ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಸರ್ಕಾರ ಸೂಕ್ತ ಚಿಕಿತ್ಸೆ ಕಲ್ಪಿಸಬೇಕು:ಎಚ್ ಡಿಕೆ
Team Udayavani, Jul 25, 2020, 12:27 PM IST
ಬೆಂಗಳೂರು: ಆಧುನಿಕ ಭಗೀರಥ ಎಂದೇ ಹೆಸರಾದ ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಸದ್ಯ ಗಂಭೀರವಾಗಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ ಡಿಕೆ, ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದರು.
ಮನ್ ಕಿ ಬಾತ್ ನಲ್ಲಿ ಕೂಡ ಪ್ರಧಾನಿಯವರು ಕೊಂಡಾಡಿದ್ದಾರೆ. ಮುಖ್ಯಮಂತ್ರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹೊಗಳಿ ಹೊನ್ನಶೂಲಕ್ಕೆ ಏರಿಸಿದರೆ ಸಾಲದು. ಅನಾರೋಗ್ಯದಿಂದ ಅವರು ಸೋತು ಸುಣ್ಣವಾಗಿರುವಾಗ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕಿದೆ ಎಂದು ಎಚ್ ಡಿಕೆ ಹೇಳಿದರು.
ಮಂಡ್ಯದ ಕಾಮೇಗೌಡರಿಗೆ ಕೆಲವು ದಿನಗಳ ಹಿಂದೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.
ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ.
1/2— H D Kumaraswamy (@hd_kumaraswamy) July 25, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ದಾವೋಸ್ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ
ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ
ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ
ರಾಜ್ಯದಲ್ಲಿ ಕಾಂಗ್ರೆಸ್ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ
ಶಿರಸಿಯ ರಂಗಭೂಮಿ ಕಲಾವಿದೆ ಶೀತಲ್ ಶ್ರೀಪಾದ ಭಟ್ ಅವರಿಗೆ ಕೆನಡಾದ ಲಿಟರರಿ ಅವಾರ್ಡ್