
108 ನಲ್ಲಿ ತಾಂತ್ರಿಕ ದೋಷ; ಜನರಿಗೆ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗೆ ಕ್ರಮ: ಕೆ.ಸುಧಾಕರ್
Team Udayavani, Sep 25, 2022, 3:13 PM IST

ಬೆಂಗಳೂರು: 108 -ಆಂಬ್ಯುಲೆನ್ಸ್ ಸೇವೆಗಳ ಸಹಾಯವಾಣಿಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಸೃಷ್ಟಿಯಾಗಿದ್ದು, ಅದಕ್ಕೆ ಪೂರಕವಾಗಿ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯದ ಜನರು ಈ ಕುರಿತು ಯಾವುದೇ ಆತಂಕಕ್ಕೊಳಗಾಗುವುದು ಬೇಡ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಐಟಿ ಹಾರ್ಡ್‌ವೇರ್‌ನಲ್ಲಿ ಸಮಸ್ಯೆ ಸೃಷ್ಟಿಯಾಗಿದ್ದು, ಅದನ್ನು ಗುತ್ತಿಗೆ ಪಡೆದುಕೊಂಡಿರುವ ಜಿವಿಕೆ-ಇಎಂಆರ್ ಐ ಸಂಸ್ಥೆ ಶೀಘ್ರದಲ್ಲೇ ಬಗೆಹರಿಸಲಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಅನ್ನುವ ನಿಟ್ಟಿನಲ್ಲಿ ಇಲಾಖೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. 108 -ಸಹಾಯವಾಣಿ ಕರೆಗಳು ಆಟೋಮ್ಯಾಟಿಕ್ ಆಗಿ ಕರೆಗಳನ್ನು ಸ್ವೀಕರಿಸಿ 2 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ವಾಹನ ಹಂಚಿಕೆ ಕಾರ್ಯ ಮಾಡುತ್ತಿತ್ತು. ತಾಂತ್ರಿಕ ಸಮಸ್ಯೆಯಿಂದ ಈಗ ಈ ಪ್ರಕ್ರಿಯೆಗೆ 6 ರಿಂದ 7 ನಿಮಿಷಗಳ ಕಾಲ ತೆಗೆದುಕೊಳ್ಳಲಾಗುತ್ತಿದೆ. ಪ್ರತಿದಿನ 7 ರಿಂದ 8 ಸಾವಿರ ಕರೆಗಳ ಬದಲು 2 ರಿಂದ 2.5 ಸಾವಿರ ಕರೆಗಳನ್ನು ಮಾತ್ರ ಸ್ವೀಕರಿಸಲು ಸಾಧ್ಯವಾಗುತ್ತಿದೆ.
ಈಗಾಗಲೇ ಎಲ್ಲಾ ಆಸ್ಪತ್ರೆಗಳಿಗೆ ಇಂಟರ್ ಫೆಸಿಲಿಟಿ ಟ್ರಾನ್ಸ್‌ಫರ್‌ಗಳಿಗೆ ಮೊದಲ ಆದ್ಯತೆ ನೀಡಬೇಕೆಂದು ಸೂಚಿಸಲಾಗಿದೆ. ಆಂಬ್ಯುಲೆನ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಗಳಿಗೂ ಕರೆ ಬಂದರೆ ಸ್ವೀಕರಿಸಿ ಅಗತ್ಯ ಸೇವೆಗಳನ್ನು ಮಾಡಬೇಕೆಂದು ಸೂಚಿಸಲಾಗಿದೆ. ಮ್ಯಾನ್ಯುವಲ್ ಐಡಿಗಳನ್ನು ಕ್ರಿಯೇಟ್ ಮಾಡಿ ಆ ಮೂಲಕವೂ ಜನರಿಗೆ ತುರ್ತು ಸೇವೆ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಇದನ್ನೂ ಓದಿ:ಶಿವಾಜಿ ನಾಡಿನಲ್ಲಿ ಪಾಕಿಸ್ಥಾನ ಜಿಂದಾಬಾದ್ ಕೂಗುವ ಹಕ್ಕು ಯಾರಿಗೂ ಇಲ್ಲ: ಶಿಂಧೆ
ತುರ್ತು ಸೇವೆ ಒದಗಿಸುವ 112 ಸಹಾಯವಾಣಿಯಲ್ಲಿರುವ 2-3 ಸಿಬ್ಬಂದಿ ಬದಲು ಅಲ್ಲಿಗೆ 7-8 ಸಿಬ್ಬಂದಿ ನಿಯೋಜನೆ ಮಾಡಲು ಸೂಚಿಸಲಾಗಿದೆ. ಈ ಮೂಲಕ 108 ಸಹಾಯವಾಣಿಯ ತಂಡದ ಮುಖ್ಯಸ್ಥರಿಗೆ ಕರೆಗಳನ್ನು ಡೈವರ್ಟ್ ಮಾಡಿ ಆ ಮೂಲಕ ಮ್ಯಾನ್ಯುವಲ್ ಐಡಿ ಜನರೇಟ್ ಮಾಡಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಇದರ ಜೊತೆಗೆ 104- ಸಹಾಯವಾಣಿಯನ್ನು ಕೂಡ ಬಳಸಿಕೊಂಡು 108 -ಸಹಾಯವಾಣಿ ಮೇಲಿನ ಒತ್ತಡ ಕಡಿಮೆ ಮಾಡಲಾಗುತ್ತಿದೆ. ಮಿಸ್ಡ್ ಕಾಲ್‌ಗಳನ್ನು ಕೂಡ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದ್ದು, 108 ಸಹಾಯವಾಣಿಯಲ್ಲಿರುವ ಏಜೆಂಟ್‌ಗಳ ಸಂಖ್ಯೆಯನ್ನು ಕೂಡ ಹೆಚ್ಚಿಸಲು ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ತಾಂತ್ರಿಕ ಸಮಸ್ಯೆಯಿಂದ 108 ಆರೋಗ್ಯ ಕವಚ ಆಂಬ್ಯುಲೆನ್ಸ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಹಾಗೂ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.@DHFWKA
1/4— Dr Sudhakar K (@mla_sudhakar) September 25, 2022
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್

ಸರಕಾರಕ್ಕೆ ನಾಚಿಕೆಗೇಡು; ಸಮವಸ್ತ್ರ ,ಶೂ ನೀಡದಿರುವುದಕ್ಕೆ ಹೈಕೋರ್ಟ್ ತರಾಟೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಶವ ಪತ್ತೆ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

Union Budget 2023: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ