ರಾಮನಗರದಲ್ಲಿ ತಿಮ್ಮಪ್ಪನ ದೇಗುಲ
ಸರ್ಕಾರದಿಂದ 15 ಎಕರೆ ಭೂಮಿ, ಜಾಗ ಗುರುತಿಸಲು ಸೂಚನೆ
Team Udayavani, Jun 8, 2019, 6:00 AM IST
ಬೆಂಗಳೂರು: ಎಲ್ಲವೂ ಅಂದುಕೊಂಡಂತಾದರೆ, ತಿರುಪತಿ ತಿಮ್ಮಪ್ಪನ ದೇಗುಲವನ್ನು ರಾಮನಗರದಲ್ಲೂ ನೋಡಬಹುದು! ಹೌದು, ರಾಮನಗರ ಜಿಲ್ಲೆಯಲ್ಲಿ ವೆಂಕಟೇಶ್ವರ ದೇವಸ್ಥಾನ ಮತ್ತು ಸಮುದಾಯ ಭವನಕ್ಕೆ ಮುಂದಾಗಿರುವ ಸರ್ಕಾರ, ಇದಕ್ಕಾಗಿ 15 ಎಕರೆ ಜಾಗ ನೀಡಲು ಮುಂದಾಗಿದೆ. ಶೇಷವೆಂದರೆ, ಈ ದೇಗುಲವನ್ನು ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್ ವತಿಯಿಂದಲೇ ನಿರ್ಮಿಸಲಾಗುತ್ತದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಧಾರ್ಮಿಕ ದತ್ತಿ ಇಲಾಖೆ ಅಧೀನದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಟಿಟಿಡಿ ವತಿಯಿಂದ ವೆಂಕಟೇಶ್ವರ ದೇಗುಲ, ಸಮುದಾಯ ಭವನವೂ ನಿರ್ಮಾಣವಾಗಲಿದೆ. ಇದಕ್ಕಾಗಿ ಅಗತ್ಯ ಇರುವ 15 ಎಕರೆ ಜಮೀನು ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
ತಿರುಪತಿಯಲ್ಲಿ ಛತ್ರ: ಇನ್ನು ತಿರುಮಲ ತಿರುಪತಿಯಲ್ಲಿ ಸರ್ಕಾರದ ವತಿಯಿಂದಲೇ ಛತ್ರ ನಿರ್ಮಾಣವಾಗಲಿದೆ. 26 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವಂತೆ ಸಿಎಂ ಕುಮಾರಸ್ವಾಮಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ವಿಚಿತ್ರವೆಂದರೆ ಕೇವಲ ಹಳೇಮೈಸೂರು ಭಾಗದ ದೇಗುಲಗಳ ಅಭಿವೃದ್ಧಿ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ