ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರು


Team Udayavani, Sep 5, 2019, 5:25 AM IST

t-24

ತ್ರಿವೇಣಿ
ವಿಟ್ಲ:
ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವ ತ್ರಿವೇಣಿ ಅವರು 2008ರಲ್ಲಿ ಏಮಾಜೆ ಸ.ಕಿ.ಪ್ರಾ. ಶಾಲೆಗೆ ಸಹಶಿಕ್ಷಕಿಯಾಗಿ ನೇಮಕ ಗೊಂಡಿದ್ದರು.

ಇವರು ಹಳೆವಿದ್ಯಾರ್ಥಿಗಳ ಸಹಕಾರದೊಂದಿಗೆ ಉಚಿತ ವಾಹನದ ವ್ಯವಸ್ಥೆ ಮಾಡಿ ವಿದ್ಯಾರ್ಥಿಗಳ ಸಂಖ್ಯಾವೃದ್ಧಿಗೆ ಕಾರಣಕರ್ತರಾಗಿದ್ದಾರೆ. ದಾನಿಗಳ ಮೂಲಕ ಕಂಪ್ಯೂಟರ್‌ ಖರೀದಿಸಿ, 1ನೇ ತರಗತಿಯಿಂದಲೇ ಕಂಪ್ಯೂಟರ್‌ ಶಿಕ್ಷಣ, ವಿವಿಧ ಸಂಘಸಂಸ್ಥೆಗಳು, ದಾನಿಗಳಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ, ನೋಟ್ ಪುಸ್ತಕ, ಕ್ರೀಡಾ ಸಾಮಗ್ರಿ ಇತ್ಯಾದಿ ಒದಗಿಸಿದ್ದಲ್ಲದೇ ಪೀಠೊಪಕರಣಗಳು, 1.50 ಲಕ್ಷ ರೂ. ವೆಚ್ಚದ ಸಾಮಗ್ರಿಗಳ ಕೊಡುಗೆ ಶಾಲಾ ಪ್ರಾರಂಭೋತ್ಸವದಲ್ಲಿ ಹಸ್ತಾಂತರ, ನರೇಗಾ ಯೋಜನೆಯ 6 ಲಕ್ಷ ರೂ. ವೆಚ್ಚದ ಸುಸಜ್ಜಿತ ಆವರಣಗೋಡೆ, ಕೃಷಿ ಸಮಿತಿ ರಚಿಸಿ 1.71 ಲಕ್ಷ ರೂ. ದಾನಿಗಳಿಂದ ಸಂಗ್ರಹಿಸಿ ಶಾಲಾ ಆವರಣದಲ್ಲಿ 100ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ನೆಟ್ಟು, ಅಕ್ಷರ ಕೈತೋಟ ನಿರ್ಮಿಸಿದ್ದಾರೆ. ಪ್ರತಿಭಾ ಪುರಸ್ಕಾರ, ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳನ್ನು ದಾಖಲಿಸಲು ಶ್ರಮ ವಹಿಸಿದ್ದಾರೆ. ಜಿ.ಪಂ. ವತಿಯಿಂದ ಕೃಷಿ ನೀರಾವರಿ ವ್ಯವಸ್ಥೆ, ತಾ.ಪಂ. ವತಿಯಿಂದ ರಂಗಮಂದಿರ‌ ಇತ್ಯಾದಿ ಅಭಿವೃದ್ಧಿ ಕಾರ್ಯ ಮೂಲಕ ಶಾಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ.

ದೊಡ್ಡ ಕೆಂಪಯ್ಯ
ಬಂಟ್ವಾಳ:
ಅನಂತಾಡಿ ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ದೊಡ್ಡ ಕೆಂಪಯ್ಯ ಪ್ರಸ್ತುತ ವರ್ಷದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿ ದ್ದಾರೆ. ಇವರು ಕಳೆದ 18 ವರ್ಷಗಳಿಂದ ಶಿಕ್ಷಕ ವೃತ್ತಿ ಸೇವೆ ನಡೆಸುತ್ತಿದ್ದು, ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾ| ವಡ್ಡರಹಳ್ಳಿ ಗ್ರಾಮದವರು.

ಪುತ್ತೂರು ಬೆಳ್ಳಿಪ್ಪಾಡಿ ಸ.ಹಿ.ಪ್ರಾ. ಶಾಲೆಗೆ ಶಿಕ್ಷಕರಾಗಿ ಪ್ರಥಮ ಸೇರ್ಪಡೆ, ಕರ್ವೆಲು ಹಿ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ, ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಬಿಆರ್‌ಪಿಯಾಗಿ, ಪ್ರಸ್ತುತ ಅನಂತಾಡಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಶಾಲೆಯನ್ನು ನಾಡ ದೇಗುಲವಾಗಿ ರೂಪಿಸಿದ್ದಾರೆ.

ನಲಿಕಲಿ ಶಿಕ್ಷಣ ಅನುಷ್ಠಾನ, ಶಾಲೆಯ ಶತಮಾನೋತ್ಸವ ರೂವಾರಿಯಾಗಿ ಸರ್ವರ ಸಹಕಾರದಲ್ಲಿ ರೂ. 40 ಲಕ್ಷಕ್ಕೂ ಹೆಚ್ಚು ಅನುದಾನ ಶಾಲೆಗೆ ಬರುವಂತೆ ಮಾಡಿದ್ದರು. ಅದರಲ್ಲಿ ರಂಗಮಂದಿರ, ಆಟದ ಮೈದಾನ, ಪ್ರವೇಶ ದ್ವಾರ, ಕೊಠಡಿಗೆ ಟೈಲ್ಸ್, ಧ್ವಜಸ್ತಂಭ, ಬಾಲವನ, ಪೀಠೊಪಕರಣ, ಗ್ರಾಮೀಣ ಕ್ರೀಡಾ ಅನ್ವೇಷಣೆ ಶಿಬಿರ, ಹೈಟೆಕ್‌ ಶೌಚಾಲಯ ನಿರ್ಮಾಣವಾಗಿದೆ. ಪ್ರೊಜೆಕ್ಟರ್‌ ಮೂಲಕ ಬೋಧನೆ, ಕಾಡು ಸಂರಕ್ಷಣೆ ಅರಿವು ಪ್ರವಾಸ, ಜಲ ಮರು ಪೂರಣ ಯೋಜನೆ, ಲೈಬ್ರೆರಿ, ಯಕ್ಷಗಾನ ಚಿತ್ರಕಲೆ ಅಳವಡಿಸಿದ್ದರು. ಇವರ ಸಾಧನೆಗೆ ಯೇನಪೊಯ ಶಿಕ್ಷಕ ಪ್ರಶಸ್ತಿ ಸಂದಿದೆ.

ಸರಕಾರಿ ಶಾಲೆ ಉಳಿಯಬೇಕು. ಕನ್ನಡ ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ಸಿಗುವಂತಾಗಬೇಕು ಎಂಬ ಆಶಯ ಇವರದು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.