ಮೈತ್ರಿ ಸರ್ಕಾರ ಬಹಳ ದಿನ ಉಳಿಯಲ್ಲ
Team Udayavani, Jun 29, 2019, 3:00 AM IST
ದಾವಣಗೆರೆ: “ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಎಷ್ಟು ದಿನ ಉಳಿಯುತ್ತದೋ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಲೇಬಾರದು ಎಂಬ ಒಂದೇ ಕಾರಣಕ್ಕೆ ಸರ್ಕಾರ ಉಳಿದುಕೊಂಡಿದೆ’ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬಿಜೆಪಿ ಕಾರ್ಯಾಲಯದಲ್ಲಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ರಾಜಕೀಯ ಚಾಣಾಕ್ಷರಾದ ಎಚ್.ಡಿ. ದೇವೇಗೌಡರೇ ಮಧ್ಯಂತರ ಚುನಾವಣೆ ಬಗ್ಗೆ ಹೇಳಿರುವುದನ್ನು ಗಮನಿಸಿದರೆ ಮೈತ್ರಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದರು.
ವಿಧಾನಸಭೆಯಲ್ಲಿ ಕೆಲಸ ಮಾಡಬೇಕಾದ ಮುಖ್ಯಮಂತ್ರಿ ಕುಮಾರಸ್ವಾಮಿ ಪಂಚತಾರಾ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡಿದ್ದರು. ಪಂಚತಾರಾ ಹೋಟೆಲ್‌ನಿಂದ ಗ್ರಾಮವಾಸ್ತವ್ಯ, ಗ್ರಾಮವಾಸ್ತವ್ಯದಿಂದ ನೇರ ಅಮೆರಿಕಾಕ್ಕೆ ಹಾರಿದ್ದಾರೆ ಎಂದು ವ್ಯಂಗ್ಯವಾಡಿದರು.