ಟಿಪ್ಪು ಜಯಂತಿ ವಿರುದ್ಧ ಹೋರಾಟ ನಿಲ್ಲದು
Team Udayavani, Oct 26, 2017, 7:53 AM IST
ಬೆಂಗಳೂರು: “ಟಿಪ್ಪು ಸುಲ್ತಾನ್ ಕುರಿತು ರಾಷ್ಟ್ರಪತಿಗಳು ವಜ್ರಮಹೋತ್ಸವ ಭಾಷಣದಲ್ಲಿ ಗುಣಗಾನ ಮಾಡಿರುವುದಕ್ಕೆ
ಹೆಚ್ಚಿನ ಮಹತ್ವ ನೀಡಬೇಕಾಗಿಲ್ಲ. ಅದು ರಾಷ್ಟ್ರಪತಿಯವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅವರ ಭಾಷಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರಪತಿಗಳು ಟಿಪ್ಪು ಸುಲ್ತಾನ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಕ್ಕೆ “ಉದಯ ವಾಣಿ”ಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, “ರಾಷ್ಟ್ರಪತಿ ಭಾಷಣ ವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸುವುದಿಲ್ಲ. ಈ ಮೊದಲೇ ನಿರ್ಧರಿಸಿದ್ದಂತೆ ಟಿಪ್ಪು ವಿರೋಧಿ ಹೋರಾಟವನ್ನು ರಾಜ್ಯಾದ್ಯಂತ ನಡೆಸಲಾಗುವುದು’ ಎಂದಿದ್ದಾರೆ.
ಪರಿಣಾಮ ಬೀರದು: ಪಕ್ಷದ ವ್ಯಕ್ತಿಯಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರೆ ನಮಗೆ ಮುಜುಗರವಾಗುತ್ತಿತ್ತು. ಪಕ್ಷಾತೀತ ಹುದ್ದೆಯಲ್ಲಿರುವ ರಾಷ್ಟ್ರಪತಿಗಳು ಆಡಿದ ಮಾತು ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದ್ದಾರೆ. ನೀವೇ ಟಿಪ್ಪುವಿನ ವೇಷ ಹಾಕಿದ್ದೀರಂತಲ್ಲ? ಎಂಬ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಶೆಟ್ಟರ್, ಈ ಕುರಿತು ಸಾಕ್ಷ್ಯಾಧಾರಗಳನ್ನು ಮುಖ್ಯ ಮಂತ್ರಿ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು