ಡ್ರಗ್ಸ್‌ ದಂಧೆಕೋರರ ವಿರುದ್ಧ ಗೂಂಡಾ ಕಾಯ್ದೆ


Team Udayavani, Jul 14, 2018, 11:08 AM IST

drugs.jpg

ವಿಧಾನಸಭೆ: ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಮಾದಕ ವಸ್ತು ಮಾರಾಟ ಜಾಲವನ್ನು ಮಟ್ಟ ಹಾಕಲು ಗೂಂಡಾ ಕಾಯ್ದೆ ಜಾರಿಗೊಳಿಸುವುದಾಗಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. 

ನಿಯಮ 69ರ ಅಡಿ ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಸೇರಿದಂತೆ ಬಿಜೆಪಿ ಸದಸ್ಯರು ಚರ್ಚಿಸಿದ ವಿಷಯದ ಮೇಲೆ ಉತ್ತರ ನೀಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ನಗರ ಭಾಗಗಳಲ್ಲಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಡ್ರಗ್ಸ್‌ ಮಾಫಿಯಾ ವ್ಯಾಪಕವಾಗಿ ಹರಡಿದ್ದು, ಇದನ್ನು ತಡೆಗಟ್ಟಲು ಯಾವುದೇ ಮುಲಾಜಿಲ್ಲದೇ ಗೂಂಡಾ ಕಾಯ್ದೆ ವ್ಯಾಪ್ತಿ ಅಡಿಯಲ್ಲಿ ಬಂಧಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಬೆಂಗಳೂರಿನ ಹೊರ ವಲಯದಲ್ಲಿ ಫಾರ್ಮಾಸಿಟಿ ಹೆಸರಿನಲ್ಲಿ ಡ್ರಗ್ಸ್‌ ಮಾತ್ರೆಗಳನ್ನು ತಯಾರಿಸಿ ವಿದೇಶಗಳಿಗೆ ರಪು¤ ಮಾಡುತ್ತಿದ್ದಾರೆ. ಮಾದಕ ವಸ್ತು ಮಾರಾಟಗಾರರನ್ನು ನಿಯಂತ್ರಿಸಲು ಮಲೇಷಿಯಾದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗುತ್ತದೆ. ಭಾರತದಲ್ಲಿ ಯಾವುದೋ ಒಂದು ರಾಜ್ಯದಲ್ಲಿ ಆ ರೀತಿ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗಬೇಕು. ಕೇಂದ್ರ ಸರ್ಕಾರ. ಡ್ರಗ್ಸ್‌ ಮಾರಾಟಗಾರರನ್ನು ನಿಯಂತ್ರಿಸಲು ಗಲ್ಲು ಶಿಕ್ಷೆ ವಿಧಿಸುವ ಕುರಿತು ಸಂಸತ್ತಿನಲ್ಲಿ ಚರ್ಚಿಸಿ ಸೂಕ್ತ ಕಾನೂನು ತರಬೇಕು ಎಂದು ಮನವಿ ಮಾಡಿದರು.

ಈಗಾಗಲೇ ರಾಜ್ಯದಲ್ಲಿ ಪ್ರತಿ ಪೊಲಿಸ್‌ ಠಾಣೆಗಳಲ್ಲಿ ಡ್ರಗ್ಸ್‌ ಮಾರಾಟಗಾರರ ಪತ್ತೆ ಹಚ್ಚಲು ಪ್ರತ್ಯೇಕ ಘಟಕ ಇದೆ. ಈಗಾಗಲೇ ಹಿರಿಯ ಪೊಲಿಸ್‌ ಅಧಿಕಾರಿಗಳ ಸಭೆ ನಡೆಸಿ, ಮಾದಕ ವಸ್ತು ಮಾರಾಟ ಜಾಲದ ಬಗ್ಗೆ ಪೊಲಿಸರಿಗೂ ಮೊದಲು ಮಾಧ್ಯಮ ಅಥವಾ ಸಾರ್ವಜನಿಕರಿಗೆ ಮಾಹಿತಿ ದೊರೆತರೆ ಸಂಬಂಧ ಪಟ್ಟ ಅಧಿಕಾರಿಗಳ ತಲೆದಂಡವಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಶೀಘ್ರವೇ ಶಾಲಾ ಕಾಲೇಜು ಪ್ರಾಂಶುಪಾಲರ ಸಭೆ ಕರೆದು ಚರ್ಚಿಸಲಾಗುವುದು ಎಂದು ಹೇಳಿದರು.  

ಇದಲ್ಲದೆ ವಿದ್ಯಾಭ್ಯಾಸಕ್ಕೆ ವಿದೇಶಗಳಿಂದ ಆಗಮಿಸಿ ವೀಸಾ ಅವಧಿ ಮುಗಿದರೂ ಇಲ್ಲಿಯೇ ವಾಸವಾಗಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚಲು ಪ್ರತಿಯೊಂದು ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆ ರೀತಿಯ ಪ್ರಜೆಗಳನ್ನು ವಾಪಸ್‌ ಕಳೂಹಿಸಲಾಗುವುದು ಎಂದು ಹೇಳಿದರು. 

ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಮಾಜಿ ಉಪ ಮುಖ್ಯಮಂತ್ರಿ ಆರ್‌. ಅಶೋಕ್‌, ರಾಜ್ಯದಲ್ಲಿ 4 ರಿಂದ 5 ಲಕ್ಷ ವಿದ್ಯಾರ್ಥಿಗಳು ಹಾಗೂ ಯುವ ಸಮೂಹ ಡ್ರಗ್ಸ್‌ ವ್ಯಸನಿಗಳಾಗಿದ್ದಾರೆ. ಅಂತಹ ಮಕ್ಕಳಿಂದ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದೆ. ರಾಜಧಾನಿಯಲ್ಲಿ ಸುಮಾರು 40 ರಿಂದ 50 ಡ್ರಗ್ಸ್‌ ಮಾರಾಟ ಮಾಡುವ ಮಾಫಿಯಾದ ಲೀಡರ್‌ಗಳಿದ್ದಾರೆ. ಅವರ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿದರೆ, ಅವರಿಗೆ ಎಚ್ಚರಿಕೆ ಸಂದೇಶ ರವಾನಿಸಿದಂತಾಗುತ್ತದೆ ಎಂದರು.

ಅಲ್ಲದೇ ಉಗಾಂಡಾದಂತಹ ದೇಶಗಳಿಂದ ಭಾರತಕ್ಕೆ ವಿದ್ಯಾಭ್ಯಾಸದ ನೆಪದಲ್ಲಿ ಬರುವ ಯುವಕರು ಮಾತ್ರೆಗಳ ರೂಪದಲ್ಲಿ ಡ್ರಗ್ಸ್‌ ತೆಗೆದುಕೊಂಡು ಬರುತ್ತಿದ್ದಾರೆ.  ಒಬ್ಬ ಮಹಿಳೆ ಲಕ್ಸ್‌ ಸೋಪ್‌ನಲ್ಲಿ ಕೊಕೇನ್‌ ತೆಗೆದುಕೊಂಡು ಬಂದಿದ್ದರು. ಕಳೆದ ಎರಡು ಮೂರು ವರ್ಷದಲ್ಲಿ ಡ್ರಗ್ಸ್‌ ರಾಕೆಟ್‌ ವ್ಯಾಪಕವಾಗಿ ಹಬ್ಬಿದೆ. ಪಂಜಾಬ್‌ನಲ್ಲಿ ಸರ್ಕಾರಿ ಉದ್ಯೋಗಿಗಳೂ ಕಚೇರಿಗೆ ಬರಬೇಕಾದರೆ ಡ್ರಗ್ಸ್‌ ತಪಾಸಣೆಗೆ ಒಳಗಾಗುವ ಪರಿಸ್ಥಿತಿ ಇದೆ. ರಾಜ್ಯದಲ್ಲಿಯೂ ಅಂತಹ ಪರಿಸ್ಥಿತಿ ಬರದಂತೆ ಕಠಣಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 

ಇತ್ತೀಚೆಗೆ ಬೆಂಗಳೂರಿನ ಬನ್ನೇರುಘಟ್ಟದ ಫಾರಂಗಳಲ್ಲಿಯೇ ನೈಜಿರಿಯಾದಿಂದ ಗಾಂಜಾ, ಕೊಕೆನ್‌ ಬೀಜ ತಂದು ಬೆಳೆಯಲಾಗುತ್ತಿದೆ. ಕೇರಳ ಸರ್ಕಾರ ಡ್ರಗ್ಸ್‌ ಮಾಫಿಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಶೇಷ ತನಿಖಾ ತಂಡ ಹಾಗೂ ಕೋರ್ಟ್‌ನಲ್ಲಿ ವಾದ ಮಾಡಲು ತರಬೇತಿ ಪಡೆದ ವಕೀಲರ ತಂಡವನ್ನೂ ನೇಮಿಸಿದೆ. ರಾಜ್ಯದಲ್ಲಿಯೂ ಅದೇ ಮಾದರಿಯಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಆಗ್ರಹಿಸಿದರು. 

ಡ್ರಗ್ಸ್‌ ಮಾರಾಟ ಪ್ರಕರಣದಲ್ಲಿ ಭಾಗಿಯಾದವರನ್ನು ಪೊಲಿಸರು ಬಂಧಿಸಿದರೂ ಹದಿನೈದು ದಿನದಲ್ಲಿ ಮತ್ತೆ ಬೇಲ್‌ಮೇಲೆ ಹೊರಗೆ ಬರುತ್ತಾರೆ. ಮತ್ತೆ ಅದೇ ಕೆಲಸ ಮಾಡುತ್ತಾರೆ. ಅವರ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವುದು ಅಗತ್ಯವಿದೆ ಎಂದು ಹೇಳಿದರು. 

ಆರೋಗ್ಯ ಇಲಾಖೆಯವರು ಸುತ್ತೋಲೆ ಹೊರಡಿಸಿ ಪೊಲಿಸ್‌ ಇಲಾಖೆ ಸರಿಯಾಗಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದೆ. ಇದು ಹಾಸ್ಯಾಸ್ಪದ ಎಂದು ಹೇಳಿದರು. ಬಿಜೆಪಿಯ ಅರವಿಂದ ಲಿಂಬಾವಳಿ, ವಿ. ಸೊಮಣ್ಣ, ರವಿ ಸುಬ್ರಮಣ್ಯ, ಆರ್‌. ಪೂರ್ಣಿಮಾ, ಡಾ. ಅಶ್ವತ್ಥ್ ನಾರಾಯಣ ಕಾಂಗ್ರೆಸ್‌ನ ಎನ್‌.ಎ. ಹ್ಯಾರಿಸ್‌ ಮಾತನಾಡಿದರು. 

ಡ್ರಗ್ಸ್‌ ಪತ್ತೆ ಹಚ್ಚುವ ಜರ್ಮನ್‌ ನಾಯಿ: ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ತಾವು ಜರ್ಮನಿಗೆ ಹೋದಾಗ ಅಲ್ಲಿನ ನಾಯಿ ಬಂದು ಅವರನ್ನು ಮೂಸಿ ನೋಡಿತಂತೆ, ಆ ನಾಯಿ ಕನಿಷ್ಠ ಆರು ತಿಂಗಳ ಮುಂಚೆ ಯಾವುದಾದರೂ ಮಾದಕ ದ್ರವ್ಯ ತೆಗೆದುಕೊಂಡರೆ ಪತ್ತೆ ಹಚ್ಚುತ್ತದೆಯಂತೆ ಎಂದು ಹೇಳಿದರು. ಆ ನಾಯಿಯನ್ನು ರಾಜ್ಯಕ್ಕೂ ತರೆಸಿ ಎಂದು ಅರವಿಂದ ಲಿಂಬಾವಳಿ ಸಲಹೆ ನೀಡಿದರು. ನಮ್ಮ ನಾಯಿಗಳಿಗೇ ತರಬೇತಿ ನೀಡಿದರೆ, ಆ ಕೆಲಸ ಮಾಡುತ್ತವೆ ಎಂದು ಪರಮೇಶ್ವರ್‌ ಹೇಳಿದರು. ನಮ್ಮ ನಾಯಿಗಳು ಪ್ರತಿಪಕ್ಷದವರನ್ನು ಮಾತ್ರ ಪತ್ತೆಹಚ್ಚುತ್ತವೆ ಎಂದರು.

ಡ್ರಗ್ಸ್‌ ಮಾರಾಟ ಜಾಲದ ಬಗ್ಗೆ ಪೊಲಿಸರಿಗೆ ಸ್ಪಷ್ಟವಾಗಿ ಗೊತ್ತಿರುತ್ತದೆ. ದೂರು ಕೊಟ್ಟರೆ ಕ್ರಮ ತೆಗೆದುಕೊಂಡಂತೆ ಮಾಡುತ್ತಾರೆ. ಈ ವ್ಯವಹಾರ ಹೀಗೆ ಮುಂದುವರೆಯಲು ಬಿಟ್ಟರೆ, ದೇಶ ಹಾಳು ಮಾಡಲು ಪಾಕಿಸ್ತಾನ ಬೇಡ. ನರ ಸತ್ತ ಯುವ ಜನಾಂಗ ಸೃಷ್ಠಿ ಮಾಡಿದರೆ ದೇಶ ಹಾಳಾಗುವುದರಲ್ಲಿ ಸಂದೇಹವಿಲ್ಲ. ಕರ್ನಾಟಕವನ್ನು ಡ್ರಗ್ಸ್‌ ಫ್ರೀ ರಾಜ್ಯ ಎಂದು ಹೇಳುವಂತೆ ಮಾಡಬೇಕು.
-ಸುರೇಶ್‌ ಕುಮಾರ್‌, ಬಿಜೆಪಿ ಸದಸ್ಯ

ಡ್ರಗ್ಸ್‌ ಹಾವಳಿ ಕುರಿತು ಹಿರಿಯ ಅಧಿಕಾರಿಗಳ ಸಭೆ ಕರೆದು. ಜಿಲ್ಲಾ ಮಟ್ಟದಲ್ಲಿ ಎಸ್ಪಿಗಳಿಗೆ ಸೂಚನೆ ಕೊಡಿ, ಡ್ರಗ್ಸ್‌ ಮಾಫಿಯಾ ಮಟ್ಟ ಹಾಕುವ ಅಧಿಕಾರಿಗಳಿಗೆ ಅವಾರ್ಡ್‌ ಕೊಡುವ ಮೂಲಕ ಪ್ರೋತ್ಸಾಹ ನೀಡಬೇಕು. ಜೈಲುಗಳಿಗೂ ಅವ್ಯಾಹತವಾಗಿ ಡ್ರಗ್ಸ್‌ ಸಾಗಾಟ ಆಗುವುದನ್ನೂ ತಡೆಯಬೇಕು.
-ಬಿ.ಎಸ್‌. ಯಡಿಯೂರಪ್ಪ, ಪ್ರತಿಪಕ್ಷದ ನಾಯಕ. 

ರಾಜ್ಯ ಸರ್ಕಾರ ಪೊಲಿಸ್‌ ಅಧಿಕಾರಿಗಳು ಮತ್ತು ಶಾಲಾ ಕಾಲೇಜು ಪ್ರಾಂಶುಪಾಲರ ಸಭೆ ಕರೆದು ಕಠಿಣ ಎಚ್ಚರಿಕೆ ನೀಡಬೇಕು. ಈ ರೀತಿಯ ಅಪರಾಧಗಳಲ್ಲಿ ತೊಡಗುವವರ ಬಗ್ಗೆ ಶಿಫಾರಸ್ಸು ಮಾಡುವುದನ್ನು ಬಿಟ್ಟರೆ ಶೇಕಡಾ 50 ರಷ್ಟು ಅಪರಾಧಗಳು ಕಡಿಮೆಯಾಗುತ್ತವೆ.
-ಕೃಷ್ಣಾ ರೆಡ್ಡಿ, ಉಪ ಸಭಾಧ್ಯಕ್ಷ. 

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.