ಎಚ್ಡಿಕೆಗೆ ಷಷ್ಠ್ಯಬ್ಧಿ ಸಂಭ್ರಮ
Team Udayavani, Dec 14, 2019, 3:04 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಶುಕ್ರವಾರ ಷಷ್ಠ್ಯಬ್ಧಿ ಸಂಭ್ರಮ. ಬರುವ ಡಿ.16ರಂದು ಕುಮಾರಸ್ವಾಮಿ ಅವರು 60 ವಸಂತಗಳನ್ನು ಪೂರೈಸಲಿದ್ದಾರೆ. 15ರ ನಂತರ ಧನುರ್ಮಾಸ ಆರಂಭವಾಗಲಿದ್ದು, ಸಂಕ್ರಾಂತಿವರೆಗೂ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ಕೈಗೊಳ್ಳುವಂತಿರಲಿಲ್ಲ. ಜತೆಗೆ ಶುಭದಿನ ಆಗಿದ್ದರಿಂದ ಶುಕ್ರವಾರ ಷಷ್ಠ್ಯಬ್ಧಿ ಪೂಜೆ ಹಮ್ಮಿಕೊಳ್ಳಲಾಗಿತ್ತು.
ಈ ಹಿನ್ನೆಲೆಯಲ್ಲಿ ಜೆ.ಪಿ. ನಗರದಲ್ಲಿರುವ ಅವರ ನಿವಾಸ ದಲ್ಲಿ ಸಂಭ್ರಮ ಮನೆ ಮಾಡಿತ್ತು. ಬೆಳಗ್ಗೆ 9ಕ್ಕೆ ಶುರುವಾದ ಧಾರ್ಮಿಕ ಕಾರ್ಯಕ್ರಮದಲ್ಲಿ ಹೋಮ-ಹವನ, ಕಳಶ ಪೂಜೆ ಒಳಗೊಂಡಂತೆ ಹಲವು ಪೂಜಾ ವಿಧಾನಗಳು ಜರುಗಿದವು. ಮಧ್ಯಾಹ್ನ 1ರವರೆಗೂ ನಡೆದ ಪೂಜೆಯಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಸೇರಿ ಕುಟುಂಬದ ಸದಸ್ಯರೆಲ್ಲರೂ ಭಾಗವಹಿಸಿದ್ದರು.
ಮಧ್ಯಾಹ್ನ ತಂದೆ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ದಂಪತಿ ಸಮೇತ ಆಗಮಿಸಿ, ಕುಮಾರಸ್ವಾಮಿ ಅವರನ್ನು ಆಶೀರ್ವದಿಸಿದರು. ಷಷ್ಠ್ಯಬ್ಧಿ ಪೂಜೆಯ ನೆಪದಲ್ಲಿ ಎಲ್ಲಾ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೂ ಆಹ್ವಾನ ನೀಡಲಾಗಿತ್ತು. ಈ ಮೂಲಕ ಉಪ ಚುನಾವಣೆ ಸೋಲಿನ ಬಳಿಕ ಶಾಸಕರ ಜತೆ ಮೊದಲ ಬಾರಿಗೆ ಕುಮಾರಸ್ವಾಮಿ ಮುಖಾಮುಖೀಯಾದರು. ಕೆಲಹೊತ್ತು ಶಾಸಕರೊಂದಿಗೆ ಚರ್ಚೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ