ಸರ್ಕಾರ ಬೀಳಿಸುವ ಚೆಂಡು ಬಿಜೆಪಿ, ಅತೃಪ್ತರ ಕಡೆಗಿದೆ

Team Udayavani, May 27, 2019, 6:00 AM IST

ಬೆಳಗಾವಿ: ಕಾಂಗ್ರೆಸ್‌ ಪಕ್ಷದಲ್ಲಿ ನಾಲ್ಕೈದು ಅತೃಪ್ತ ಶಾಸಕರಿದ್ದು, ಈಗಾಗಲೇ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ, ಅವರಿಂದ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅತೃಪ್ತ ಶಾಸಕರು ಯಾರು?, ಅವರು ಎಲ್ಲಿಗೆ ಹೊರಟಿದ್ದಾರೆ?, ಯಾರು, ಯಾವ ರೆಸಾ ರ್ಟ್‌ಗೆ ಹೋಗುತ್ತಿದ್ದಾರೆ? ಎಂಬುದನ್ನು ಈಗ ಹುಡುಕಬೇಕು. ಅದರ ಬಗ್ಗೆ ಅವರೇ ಹೇಳಬೇಕು. ನಮ್ಮ ಸರ್ಕಾರ ಸುರಕ್ಷಿತವಾಗಿದೆ. ಚೆಂಡು ಈಗ ಬಿಜೆಪಿ ಹಾಗೂ ಅತೃಪ್ತರ ಕಡೆಗೆ ಇದೆ. ಅದರ ಬಗೆಗೆ ಅವರೇ ಹೇಳಬೇಕು. ಆದರೆ, ಸರ್ಕಾರ ಉರುಳಿಸಲು ಹೆಚ್ಚಿನ ಸಂಖ್ಯೆಯ ಶಾಸಕರು ಬೇಕು.

ಕುಮಾರಸ್ವಾಮಿ ರಾಜೀನಾಮೆ ಕೊಡುವ ಅಗತ್ಯತೆ ಇಲ್ಲ. ಕಾಂಗ್ರೆಸ್‌ ಮುಖಂಡ ರೋಷನ್‌ ಬೇಗ್‌ ಅವರು ಪ್ರಧಾನಿ ಮೋದಿಗೆ ಶುಭಾಶಯ ಹೇಳಿದ್ದರಲ್ಲಿ ತಪ್ಪೇನಿಲ್ಲ. ಅದು ಶಿಷ್ಟಾಚಾರ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಅತೃಪ್ತರನ್ನು ಸಮಾಧಾನಪಡಿಸಲು ಹಾಗೂ ಸರ್ಕಾರ ಉಳಿಸಿಕೊಳ್ಳಲು ಕೆಲವು ಸಚಿವರ ರಾಜೀನಾಮೆ ಪಡೆಯಲಿ ದ್ದಾರೆ ಎಂಬ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ