ಜಿಲ್ಲೆಗೊಂದು ತಾಂತ್ರಿಕ ಶಿಕ್ಷಣ ಶಾಲೆ: ಸಿಎಂ
Team Udayavani, Aug 18, 2021, 6:30 AM IST
ಬೆಂಗಳೂರು: ರಾಜ್ಯದ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ಪಡೆದು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನ ಮಾಡುವ ಜತೆಗೆ ಯುವ ಜನತೆ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗು ವಂತೆ ಜಿಲ್ಲೆಗೊಂದು ತಾಂತ್ರಿಕ ಶಿಕ್ಷಣ ಶಾಲೆಯನ್ನು ಪ್ರಾರಂಭಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.
ಮಂಗಳವಾರ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು ಈ ಕ್ಷೇತ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕುರಿತು ಚರ್ಚೆ ನಡೆಸಿದರು.
ಎನ್‌ಇಪಿ ಸಂಬಂಧ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಈ ನೀತಿ ಜಾರಿಗೆ ರಾಜ್ಯ ಶಿಕ್ಷಣ ಆಯೋಗ ಮತ್ತು ಇತರ ಸಾಂಸ್ಥಿಕ ವ್ಯವಸ್ಥೆಯನ್ನು ಸ್ಥಾಪಿಸುವ ಕುರಿತೂ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಮತ್ತು ಖಾಸಗಿಯವರ ಸಹಯೋಗ ಪಡೆದುಕೊಳ್ಳಲು ಸೂಚನೆ ನೀಡಿದರು. ರಾಜ್ಯದ ಉನ್ನತ ಶಿಕ್ಷಣದ ದಾಖಲಾತಿ ಪ್ರಮಾಣ ಶೇ.32ರಷ್ಟು ಇದ್ದು, ಶೇ. 50ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಪೂರಕವಾಗಿ ಬಿ.ಇಡಿ, ಡಿ.ಇಡಿ ಪಠ್ಯವನ್ನು ಪರಿಣಾಮಕಾರಿಯಾಗುವಂತೆ ಪರಿಷ್ಕರಿಸಲು ನಿರ್ದೇಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ