ಟಿ.ಎನ್‌.ಶೇಷನ್‌ ನಿಧನಕ್ಕೆ ಗಣ್ಯರ ಕಂಬನಿ

Team Udayavani, Nov 12, 2019, 3:03 AM IST

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್‌.ಶೇಷನ್‌ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಂತಾಪ ಸೂಚಿಸಿದ್ದಾರೆ. ಟಿ.ಎನ್‌.ಶೇಷನ್‌ ಭಾರತೀಯ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅವರ ಕೊಡುಗೆ ಅವಿಸ್ಮರಣೀಯ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ.

ಅವರ ಬಂಧು ವರ್ಗಕ್ಕೆ ನೋವು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಶೇಷನ್‌ ಅವರ ನಿಧನಕ್ಕೆ ಕಂಬನಿ ಮಿಡಿದಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಭಾರತೀಯ ಚುನಾವಣಾ ಕ್ಷೇತ್ರದಲ್ಲಿ ಬಹಳಷ್ಟು ಸುಧಾರಣೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಟಿ.ಎನ್‌.ಶೇಷನ್‌ 1996ರಲ್ಲಿ ರಾಮನ್‌ ಮ್ಯಾಗ್ಸೆಸ್ಸೆ ಪ್ರಶಸ್ತಿಗೆ ಭಾಜನರಾಗಿದ್ದರು. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸಂತಾಪ ಸಲ್ಲಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ