ರಾಜ್ಯದ 19ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಥಾವರ್ ಚಂದ್ ಗೆಹ್ಲೋಟ್
Team Udayavani, Jul 11, 2021, 11:12 AM IST
ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರು ನೂತನ ರಾಜ್ಯಪಾಲರಿಗೆ ಪ್ರಮಾಣ ವಚನ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಇದನ್ನೂ ಓದಿ:ಗ್ರಾಮ್ಯ ಭಾಷೆಯನ್ನು ಸುಮಲತಾ ಅಪಾರ್ಥ ಮಾಡಿಕೊಂಡಿದ್ದಾರೆ- ಎಚ್.ಕೆ.ಕುಮಾರಸ್ವಾಮಿ
ನಿರ್ಗಮಿತ ರಾಜ್ಯಪಾಲ ವಿ.ಆರ್.ವಾಲ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಹಸ್ತಾಂತರ ಮಾಡಿ ಶುಭ ಹಾರೈಸಿದರು.
ಥಾವರಚಂದ್ ಗೆಹ್ಲೋಟ್ ಅವರು ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಕೇಂದ್ರ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರಾದ ಬಸವರಾಜ ಬೊಮ್ಮಾಯಿ, ಕೆ.ಸುಧಾಕರ್, ಆರ್.ಅಶೋಕ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ