ಬೆಂಗಳೂರು: ಮೆಟ್ರೋ ಎಸ್ಕಲೇಟರ್ ನಿಂದ ಬಿದ್ದು 2 ವರ್ಷದ ಮಗು ಸಾವು
Team Udayavani, Jan 28, 2019, 5:42 AM IST
ಬೆಂಗಳೂರು:ಶ್ರೀರಾಮಪುರ ಮೆಟ್ರೋ ನಿಲ್ದಾಣದಲ್ಲಿ ಚಲಿಸುತ್ತಿದ್ದ ಎಸ್ಕಲೇಟರ್ ನಿಂದ ಬಿದ್ದಿದ್ದ 2ವರ್ಷದ ಪುಟ್ಟ ಮಗು ಹಾಸಿನಿ ಚಿಕಿತ್ಸೆ ಫಲಕಾರಿಯಾಗದೆ ಇಂದಿರಾಗಾಂಧಿ ಆಸ್ಪತ್ರೆಯಲ್ಲಿ ಸೋಮವಾರ ಸಾವನ್ನಪ್ಪಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಭಾನುವಾರ ರಾತ್ರಿ ಅಜ್ಜನ ಜೊತೆ ತೆರಳಿದ್ದ 2ವರ್ಷದ ಹೆಣ್ಣು ಮಗುವೊಂದು ಆಯತಪ್ಪಿ ಎಸ್ಕಲೇಟರ್ ನಿಂದ ಕೆಳಗೆ ಬಿದ್ದು ಮಗು ಗಂಭೀರವಾಗಿ ಗಾಯಗೊಂಡಿತ್ತು. ಕೂಡಲೇ ಮಗುವನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಅಜ್ಜ, ಅಜ್ಜಿ ಜೊತೆ ತೆರಳುತ್ತಿದ್ದ ವೇಳೆ ಮಗು ಆಯತಪ್ಪಿ ಬಿದ್ದ ಘಟನೆ ನಡೆದಿದ್ದು, ಮೆಟ್ರೋ ಅಧಿಕಾರಿಗಳು ಸೂಕ್ತವಾದ ಸುರಕ್ಷತಾ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಗುವಿನ ಅಜ್ಜ ನೀಡಿದ ದೂರಿನ್ವಯ ಪೊಲೀಸರು ಮೆಟ್ರೋ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ