ಅಪೌಷ್ಟಿಕತೆ ಕಾರಣ ಕಂಡು ಹಿಡಿಯಲು ಸಮೀಕ್ಷೆ

Team Udayavani, Jun 27, 2022, 12:26 PM IST

ಅಪೌಷ್ಟಿಕತೆ ಕಾರಣ ಕಂಡುಹಿಡಿಯಲು ಸಮೀಕ್ಷೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯವನ್ನು ಅದರಲ್ಲೂ ವಿಶೇಷವಾಗಿ ಬೆಳೆಯುತ್ತಿರುವ ಮಕ್ಕಳನ್ನು ಶಾಪವಾಗಿ ಕಾಡುತ್ತಿರುವ ಅಪೌಷ್ಟಿಕ ಸಮಸ್ಯೆಯನ್ನು ಬುಡಸಮೇತ ಕಿತ್ತು ಹಾಕಲು ಸರ್ಕಾರ ಮುಂದಾಗಿದೆ. ಅದಕ್ಕಾಗಿ ಅಪೌಷ್ಟಿಕತೆಗೆ ಮುಖ್ಯ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಲು ರಾಷ್ಟ್ರೀಯ ಆರೋಗ್ಯ ಸಮೀಕ್ಷೆ ಮಾದರಿಯಲ್ಲಿ “ರಾಜ್ಯ ಮಟ್ಟದ ಪೌಷ್ಟಿಕತಾ ಸಮೀಕ್ಷೆ’ ಕೈಗೊಳ್ಳಲು ಯೋಜನೆ ಹಾಕಿಕೊಂಡಿದೆ.

ಈ ಸಮೀಕ್ಷೆ ನಡೆದರೆ ರಾಜ್ಯದಲ್ಲಿ ಅಪೌಷ್ಟಿಕತೆಗೆ ಪ್ರಮುಖ ಕಾರಣಗಳೇನು, ಇದರಲ್ಲಿ ಭೌಗೋಳಿಕತೆ, ಆರೋಗ್ಯ, ಅನುವಂಶೀಯತೆಯ ಪಾತ್ರ ಎಷ್ಟಿದೆ, ಯಾವ ಜಿಲ್ಲೆ, ಯಾವ ತಾಲೂಕುಗಳಲ್ಲಿ ಅಪೌಷ್ಟಿಕತೆ ಸಮಸ್ಯೆ ಹೇಗಿದೆ ಎಂಬ ಬಗ್ಗೆ ಇಡೀ ರಾಜ್ಯದ ಸ್ಪಷ್ಟ ಚಿತ್ರಣ ಸಿಗಲಿದೆ. ಅದರ ಆಧಾರದಲ್ಲಿ ಅಪೌಷ್ಟಿಕತೆ ನಿವಾ ರಣೆಗೆ ಸಮಗ್ರ ಯೋಜನೆ ರೂಪಿಸಲು ಸಾಧ್ಯವಾಗಲಿದೆ. ರಾಷ್ಟ್ರೀಯ ಸಮೀಕ್ಷೆ ಮಾದರಿಯಲ್ಲಿ ರಾಜ್ಯ ಮಟ್ಟದ ಪೌಷ್ಟಿಕತಾ ಸಮೀಕ್ಷೆ ನಡೆಸುವ ಬಗ್ಗೆ 2022-23ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಅದರಂತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯೋನ್ಮುಖವಾಗಿದ್ದು, ಪೌಷ್ಟಿಕತಾ ಸಮೀಕ್ಷೆ ಬಗ್ಗೆ ಪ್ರಾಥಮಿಕ ಹಂತದ ಸಭೆ, ಸಮಾಲೋಚನೆಗಳನ್ನು ಆರಂಭಿಸಿದೆ. ಸಮೀಕ್ಷೆ ಕುರಿತು ಪರಿಕಲ್ಪನಾ ಕರಡು ಸಿದ್ಧವಾಗಿದ್ದು, ರಾಷ್ಟ್ರಮಟ್ಟದ ಸಮೀಕ್ಷಾ ಸಂಸ್ಥೆಗಳಿಗೆ ಈ ಕರಡು ಸಲ್ಲಿಸಿ ಅಭಿಪ್ರಾಯ ಪಡೆದುಕೊಳ್ಳಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಮೀಕ್ಷೆ ಹೇಗೆ?: ರಾಷ್ಟ್ರೀಯ ಆರೋಗ್ಯ ಸಮೀಕ್ಷೆ ಯಲ್ಲಿ ಮಾಹಿತಿ ಸಂಗ್ರಹಿಸುವ ಮಾದರಿಗಳ (ಸ್ಯಾಂಪಲ್‌) ಪ್ರಮಾಣ ತುಂಬಾ ಕಡಿಮೆ ಆಗಿರುತ್ತದೆ. ನಮ್ಮ ರಾಜ್ಯದ ರಾಷ್ಟ್ರೀಯ ಆರೋಗ್ಯ ಸಮೀಕ್ಷೆಯ ಮಾದರಿ ಗಳ ಪ್ರಮಾಣ ಅಂದಾಜು 26 ಸಾವಿರವಷ್ಟೇ ಆಗಿ ರು ತ್ತದೆ. ಇದರಿಂದ ಇಡೀ ರಾಜ್ಯದ ನಿಖರ ಮಾಹಿತಿ ಸಿಗುವುದು ಕಷ್ಟ. ಹಾಗಾಗಿ, ರಾಷ್ಟ್ರೀಯ ಆರೋಗ್ಯ ಸಮೀಕ್ಷೆಯ ಮಾದರಿ ಮತ್ತು ಮಾನದಂಡ ಗಳನ್ನು ಮುಂದಿಟ್ಟುಕೊಂಡು ರಾಜ್ಯ ಮಟ್ಟದ ಪೌಷ್ಟಿಕತಾ ಸಮೀಕ್ಷೆಗೆ ಕ್ರಿಯಾ ಯೋಜನೆ ರೂಪಿಸಲಾಗುವುದು. ಎಲ್ಲಾ 31 ಜಿಲ್ಲೆಗಳಲ್ಲೂ ಆಯಾ ಜಿಲ್ಲೆಗಳು, ತಾಲೂಕುಗಳಲ್ಲಿ ಅಲ್ಲಿನ ಪರಿಸ್ಥಿತಿಗಳಿಗೆ ತಕ್ಕಂತೆ ಪ್ರತ್ಯೇಕ ವಿಧಾನ ಮತ್ತು ಮಾನದಂಡ ಅನುಸರಿಸಲಾಗುವುದು. ಈ ರೀತಿ ಸಮೀಕ್ಷೆ ನಡೆಸಿದರೆ ಪ್ರತಿ ಜಿಲ್ಲೆ ಮತ್ತು ಪ್ರತಿ ತಾಲೂಕಿನ ವಸ್ತುನಿಷ್ಠ ಮಾಹಿತಿ ಸಿಗುತ್ತದೆ. ಈ ಸಮೀಕ್ಷೆಯಿಂದ ಅಪೌಷ್ಟಿಕತೆ ನಿವಾರಣೆಗೆ ಪರಿಣಾಮಕಾರಿ ಯೋಜನೆಗಳನ್ನು ರೂಪಿಸಲು ಅನುಕೂಲವಾಗಲಿದೆ. ಜೊತೆಗೆ ಸಮೀಕ್ಷೆಯ ಅಂಕಿ-ಅಂಶಗಳಿಂದ ಆರೋಗ್ಯ, ಶಿಕ್ಷಣ ಸೇರಿ ಸರ್ಕಾರದ ವಿವಿಧ ಇಲಾಖೆಗಳಿಗೆ ಸಹಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿ ಅಧಿಕಾರಿಗಳು ವಿವರಿಸುತ್ತಾರೆ.

ಅಪೌಷ್ಟಿಕತೆ ನಿವಾರಣೆಗೆ ಸಂಕಲ್ಪ : ವಿವಿಧ ಅಭಿವೃದ್ಧಿ ಸೂಚ್ಯಂಕಗಳಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಸಾಧನೆ ಮಾಡುತ್ತಿರುವ ತಾಲೂಕುಗಳನ್ನು “ಅಭಿವೃದ್ಧಿ ಆಕಾಂಕ್ಷಿ ತಾಲೂಕು’ಗಳೆಂದು ಗುರುತಿಸಿ ಸರ್ಕಾರ ಈ ತಾಲೂಕುಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಅಪೌಷ್ಟಿಕತೆ ನಿವಾರಣೆ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಅಪೌಷ್ಟಿಕತೆ ಕಡಿಮೆ ಮಾಡಲು ಸರ್ಕಾರ ದೃಢಸಂಕಲ್ಪ ಇಟ್ಟುಕೊಂಡಿದೆ. ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಸಮೀಕ್ಷೆಯಲ್ಲಿ ಅಪೌಷ್ಟಿಕತೆ ಸೂಚಕಗಳು ಕಡಿಮೆಯಾಗಿರುವುದರೊಂದಿಗೆ ಅಪೌಷ್ಟಿಕತೆ ನಿವಾರಣೆಯಲ್ಲಿ ಕರ್ನಾಟಕ ಸ್ಥಿರವಾದ ಪ್ರಗತಿ ಸಾಧಿಸಿದೆ. ಸರ್ಕಾರದ ಮಾತೃಪೂರ್ಣ, ಕ್ಷೀರಭಾಗ್ಯ ಮುಂತಾದ ಯೋಜನೆಗಳ ಅನುಷ್ಠಾನ ಉತ್ತಮ ಫ‌ಲಿತಾಂಶ ನೀಡುತ್ತಿದೆ. ಪೌಷ್ಟಿಕ ಕರ್ನಾಟಕ ಎಂಬ ಹೊಸ ಯೋಜನೆ ಜಾರಿಗೆ ತರಲಾಗಿದೆ. ಈಗ ರಾಜ್ಯ ಮಟ್ಟದ ಪೌಷ್ಟಿಕತಾ ಸಮೀಕ್ಷೆ ಕೈಗೊಳ್ಳಲು ನಿರ್ಧರಿಸಲಾಗಿದೆ.

ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

3-egg

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ 9 ಮಂದಿ ಹಿಂದೂ ಕಾರ್ಯಕರ್ತರ ವಿರುದ್ದ ಎಫ್‌ಐಆರ್

ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ

ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ

2-car

ಲಾರಿಗೆ ಕಾರು ಢಿಕ್ಕಿ: ತಂದೆ, ಮಗಳು ಸಾವು; ಮಗು ಗಂಭೀರ

ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ

ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ

1sucide

ಪ್ರಿಯತಮೆ ಬಯಸಿ ಸುಪಾರಿ ಕೊಟ್ಟು, ಭಯದಿಂದ ಆತ್ಮಹತ್ಯೆ ಮಾಡಿಕೊಂಡ!

ಗುರುಪುರ: ಭಾರೀ ಮಳೆ ಸಂದರ್ಭ ಕುಸಿತ : ಹೆದ್ದಾರಿ ದುರಸ್ತಿಗೆ 1.15 ಕೋ ರೂ. ಪ್ರಸ್ತಾವನೆ

ಗುರುಪುರ: ಭಾರೀ ಮಳೆ ಸಂದರ್ಭ ಕುಸಿತ : ಹೆದ್ದಾರಿ ದುರಸ್ತಿಗೆ 1.15 ಕೋ ರೂ. ಪ್ರಸ್ತಾವನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-egg

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ 9 ಮಂದಿ ಹಿಂದೂ ಕಾರ್ಯಕರ್ತರ ವಿರುದ್ದ ಎಫ್‌ಐಆರ್

ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ

ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ

2-car

ಲಾರಿಗೆ ಕಾರು ಢಿಕ್ಕಿ: ತಂದೆ, ಮಗಳು ಸಾವು; ಮಗು ಗಂಭೀರ

1sucide

ಪ್ರಿಯತಮೆ ಬಯಸಿ ಸುಪಾರಿ ಕೊಟ್ಟು, ಭಯದಿಂದ ಆತ್ಮಹತ್ಯೆ ಮಾಡಿಕೊಂಡ!

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

3-egg

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ 9 ಮಂದಿ ಹಿಂದೂ ಕಾರ್ಯಕರ್ತರ ವಿರುದ್ದ ಎಫ್‌ಐಆರ್

ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ

ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ

2-car

ಲಾರಿಗೆ ಕಾರು ಢಿಕ್ಕಿ: ತಂದೆ, ಮಗಳು ಸಾವು; ಮಗು ಗಂಭೀರ

ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ

ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.