ಮುನಿಯಪ್ಪ ನಿವಾಸಕ್ಕೆ ಸುರ್ಜೇವಾಲ: ಕೆಲ ಹೊತ್ತು ಸಮಾಲೋಚನೆ
ಪಕ್ಷ ತೊರೆಯುವ ಸುದ್ದಿಯ ಕುರಿತು ಮಾಜಿ ಸಚಿವ ಹೇಳಿದ್ದೇನು?
Team Udayavani, Aug 28, 2022, 8:29 PM IST
ಬೆಂಗಳೂರು: ಕೆಲ ಕಾಂಗ್ರೆಸ್ ಮುಖಂಡರ ನಡವಳಿಕೆಯಿಂದ ಮುನಿಸಿಕೊಂಡಿರುವ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಅವರ ನಿವಾಸಕ್ಕೆ ಭಾನುವಾರ ಎಐಸಿಸಿಯ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ನೀಡಿ ಕೆಲ ಹೊತ್ತು ಸಮಾಲೋಚನೆ ನಡೆಸಿದರು.
ಈ ವೇಳೆ ಮಾತನಾಡಿದ ಸುರ್ಜೇವಾಲ, ಕೆ.ಎಚ್.ಮುನಿಯಪ್ಪ ಅವರು ನನ್ನ ಹಿರಿಯ ಸಹೋದರ ಇದ್ದಂತೆ. ಅವರ ಮನೆ ನೋಡಬೇಕು ಎಂದು ಆಸೆಪಟ್ಟಿದ್ದೆ. ಆ ಹಿನ್ನೆಲೆಯಲ್ಲಿ ನಾನು ಅವರ ಮನೆಗೆ ಭೇಟಿ ನೀಡಿದ್ದೇನೆ. ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಸೇರಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದೇನೆ ಎಂದರು.
ಕಾಂಗ್ರೆಸ್‌ನಲ್ಲೆ ಇರುತ್ತೇನೆ
ಕೆ.ಎಚ್.ಮುನಿಯಪ್ಪ ಮಾತನಾಡಿ, ಸುರ್ಜೇವಾಲ ನಮ್ಮ ಕುಟುಂಬದ ಸದಸ್ಯರಾಗಿ ಬಂದಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಇಲ್ಲಿಗೆ ಬಂದಿಲ್ಲ. ಪಕ್ಷ ಸಂಘಟನೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಸುರ್ಜೇವಾಲ ತಂದೆಯ ಕಾಲದಿಂದ ನನ್ನ, ಅವರ ನಡುವೆ ವಿಶ್ವಾಸವಿದೆ ಎಂದು ತಿಳಿಸಿದರು.ನನ್ನ ಎಲ್ಲಾ ವಿಚಾರಗಳನ್ನು ಈಗಾಗಲೇ ಕಾಂಗ್ರೆಸ್ ಹೈಕಮಾಂಡ್‌ಗೆ ತಿಳಿಸಿದ್ದೇನೆ. ನಾನು ಇನ್ನೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ, ಮುಂದೆಯೂ ಇರುತ್ತೇನೆ. ಎಲ್ಲವೂ ಸಮಾಧಾನವಾಗಿ ನಡೆಯುತ್ತಿದೆ, ಬೇರೆ ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ