ಶಿಕ್ಷಕರ ವಿಶೇಷ ಭತ್ಯೆ ತಡೆ ಸದ್ಯಕ್ಕಿಲ್ಲ

Team Udayavani, Jul 18, 2018, 6:00 AM IST

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ವೃಂದದಿಂದ ಪ್ರೌಢಶಾಲಾ ಸಹ ಶಿಕ್ಷಕ ಹುದ್ದೆಗೆ ಬಡ್ತಿ ಹೊಂದಿದ ಶಿಕ್ಷಕರಿಗೆ ನೀಡಿದ್ದ ವಿಶೇಷ ಭತ್ಯೆ ತಡೆಹಿಡಿಯಲು ಹೊರಡಿಸಿದ್ದ ಆದೇಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ. 2008ರ ಆಗಸ್ಟ್‌ 1ರ ನಂತರ ನೇಮಕಗೊಂಡ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದು ಪ್ರೌಢಶಾಲೆಗೆ ಸಹ ಶಿಕ್ಷಕರಾಗಿ ಬಡ್ತಿ ಹೊಂದಿದ ಶಿಕ್ಷಕರಿಗೆ ಇಲಾಖೆಯಿಂದ ವಿಶೇಷ ಭತ್ಯೆ
ನೀಡಲಾಗುತ್ತಿತ್ತು. ಆದರೆ, ಅದನ್ನು ತಡೆಹಿಡಿ ಯುವಂತೆ 2017ರ ನ.4ರಂದು ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿತ್ತು.

ಇಲಾಖೆಯ ಕ್ರಮ ಖಂಡಿಸಿ ಶಿಕ್ಷಕರು ಮತ್ತು ಶಿಕ್ಷಕ ಸಂಘದಿಂದ ಸರ್ಕಾರ ಮೇಲೆ ಒತ್ತಡ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್‌.ಮಹೇಶ್‌ ಅವರು, ವಿಶೇಷ ಭತ್ಯೆ ಸೇರಿ ಶಿಕ್ಷಕರ ವೇತನ ತಡೆ ಹಿಡಿಯದಂತೆ ಸೂಚಿಸಿದ್ದರು. ಅದರಂತೆ 2008ರ ಆಗಸ್ಟ್‌ ನಂತರ ನೇಮಕವಾಗಿ ಬಡ್ತಿ ಪಡೆದ ಶಿಕ್ಷಕರ ವಿಶೇಷ ಭತ್ಯೆ ಹಾಗೂ ವೇತನ ಕಟಾವಣೆ ಮಾಡದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ