ್ರಮಾಣ ವಚನ ಸ್ವೀಕರಿಸಿದರು. ಸರಿಯಾದ ಸಮಯಕ್ಕಾಗಿ ಹಲವು ಹೊತ್ತು ಕಾದುಕುಳಿತ ಪ್ರಸಂಗವೂ ನಡೆಯಿತು.
ಇದನ್ನೂ ಓದಿ:ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹೆಚ್ ಡಿ ರೇವಣ್ಣ ಅವರು ಮಗ ಸೂರಜ್ ಪ್ರಮಾಣವಚನ ಸ್ವೀಕರಿಸಿದ ನಂತರ ವಿಳಂಬವಾಗಿ ಬಂದರು. ಶಾಸಕರಾದ ಹೆಚ್ ಕೆ ಕುಮಾರಸ್ವಾಮಿ, ಶಿವಲಿಂಗೇಗೌಡ, ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.