ಪ್ರತಿಭಾ ಪುರಸ್ಕಾರ ನಾಳೆ
Team Udayavani, Aug 3, 2019, 3:00 AM IST
ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಆ.4 ರಂದು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಶ್ರೀ ಬಸವೇಶ್ವರ ಸಜ್ಜನ ಮಂಟಪದಲ್ಲಿ ಏರ್ಪಡಿಸಲಾಗಿದೆ ಎಂದು ಮಹಾಸಭಾದ ಅಧ್ಯಕ್ಷ ಎಸ್.ಗುರುಸ್ವಾಮಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2017-18 ಮತ್ತು 2018-19ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ.
ಕಾರ್ಯಕ್ರಮವನ್ನು ವಿಭೂತಿಪುರ ಮಠದ ಶ್ರೀ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಸಾನಿಧ್ಯದಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಸಲಿದ್ದಾರೆ. ಕರ್ನಾಟಕ ರಾಜ್ಯ ಘಟಕದ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷ ಎನ್. ತಿಪ್ಪಣ್ಣ, ಶಾಸಕ ಈಶ್ವರ ಖಂಡ್ರೆ ಸೇರಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.