ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಸ್ಗೆ ಟಂಟಂ ಡಿಕ್ಕಿ; ಮೂವರ ಸಾವು
Team Udayavani, Oct 3, 2019, 3:04 AM IST
ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದ ಬಳಿ ದಾಖಲೆ ಪರಿಶೀಲಿಸಲು ನಿಂತಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳುವ ಧಾವಂತದಲ್ಲಿ ಟಂಟಂ ವಾಹನ ಸಾರಿಗೆ ಬಸ್ಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ಘಟನೆಯಿಂದ ಉದ್ರಿಕ್ತ ಸ್ಥಳೀಯರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿ, ಬಸ್ ಮೇಲೆ ಕಲ್ಲು ತೂರಾಟ ನಡೆಸಿದರು.
ಕೊಲ್ಹಾರ ಪಟ್ಟಣದಲ್ಲಿ ಪೊಲೀಸರು ವಾಹನಗಳ ದಾಖಲೆ ಪರಿ ಶೀಲಿ ಸುತ್ತಿದ್ದರು. ಇದನ್ನು ದೂರದಿಂದಲೇ ಗಮನಿಸಿದ ಪ್ರಯಾ ಣಿಕರನ್ನು ಸಾಗಿಸುತ್ತಿದ್ದ ಟಂಟಂ ವಾಹನದ ಚಾಲಕ, ಪೊಲೀಸರಿಂದ ತಪ್ಪಿಸಿಕೊಳ್ಳಲು ವೇಗ ಹೆಚ್ಚಿಸಿದಾಗ ಎದುರಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್ಗೆ ಡಿಕ್ಕಿ ಹೊಡೆಯಿತು. ಮೃತರನ್ನು ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದ ರಾಮಣ್ಣ (62), ಕಸ್ತೂರಿ ಬಾಗಲಕೋಟೆ (4), ಬೀಳಗಿಯ ಕಸ್ತೂರಿ (32) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಇತರ 8 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಲಾಗುತ್ತಿದೆ.
ದುರ್ಘಟನೆಗೆ ಚಾಲಕರಿಗೆ ಪೊಲೀಸರು ನೀಡುತ್ತಿರುವ ಕಿರುಕುಳ ಕಾರಣ ಎಂದು ಆರೋಪಿಸಿದ ಉದ್ರಿಕ್ತರು, ಸ್ಥಳದಲ್ಲಿದ್ದ ಕೊಲ್ಹಾರ ಪಿಎಸ್ಐ ವಾಹನಕ್ಕೆ ಬೆಂಕಿ ಹಚ್ಚಿ, ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐ ವಾಹನ, ಸಾರಿಗೆ ಬಸ್ಗಳ ಮೇಲೂ ಕಲ್ಲು ತೂರಾಟ ನಡೆಸಿದರು. ಘಟನೆಯಿಂದ ಕೊಲ್ಹಾರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ