ಪುನೀತ್ ರಾಯಭಾರಿಯಾಗಿರುವ “ಚೆಲುವ ಚಾಮರಾಜನಗರ” ಟೀಸರ್ ಬಿಡುಗಡೆ


Team Udayavani, Nov 11, 2020, 9:07 PM IST

Punith

ಚಾಮರಾಜನಗರ: ಜಿಲ್ಲೆಯಲ್ಲಿರುವ ಆಕರ್ಷಕ ಪ್ರವಾಸಿ ತಾಣಗಳನ್ನು ಪರಿಚಯಿಸಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಚೆಲುವ ಚಾಮರಾಜನಗರ ಶೀರ್ಷಿಕೆಯಡಿ ಚಿತ್ರೀಕರಿಸಲಾಗಿರುವ, ಪುನೀತ್ ರಾಜ್‌ಕುಮಾರ್ ಅವರು ರಾಯಭಾರಿಯಾಗಿರುವ ವಿಡಿಯೋ ಚಿತ್ರಣವನ್ನು ಇದೇ ನವೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲಾಗುವುದೆಂದು ಜಿಲ್ಲಾಧಿಕಾರಿ ಡಾ ಎಂ.ಆರ್. ರವಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಡಿಯೋ ಟೀಸರ್ ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾಧಿಕಾರಿಯವರು ಚಾಮರಾಜನಗರ ಜಿಲ್ಲೆ ಪ್ರಾಕೃತಿಕ ಹಾಗೂ ಸಾಂಸ್ಕೃತಿಕವಾಗಿ ಸಮೃದ್ದವಾಗಿದ್ದು ಸೊಗಸಾಗಿದೆ. ಇಲ್ಲಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಹಾಗೂ ಪ್ರವಾಸೋದ್ಯಮವನ್ನು ಅಭಿವೃದ್ದಿಪಡಿಸುವ ವಿಫುಲ ಅವಕಾಶಗಳಿವೆ. ಇದನ್ನು ತೋರಿಸುವ ಪ್ರಯತ್ನ ವಿಡಿಯೋ ಮೂಲಕ ನಡೆದಿದೆ ಎಂದರು.

ಚಾಮರಾಜನಗರ ಜಿಲ್ಲೆಯನ್ನು ಒಂದೇ ಪದದಲ್ಲಿ ವರ್ಣಿಸಬಹುದಾದರೆ ಪ್ರಕೃತಿ ಸಂಸ್ಕೃತಿಯ ಸಮಾಗಮ. ಇಲ್ಲಿರುವ ಅನೇಕ ಪ್ರಕೃತಿ ಸೌಂದರ್ಯ ತಾಣಗಳು ಬಹಳಷ್ಟು ಜನರ ಕಣ್ಣಿಗೆ ಕಂಡು ಬಂದಿಲ್ಲ. ಜಿಲ್ಲೆಯ ಸಮೃದ್ದ ಅಸೀಮ ಚೆಲುವು ವಿಡಿಯೋ ಮೂಲಕ ಸಿಗಲಿದೆ. ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಪರಿಚಯಿಸುವ ಉದ್ದೇಶದೊಂದಿಗೆ ಚೆಲುವ ಚಾಮರಾಜನಗರ ಹುಲಿಗಳ ನಾಡು ಎಂಬ ಟ್ಯಾಗ್‌ಲೈನ್ ನೊಂದಿಗೆ ಪ್ರವಾಸಿ ತಾಣಗಳನ್ನು ಚಿತ್ರೀಕರಿಸಲಾಗಿದೆ. ವಿಶೇಷವೆಂದರೆ ಈ ಪ್ರಮೋಷನಲ್ ವೀಡಿಯೋಗೆ ಜಿಲ್ಲೆಯವರೇ ಆದ ಕನ್ನಡದ ಹೆಸರಾಂತ ಚಲನಚಿತ್ರ ನಾಯಕ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸಂದೇಶ ನೀಡಿದ್ದಾರೆ ಎಂದರು.

ಜಿಲ್ಲೆಯ ಸಂಸ್ಕೃತಿ ಹಾಗೂ ಪ್ರವಾಸಿ ತಾಣಗಳನ್ನು ಕಟ್ಟಿ ಕೊಡುವ 4 ನಿಮಿಷಕ್ಕೂ ಹೆಚ್ಚಿನ ಅವಧಿಯ ವೀಡಿಯೋಗೆ ಪುನೀತ್ ರಾಜ್‌ಕುಮಾರ್ ಅವರನ್ನು ಕೇಳಿಕೊಂಡಾಗ ಸಂತೋಷದಿಂದಲೇ ಒಪ್ಪಿಕೊಂಡರು. ಅವರು ಕೇವಲ ಜಿಲ್ಲೆಯ ಪ್ರವಾಸೋದ್ಯಮ ರಾಯಭಾರಿ ಮಾತ್ರವಲ್ಲ. ಈಗಾಗಲೇ ಚಾಮರಾಜನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗಾಗಿ ರಾಯಭಾರಿಯಾಗಿದ್ದಾರೆ. ಮೇರು ನಟ ಪುನೀತ್ ಅವರು ಯಾವುದೇ ಸಂಭಾವನೆ ಇಲ್ಲದೇ ಅಭಿಮಾನದಿಂದ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿಗೆ ಪೂರಕವಾಗಿರುವ ವೀಡಿಯೋಗೆ ಸಂದೇಶ ನೀಡಿದ್ದಾರೆ. ಇದಕ್ಕಾಗಿ ವೈಯಕ್ತಿಕವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲೆ ಜನತೆ ಪರವಾಗಿ ಹೃತ್ಪೂರ್ವಕ ಅಭಿನಂದನೆಯನ್ನು ಸಲ್ಲಿಸುತ್ತೇನೆ. ವೀಡಿಯೋ ನೀಡಿದ ಸಂದೇಶಕ್ಕಾಗಿ ಧನ್ಯವಾದಗಳನ್ನು ತಿಳಿಸುವ ಪತ್ರವನ್ನು ಸಹ ಪುನೀತ್ ರಾಜ್‌ಕುಮಾರ್ ಅವರಿಗೆ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದೇ ನ. 25, 26ರಂದು ಮಲೈಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿ ಅವರು ಬರುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿಯೂ ಅಧಿಕೃತವಾಗಿ ವಿಡಿಯೋ ಬಿಡುಗಡೆ ಮಾಡಬೇಕು ಎಂಬ ಉದ್ದೇಶ ಇದೆ. ಇದು ಸಾಧ್ಯವಾಗದಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದಲೂ ಬಿಡುಗಡೆಗೊಳಿಸುವ ಬಗ್ಗೆಯೂ ಚಿಂತನೆ ನಡೆದಿದೆ. ಒಟ್ಟಾರೆ ನವೆಂಬರ್ ತಿಂಗಳಿನಲ್ಲಿಯೇ ಕಾರ್ಯಕ್ರಮ ಆಯೋಜಿಸಿ ವಿಡಿಯೋ ಬಿಡುಗಡೆ ಮಾಡಲಾಗುವುದು. ಈ ಸಂದರ್ಭದಲ್ಲಿ ವರ್ಚುವೆಲ್ ಆಗಿ ಪುನೀತ್ ರಾಜ್‌ಕುಮಾರ್ ಅವರು ಭಾಗವಹಿಸಲು ಕೋರಲಾಗಿದೆ ಎಂದರು.

ಜಿಲ್ಲೆಯಲ್ಲಿ 2 ಹುಲಿ ಸಂರಕ್ಷಿತ ಧಾಮಗಳು ಇವೆ. ಅಗಾಧ ಪ್ರಾಕೃತಿಕ ಸಂಪತ್ತು ಹೊಂದಿರುವ ಪ್ರವಾಸಿ ಸ್ಥಳಗಳ ಕುರಿತು ಮಾಹಿತಿ ನೀಡುವ ಕಾಫಿ ಟೇಬಲ್ ಬುಕ್‌ಗಳನ್ನು ರೆಸಾರ್ಟ್‌ಗಳು, ವಿಮಾನ ನಿಲ್ದಾಣ ಸೇರಿದಂತೆ ಪ್ರವಾಸಿಗರು ಬರುವ ಸ್ಥಳಗಳಲ್ಲಿ ಇಡುವ ವ್ಯವಸ್ಥೆಗೆ ಚಿಂತನೆ ಮಾಡಲಾಗಿದೆ. ಪ್ರವಾಸಿ ತಾಣಗಳಿಗೆ ದೇಶ ವಿದೇಶಿಗರನ್ನು ಆಕರ್ಷಿಸಿ ಇಲ್ಲಿನ ಪ್ರವಾಸೋದ್ಯಮವನ್ನು ಅಭಿವೃದ್ದಿ ಪಡಿಸುವ ಮಹತ್ತರ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಪ್ರವಾಸೋದ್ಯಮ ಅಭಿವೃದ್ದಿ ಕುರಿತ ಚೆಲುವ ಚಾಮರಾಜನಗರ ವಿಡಿಯೋದ ಟೀಸರ್ ಪ್ರದರ್ಶನ ಮಾಡಲಾಯಿತು.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.