ಸಂವಿಧಾನ ಬದಲಿಸಲು ಬಿಡಲ್ಲ: ರಾಹುಲ್‌


Team Udayavani, May 8, 2018, 6:25 AM IST

180507kpn86.jpg

ಮಾಲೂರು: ಕೇಂದ್ರ ಸಂಪುಟದ ಮಂತ್ರಿಗಳು ಸಂವಿಧಾನ ಬದಲಿಸುವ ಹೇಳಿಕೆ ನೀಡುತ್ತಿದ್ದರೂ, ನರೇಂದ್ರ ಮೋದಿ·ಪರೋಕ್ಷವಾಗಿ ದಲಿತರು ಮತ್ತು ಮುಸ್ಲಿಂರ ದಮನಕ್ಕೆ ಸಹಕಾರ ನೀಡುತ್ತಿದ್ದಾರೆ. ಸಿದ್ಧಾಂತ ರಹಿತ ಆರ್‌ಎಸ್‌ಎಸ್‌, ಬಿಜೆಪಿ ಹಾಗೂ ಹಿಂದುಪರ ಸಂಘಟನೆಗಳಿಂದ ಸಂವಿಧಾನವನ್ನು ಬದಲಿಸಲು ಬಿಡುವುದಿಲ್ಲ’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಕೋಲಾರ ಜಿಲ್ಲೆ ಮಾಲೂರಿನಲ್ಲಿ ಸೋಮವಾರ ಕಾಂಗ್ರೆಸ್‌ ರೋಡ್‌ ಶೋ ನಂತರ ಬಾಲಾಜಿ ವೃತ್ತದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.

“ಸಿದ್ಧಾಂತ ಮತ್ತು ಮೌಲ್ಯಗಳಿಲ್ಲದ ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ವಿರೋಧಿ ಮಾತನಾಡುತ್ತಿರುವ ಮೋದಿ, ಕರ್ನಾಟಕದಲ್ಲಿ ಭ್ರಷ್ಟಾಚಾರದ ಭಾಗಿಗಳಾಗಿ ಜೈಲು ಸೇರಿದ್ದ ಮಾಜಿ ಮುಖ್ಯಮಂತ್ರಿಗಳು ಮತ್ತು ಅವರ ಸಂಪುಟದ ಮಾಜಿ ಮಂತ್ರಿಗಳನ್ನು ವೇದಿಕೆ ಮೇಲೆ ಕೂರಿಸಿಕೊಂಡು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ’ ಎಂದು ವಾಗ್ಧಾಳಿ ನಡೆಸಿದರು.

ಕರ್ನಾಟಕದ ಚುನಾವಣೆ ಕೇವಲ ಪಕ್ಷ ಪಕ್ಷಗಳ ಚುನಾವಣೆಯಲ್ಲ. ಸಿದ್ಧಾಂತ ರಹಿತ ಬಿಜೆಪಿ, ಸಂಘ ಪರಿವಾರಗಳು ಮತ್ತು ಮಹಾತ್ಮ ಗಾಂಧಿ ಅವರ ತತ್ವ ಸಿದ್ಧಾಂತಗಳ ಮೇಲಿನ ಮೌಲ್ಯದ ನಡುವಿನ ಚುನಾವಣೆಯಾಗಿದೆ.ಇದರ ನಡುವೆ ಜೆಡಿಎಸ್‌ ಪಕ್ಷ ಅವಕಾಶವಾದಿ ರಾಜಕಾರಣಕ್ಕೆ ಅಣಿಯಾಗಿದೆ ಎಂದರು.

ಇಂಧನ ಬೆಲೆ ಹೆಚ್ಚಳ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಕಡಿಮೆಯಾಗಿದ್ದರೂ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಗಳನ್ನು ಇಳಿಸದ ಕೇಂದ್ರ ಸರ್ಕಾರ ಅಧಿಕವಾಗಿ ಬರುತ್ತಿರುವ ಲಾಭವನ್ನು ಏನುಮಾಡುತ್ತಿದೆ ಎಂದು ಪ್ರಶ್ನಿಸಿದ ಅವರು, ಹೊಗೆ ರಹಿತ ಭಾರತ ಮಾಡಲು ಮುಂದಾಗಿರುವ ಮೋದಿ,ಅಡುಗೆ ಅನಿಲದ ಬೆಲೆಯನ್ನು ಗಗನ ಮುಖೀಯಾಗಿಸಿದ್ದಾರೆ ಎಂದರು. ನಂತರ ರಾಹುಲ್‌ ಗಾಂಧಿ ಅವರು ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರದಲ್ಲಿ ಪ್ರಚಾರ ನಡೆಸಿದರು.

ಪ್ರತಿಭಟನೆಯೇ ಪ್ರಚಾರವಾಯಿತು!
ಮಾಲೂರು:
ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಕೋಲಾರ ಜಿಲ್ಲೆಯ
ಮಾಲೂರಿನಲ್ಲಿ ಪೆಟ್ರೋಲಿಯಂ ವಸ್ತುಗಳ ದರ ಏರಿಕೆ ವಿರುದ್ಧ ಸೈಕಲ್‌ ಏರಿ ಪ್ರತಿಭಟನೆ ಮಾಡಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಕಡಿಮೆಯಾಗಿದ್ದರೂ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಗಳನ್ನು ಇಳಿಸದ ಕೇಂದ್ರ ಸರ್ಕಾರ ಅಧಿಕವಾಗಿ ಬರುತ್ತಿರುವ ಲಾಭವನ್ನು ಏನುಮಾಡುತ್ತಿದೆ ಎಂದು ಅವರು ಪ್ರಶ್ನಿಸಿದರು. ಅಲ್ಲದೆ ಹೊಗೆ ರಹಿತ ಭಾರತ ಮಾಡಲು ಮುಂದಾಗಿರುವ ನರೇಂದ್ರ ಮೋದಿ, ಅಡುಗೆ ಅನಿಲದ ಬೆಲೆಯನ್ನು ಗಗನ ಮುಖೀಯಾಗಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

ಪ್ರತಿಭಟನೆ ವೇಳೆ ಕೊಂಚ ದೂರು ಸೈಕಲ್‌ ತುಳಿದರಲ್ಲದೇ, ಬಳಿಕ ಅಡುಗೆ ಅನಿಲದ ಸಿಲಿಂಡರ್‌ ಮಾದರಿಗಳನ್ನು ಹಿಡಿದು ಹೆಜ್ಜೆ ಹಾಕಿದರು. ಬಳಿಕ ಎತ್ತಿನ ಗಾಡಿ ಏರಿ ಪ್ರತಿಭಟನೆಗೆ ಸಾಥ್‌ ನೀಡಿದರು.

ಇದಕ್ಕೂ ಮುನ್ನ ಕಾಂಗ್ರೆಸ್‌ ಪ್ರಚಾರ ಸಭೆಯ ರೋಡ್‌ ಶೋನ ನಂತರ ಬಾಲಾಜಿ ವೃತ್ತದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸಚಿವ ಸಂಪುಟದ ಮಂತ್ರಿಗಳು ಸಂವಿಧಾನ ಬದಲಿಸುವ ಹೇಳಿಕೆ ನೀಡುತ್ತಿದ್ದರೂ, ನರೇಂದ್ರ ಮೋದಿ ಪರೋಕ್ಷವಾಗಿ ದಲಿತರು ಮತ್ತು ಮುಸ್ಲಿಂರ ದಮನಕ್ಕೆ ಸಹಕಾರ ನೀಡುತ್ತಿದ್ದಾರೆ. ಸಿದಾಟಛಿಂತ ರಹಿತ ಆರ್‌ಎಸ್‌ಎಸ್‌, ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳಿಂದ ಸಂವಿಧಾನವನ್ನು ಬದಲಿಸಲು ಬಿಡುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಕರ್ನಾಟಕದ ಚುನಾವಣೆ ಕೇವಲ ಪಕ್ಷ ಪಕ್ಷಗಳ ಚುನಾವಣೆಯಲ್ಲ. ಸಿದ್ಧಾಂತ ರಹಿತ ಬಿಜೆಪಿ, ಸಂಘ ಪರಿವಾರಗಳು ಮತ್ತು ಮಹಾತ್ಮ ಗಾಂಧಿ ಅವರ ತತ್ವ ಸಿದ್ಧಾಂತಗಳ ಮೇಲಿನ ಮೌಲ್ಯದ ನಡುವಿನ ಚುನಾವಣೆಯಾಗಿದೆ. ಇದರ ನಡುವೆ ಜೆಡಿಎಸ್‌ ಪಕ್ಷ ಅವಕಾಶವಾದಿ ರಾಜಕಾರಣಕ್ಕೆ ಅಣಿಯಾಗಿದೆ ಎಂದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.