ಹತ್ತು ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪೂರ್ಣ

Team Udayavani, Jul 11, 2018, 6:00 AM IST

ವಿಧಾನಸಭೆ: ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆ ಭರ್ತಿಗೆ ಸರ್ಕಾರ ತೀರ್ಮಾನಿಸಿದ್ದು ಪ್ರಸಕ್ತ ಸಾಲಿನಲ್ಲಿ ಹತ್ತು ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್‌. ಮಹೇಶ್‌ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸುಭಾಷ್‌ ಗುತ್ತೇದಾರ್‌ ಅವರ ಪ್ರಶ್ನೆಗೆ ಉತ್ತರಿಸಿ ದ ಅವರು, ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು ಅಲ್ಲಿವರೆಗೆ ಕಾರ್ಯನಿರ್ವಹಿಸಲು 25600 ಅತಿಥಿ ಶಿಕ್ಷಕರ ಹುದ್ದೆ ಭರ್ತಿ ಮಾಡಲು ಅನುಮತಿ ನೀಡಲಾಗಿದೆ ಎಂದರು. ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 12500 ಹುದ್ದೆ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 3100 ಹುದ್ದೆಗಳು ಸೇರಿ ಒಟ್ಟು 15600 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಲಾಗುವು ದು. 10 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಭರ್ತಿಯಾಗಿ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ನಂತರ ಅತಿಥಿ ಶಿಕ್ಷಕರ ನೇಮಕಾತಿ ತನ್ನಿಂತಾನೆ ರದ್ದಾಗುತ್ತದೆ ಎಂದರು.

ಆಕ್ಷೇಪ: ಶಿಕ್ಷಕರ ಕೊರತೆ ಬಗ್ಗೆ ಸದಸ್ಯರು ಕೇಳಿದ ಪ್ರಶ್ನೆಗೆ ಮಾಜಿ ಸಚಿವ ತನ್ವೀರ್‌ ಸೇಠ್  ಉತ್ತರಿಸಲು ಮುಂದಾದಾಗ ಬಿಜೆಪಿಯ ಅರವಿಂದ ಲಿಂಬಾವಳಿ ಸೇರಿ ಪ್ರತಿಪಕ್ಷ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಸಚಿವರ ಪರವಾಗಿ ಇವರೇಕೆ ಉತ್ತರಿಸುತ್ತಾರೆ ಎಂದು ಪ್ರಶ್ನಿಸಿದರು. ಆಗ ಕಾಂಗ್ರೆಸ್‌-ಜೆಡಿಎಸ್‌ ಸದಸ್ಯರು ಹಿಂದೆ ಅವರು ಇಲಾಖೆ ನಿರ್ವಹಿಸಿದ್ದರಿಂದ ಕೆಲವು ಮಾಹಿತಿ ನೀಡುತ್ತಿದ್ದಾರೆ ಅಷ್ಟೆ ಎಂದು ಸಮಜಾಯಿಷಿ ನೀಡಿದರು. ಅದಕ್ಕೆ ಸಿ.ಟಿ.ರವಿ, ಹಾಗಲ್ಲ, ಸಚಿವ ಸ್ಥಾನ ಕೊಟ್ಟಿಲ್ಲ ಎಂಬ ನೋವಿದೆ. ಅದಕ್ಕೆ ಉತ್ತರ ಕೊಟ್ಟು ಸಮಾಧಾನ  ಪಡುತ್ತಿದ್ದಾರೆ ಎಂದು ಕಾಳೆದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ