24 ಗಂಟೆಗಳಲ್ಲಿ ಎಫ್ಐಆರ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು


Team Udayavani, Oct 12, 2022, 7:35 AM IST

24 ಗಂಟೆಗಳಲ್ಲಿ ಎಫ್ಐಆರ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು

ಬೆಂಗಳೂರು: “ಪ್ರಥಮ ವರ್ತಮಾನ ವರದಿ’ (ಎಫ್ಐಆರ್‌) ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಹಾಕಲು ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕೆಂದು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಈ ವಿಚಾರವಾಗಿ ವಕೀಲ ಎಸ್‌. ಉಮಾಪತಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕಾಯುಕ್ತ ಎಡಿಜಿಪಿ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಎಫ್ಐಆರ್‌ ದಾಖಲಾದ 24 ಗಂಟೆಗಳಲ್ಲಿ ಅದನ್ನು ಸಂಬಂಧಪಟ್ಟ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು 2016ರಲ್ಲಿ ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ಇದನ್ನು ಸಿಬಿಐ ಸೇರಿದಂತೆ ಉಳಿದ ತನಿಖಾ ಸಂಸ್ಥೆಗಳು ಪಾಲಿಸುತ್ತಿವೆ. ಸುಪ್ರೀಂಕೋರ್ಟ್‌ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ 2018ರಲ್ಲಿ ಎಸಿಬಿ ಮತ್ತು ಬಿಎಂಟಿಎಫ್ ಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಅದನ್ನು ಎಸಿಬಿ ಪಾಲಿಸುತ್ತಾ ಬಂದಿತ್ತು.

ಈ ಮಧ್ಯೆ, ಎಸಿಬಿಯನ್ನು ರದ್ದುಗೊಳಿಸಿ 2022ರ ಆ.11ರಂದು ತೀರ್ಪು ನೀಡಿದ ಹೈಕೋರ್ಟ್‌, ಲೋಕಾಯುಕ್ತದ ಅಧಿಕಾರವನ್ನು ಮರುಸ್ಥಾಪಿಸಿ ಆದೇಶಿಸಿದೆ. ಆದರೆ, ಎಫ್ಐಆರ್‌ ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್‌ ಆದೇಶವನ್ನು ಲೋಕಾಯುಕ್ತ ಪೊಲೀಸರು ಪಾಲಿಸುತ್ತಿಲ್ಲ. ಇದರಿಂದ ಮುಂದಿನ ಕಾನೂನು ಪ್ರಕ್ರಿಯೆಗೆ ದೂರುದಾರರು, ಕಕ್ಷಿದಾರರು ಮತ್ತು ವಕೀಲರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ.

ಈ ಬಗ್ಗೆ ಅರ್ಜಿದಾರರು 2022ರ ಸೆ.19ರಂದು ದೂರು ಕೊಟ್ಟಿದ್ದರೂ ಯಾವುದೇ ಕ್ರಮ ಆಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಆದ್ದರಿಂದ ಎಫ್ಐಆರ್‌ ದಾಖಲಾದ 24 ಗಂಟೆಗಳಲ್ಲಿ ಅದನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.